ಭಾರತದಲ್ಲಿ ಆಗಸ್ಟ್‌ 26 ರಂದು ಲಾಂಚ್‌ ಆಗಲಿದೆ ರೆಡ್ಮಿ ನೋಟ್‌ 11SE!

|

ಭಾರತದ ಮಾರುಕಟ್ಟೆಯಲ್ಲಿ ರೆಡ್ಮಿ ಬ್ರಾಂಡ್‌ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಸ್ಥಾನವಿದೆ. ವಿಭಿನ್ನ ಸ್ಮಾರ್ಟ್‌ಫೋನ್‌ಗಳ ಮೂಲಕ ರೆಡ್ಮಿ ಕಂಪೆನಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರೆಡ್ಮಿ ನೋಟ್‌ 11SE ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಆಗಸ್ಟ್‌ 26 ರಂದು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗೋದು ಪಕ್ಕಾ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ ಎಂದು ರೆಡ್ಮಿ ಕಂಪೆನಿ ಹೇಳಿಕೊಂಡಿದೆ.

ರೆಡ್ಮಿ

ಹೌದು, ರೆಡ್ಮಿ ಬ್ರ್ಯಾಂಡ್‌ ತನ್ನ ಹೊಸ ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ ಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G95 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 1,100 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ನೀಡಲಿದೆ. ಈ ಡಿಸ್‌ಪ್ಲೇ ವೀಡಿಯೋ ಕರೆಗಳು ಮತ್ತು ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಹೊಂದಿದ್ದು, ಗೇಮಿಂಗ್‌ಗೆ ಪೂರಕವಾಗಿದೆ ಎನ್ನಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G95 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಮಾಲಿ-G76 GPU ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ 6GB RAM + 64GB, 6GB RAM + 128GB ಮತ್ತು 8GB RAM + 128GB ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ.

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಹೊಂದಿದೆ. ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಮತ್ತು ಡೆಪ್ತ್ ಸೆನ್ಸಾರ್‌ಗಳನ್ನು ಹೊಂದಿವೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 2.4GHz ಮತ್ತು 5GHz ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.0, ಮತ್ತು ಮಲ್ಟಿಫಂಕ್ಷನಲ್ NFC ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಡ್ಯುಯಲ್ ಸ್ಪೀಕರ್‌ಗಳು ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಜೊತೆಗೆ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಫೋನ್‌ IP53 ನೀರು ಮತ್ತು ಧೂಳಿನ ನಿರೋಧಕ ರೇಟಿಂಗ್ ಅನ್ನು ಹೊಂದಿದೆ. ಇದು AI ಫೇಸ್ ಅನ್‌ಲಾಕ್ ಫೀಚರ್ಸ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಇದೇ ಆಗಸ್ಟ್ 26 ರಂದು ಲಾಂಚ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಆಗಸ್ಟ್ 31 ರಂದು ಫ್ಲಿಪ್‌ಕಾರ್ಟ್ ಮೂಲಕ ದೇಶದಲ್ಲಿ ಮಾರಾಟವಾಗಲಿದೆ. ಇದು 6GB RAM + 64GB ಸಂಗ್ರಹಣೆ, 6GB RAM + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಗಳಲ್ಲಿ ಬರುವ ಸಾಧ್ಯತೆ ಇದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಬಿಫ್ರಾಸ್ಟ್ ಬ್ಲೂ, ಕಾಸ್ಮಿಕ್ ವೈಟ್, ಶ್ಯಾಡೋ ಬ್ಲ್ಯಾಕ್ ಮತ್ತು ಥಂಡರ್ ಪರ್ಪಲ್ ಬಣ್ಣಗಗಳ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇನ್ನು ಇದರ ಬೆಲೆಯ ವಿವರ ಪರಿಪೂರ್ಣವಾಗಿ ಬಹಿರಂಗವಾಗಿಲ್ಲ.

Best Mobiles in India

English summary
Redmi Note 11SE is set to launch in India on Friday and will be sold via Flipkart. The Xiaomi subsidiary has revealed the complete specifications of this upcoming device.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X