REDMI: 128 GB ಸ್ಟೋರೇಜ್‌ನ ಈ ಬಜೆಟ್ ಫೋನ್ ಅಗ್ಗದ ಬೆಲೆಗೆ ಲಭ್ಯ! 108 MP ಕ್ಯಾಮೆರಾ ...
ರೆಡ್ಮಿ ಸ್ಮಾರ್ಟ್‌ಫೋನ್‌ಗಳು (Redmi smartphone) ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್ ಆಯ್ಕೆ ಹೊಂದಿರುತ್ತವೆ. ಅದರಲ್ಲೂ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಹೆಚ್ಚು ಖರೀದಿ ಮಾಡಲಾಗುತ್ತಿದ್ದು. ಈ ಬೆಳವಣಿಗೆ ನಡುವೆ ಈ ವಿಭಾಗದ ಫೋನ್ ವೊಂದಕ್ಕೆ ಭಾರೀ ಆಫರ್ ನೀಡಲಾಗಿದೆ.
ಹೌದು, ರೆಡ್ಮಿ ನೋಟ್ 11s ಸ್ಮಾರ್ಟ್‌ಫೋನ್ (Redmi Note 11s smartphone) ಇದೀಗ ಭಾರೀ ಆಫರ್ ನಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 128 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆಯುವ ಮೂಲಕ ಉತ್ತಮ ಎನಿಸಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಭಾರತದಲ್ಲಿ ಇದರ ಆಫರ್ ಬೆಲೆ ವಿವರ ಎಷ್ಟು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ರೆಡ್ಮಿ ನೋಟ್ 11s ಸ್ಮಾರ್ಟ್‌ಫೋನ್ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 21,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 15,490 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಈ ಫೋನ್‌ಗೆ ಪ್ರಮುಖ ಇ-ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್(Flipkart) 29% ರಿಯಾಯಿತಿ ಘೋಷಣೆ ಮಾಡಿದೆ. ಇದರೊಂದಿಗೆ ಬ್ಯಾಂಕ್ ಆಫರ್ ಸಹ ಇದೆ.
ಬ್ಯಾಂಕ್ ಕೊಡುಗೆ ಬಗ್ಗೆ ಹೇಳುವುದಾದರೆ ಈ ಫೋನ್ ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಐಡಿಎಫ್‌ಸಿ ಮೊದಲ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇ 10% ರಿಯಾಯಿತಿ 12,500 ಮತ್ತು ಅದಕ್ಕಿಂತ ಹೆಚ್ಚಿನ ಆರ್ಡರ್‌ಗಳ ಮೇಲೆ ಒನ್‌ಕಾರ್ಡ್ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಇಎಮ್‌ಐ ವ್ಯವಹಾರದ ಮೇಲೆ 750 ರಿಯಾಯಿತಿ ಸಿಗಲಿದೆ. ಹಾಗಿದ್ರೆ, ಈ ಫೋನ್‌ನ ಫೀಚರ್ಸ್ ಕಡೆ ಕಣ್ಣಾಯಿಸೋಣ ಬನ್ನಿ.

ರೆಡ್ಮಿ ನೋಟ್ 11s ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ 90Hz ರಿಫ್ರೆಶ್ ರೇಟ್ ಆಯ್ಕೆ ಹಾಗೂ 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದಿದ್ದು, 84.5% ಸ್ಕ್ರೀನ್-ಟು-ಬಾಡಿ ಅನುಪಾತದೊಂದಿಗೆ ಆಕರ್ಷಕವಾಗಿ ಕಾಣಿಸುತ್ತದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ.
ರೆಡ್ಮಿ ನೋಟ್ 11s ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಮೀಡಿಯಾಟೆಕ್ MT6781 ಹಿಲಿಯೊ G96 (12 nm) ಪ್ರೊಸೆಸರ್ ಬಲ ಪಡೆದಿದ್ದು, ಆಂಡ್ರಾಯ್ಡ್ 11, ಎಂಐಯುಐ 13 ಓಎಸ್ ಅನ್ನು ಇದು ರನ್ ಮಾಡಲಿದೆ. ಇದರೊಂದಿಗೆ ಮಾಲಿ-G57 MC2 ಗ್ರಾಫಿಕ್ಸ್ ಕಾರ್ಡ್ ಆಯ್ಕೆ ಪಡೆದಿದ್ದು, ಈ ಮೂಲಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ 128GB ಇಂಟರ್ ಸ್ಟೋರೇಜ್ ಆಯ್ಕೆ ಹಾಗೂ 8GB RAM ಬಲ ಪಡೆದಿದೆ. ಅದಾಗ್ಯೂ ಹೆಚ್ಚಿನ ಸ್ಟೋರೇಜ್ ಬೇಕು ಎಂದರೆ ಎಸ್‌ಡಿ ಕಾರ್ಡ್ ಸೌಲಭ್ಯ ಪಡೆಯಬಹುದಾಗಿದೆ.
ರೆಡ್ಮಿ ನೋಟ್ 11s ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ, 2 ಮೆಗಾಪಿಕ್ಸೆಲ್‌ಡೆಪ್ತ್ ಕ್ಯಾಮೆರಾ ಹೊಂದಿದ್ದು, ಕ್ಯಾಮೆರಾ ಪ್ರಿಯರ ನೆಚ್ಚಿನ ಫೋನ್ ಆಗಿ ಕರೆಸಿಕೊಂಡಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.

ರೆಡ್ಮಿ ನೋಟ್ 11s ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 33W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ 58 ನಿಮಿಷಗಳಲ್ಲಿ ಬ್ಯಾಟರಿಯನ್ನು ಭರ್ತಿ ಮಾಡಬಹುದಾಗಿದೆ. ಇದರೊಂದಿಗೆ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, A2DP, LE, ಎಫ್‌ಎಮ್ ರೇಡಿಯೋ, ಯುಎಸ್‌ಬಿ ಟೈಪ್ -ಸಿ 2.0 ಸೇರಿದಂತೆ ಅನೇಕ ಕನೆಕ್ಟಿವಿಟಿ ಸೌಲಭ್ಯ ಪಡೆದುಕೊಂಡಿದೆ.


Click it and Unblock the Notifications








