Home
ಸುದ್ದಿಜಾಲ

ರೆಡ್ಮಿ ನೋಟ್ 11 ಫೋನ್‌ ಲಾಂಚ್!..ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿದೆ ಈ ಫೋನ್?

ಜನಪ್ರಿಯ ಶಿಯೋಮಿ ಕಂಪನಿಯು ರೆಡ್ಮಿ ನೋಟ್ ಸರಣಿ ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದೆ. ಇತ್ತೀಚಿಗಷ್ಟೆ ಬಿಡುಗಡೆ ಮಾಡಿದ ಶಿಯೋಮಿ ರೆಡ್ಮಿ ನೋಟ್ 10 ಸರಣಿಯು ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿದ್ದು, ಆ ಲಿಸ್ಟ್‌ಗೆ ಈಗ ನೂತನವಾಗಿ 'ರೆಡ್ಮಿ ನೋಟ್ 11' ಫೋನ್ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯು ರೆಡ್ಮಿ ನೋಟ್ 11, ರೆಡ್ಮಿ ನೋಟ್ 11 ಪ್ರೊ ಮತ್ತು ರೆಡ್ಮಿ ನೋಟ್ 11 ಪ್ರೊ ಪ್ಲಸ್‌ ಮಾಡೆಲ್‌ಗಳನ್ನು ಒಳಗೊಂಡಿದ್ದು, ಮೊಬೈಲ್ ಮಾರುಕಟ್ಟೆಯ ಗಮನ ಸೆಳೆದಿದೆ.

ರೆಡ್ಮಿ ನೋಟ್ 11 ಫೋನ್‌ ಲಾಂಚ್!..ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿದೆ ಈ ಫೋನ್?

ಹೌದು, ಶಿಯೋಮಿ ಕಂಪನಿಯು ಚೀನಾದಲ್ಲಿ ರೆಡ್ಮಿ ನೋಟ್ 11 ಫೋನ್ ಸರಣಿಯನ್ನು ಲಾಂಚ್ ಮಾಡಿದೆ. ಈ ಸರಣಿಯಲ್ಲಿನ ರೆಡ್ಮಿ ನೋಟ್ 11 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ Dimensity 810 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಹಾಗೆಯೇ 50 ಮೆಗಾ ಪಿಕ್ಸಲ್ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದ್ದು, ಮೊಬೈಲ್ ಪ್ರಿಯರನ್ನು ಹೆಬ್ಬೇರಿಸುವಂತೆ ಮಾಡಿದೆ. ಜೊತೆಗೆ 13 ಮೆಗಾ ಪಿಕ್ಸಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಹಾಗಾದರೇ ರೆಡ್ಮಿ ನೋಟ್ 11 ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 11 ಫೋನ್‌ ಲಾಂಚ್!..ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿದೆ ಈ ಫೋನ್?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, AMOLED ಮಾದರಿಯನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಪಡೆದಿದ್ದು, ಅಧಿಕ ಬ್ರೈಟ್ನೆಸ್‌ ನಿಟ್ಸ್ ಹೊಂದಿದೆ.

ಪ್ರೊಸೆಸರ್‌ ಪವರ್
ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ Dimensity 810 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಓಎಸ್‌ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 128GB, 6GB + 128GB ಮತ್ತು 8GB + 128GB ಆಂತರೀಕ ಸ್ಟೋರೇಜ್ ವೇರಿಯಂಟ್‌ ಸಾಮರ್ಥ್ಯದ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಫೋನ್ 5G ಸಪೋರ್ಟ್‌ ಪಡೆದಿದೆ.

ರೆಡ್ಮಿ ನೋಟ್ 11 ಫೋನ್‌ ಲಾಂಚ್!..ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿದೆ ಈ ಫೋನ್?

ಕ್ಯಾಮೆರಾ ಸೆನ್ಸಾರ್ ವಿಶೇಷ
ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದ್ದು, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G/5G VOLTE, ವೈ-ಫೈ, ಬ್ಲೂಟೂತ್ v5.0, IP53 ರೇಟೆಡ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ
ಶಿಯೋಮಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್ 4GB RAM + 128GB ವೇರಿಯಂಟ್‌ ಬೆಲೆಯು ಚೀನಾದಲ್ಲಿ CNY 1,199 (ಭಾರತದಲ್ಲಿ ಅಂದಾಜು 14,000ರೂ) ಎನ್ನಲಾಗಿದೆ. ಅದೇ ರೀತಿ 6GB + 128GB ವೇರಿಯಂಟ್‌ ಬೆಲೆಯು CNY 1,299 (ಭಾರತದಲ್ಲಿ ಅಂದಾಜು 16,400ರೂ) ಆಗಿರಲಿದೆ. ಹಾಗೆಯೇ 8GB + 128GB ವೇರಿಯಂಟ್‌ ಬೆಲೆಯು CNY 1,499 (ಭಾರತದಲ್ಲಿ ಅಂದಾಜು 18,700ರೂ) ಎನ್ನಲಾಗಿದೆ. ಇನ್ನು ಈ ಫೋನ್ ಬ್ಲ್ಯಾಕ್, ಶಾಲೋ ಡ್ರೀಮ್ ಗ್ಯಾಲಕ್ಸಿ ಮತ್ತು ಸ್ಲೈಟ್ ಮಿಂಟ್ ಬಣ್ಣಗಳ ಆಯ್ಕೆ ಪಡೆದಿದೆ. ಭಾರತದಲ್ಲಿ ಯಾವಾಗ ಎಂಟ್ರ ನೀಡಲಿದೆ ಎನ್ನುವ ಬಗ್ಗೆ ಕಂಪನಿಯು ಮಾಹಿತಿ ಹೊರಹಾಕಿಲ್ಲ.

ಹಾಗೆಯೇ ರೆಡ್ಮಿ ನೋಟ್ 11 ಪ್ರೊ 6GB + 128GB ಬೇಸ್‌ ವೇರಿಯಂಟ್ ದರವು ಚೀನಾದಲ್ಲಿ CNY 1,599 (ಭಾರತದಲ್ಲಿ ಅಂದಾಜು 18,700ರೂ.) ಎನ್ನಲಾಗಿದೆ. ಅದೇ ರೀತಿ ರೆಡ್ಮಿ ನೋಟ್ 11 ಪ್ರೊ ಪ್ಲಸ್ ಫೋನಿನ 6GB + 128GB ಬೇಸ್‌ ವೇರಿಯಂಟ್ ಬೆಲೆಯು ಚೀನಾದಲ್ಲಿ CNY 1,899 (ಭಾರತದಲ್ಲಿ ಅಂದಾಜು 22,200ರೂ) ಎಂದು ಹೇಳಲಾಗಿದೆ.

Best Mobiles in India

English summary
Redmi Note 11 With MediaTek Dimensity 810 Chipset Launched: Price, specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+