ವೇಗದ ಪ್ರೊಸೆಸರ್ ಸೌಲಭ್ಯದ ಈ ಸ್ಮಾರ್ಟ್‌ಫೋನಿಗೆ ಬಿಗ್ ಡಿಸ್ಕೌಂಟ್!
ರೆಡ್ಮಿ ಮೊಬೈಲ್ ಸಂಸ್ಥೆಯು ಭಿನ್ನ ಸ್ಮಾರ್ಟ್‌ಫೋನ್‌ಗಳ ಶ್ರೇಣಿಯ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸಂಸ್ಥೆಯ ಬಹುತೇಕ 5G ಸ್ಮಾರ್ಟ್‌ಫೋನ್‌ಗಳು ಜನಪ್ರಿಯ ಸ್ಥಾನ ಪಡೆದಿವೆ. ಅವುಗಳ ಲಿಸ್ಟ್‌ನಲ್ಲಿ ರೆಡ್ಮಿ ನೋಟ್ 11T 5G ಮೊಬೈಲ್ ಕೂಡಾ ಸೇರಿದೆ. ಈ ಮೊಬೈಲ್ ಇದೀಗ ಅತ್ಯುತ್ತಮ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ರೆಡ್ಮಿ ನೋಟ್ 11T 5G ಮೊಬೈಲ್ ಶೇ. 26% ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ 16,990 ರೂ. ಗಳ ಡಿಸ್ಕೌಂಟ್ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಬ್ಯಾಂಕ್ ಕೊಡುಗೆಗಳು ಸೇರಿದಂತೆ ಇತರೆ ಡಿಸ್ಕೌಂಟ್ ಕೂಡಾ ಲಭ್ಯ ಆಗಲಿವೆ.

ಇನ್ನು ರೆಡ್ಮಿ ನೋಟ್ 11T 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಹಾಗೆಯೇ ಇದು 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಹೊಂದಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗಾದರೆ ರೆಡ್ಮಿ ನೋಟ್ 11T 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ ನೋಟ್ 11T 5G ಫೋನಿನ ಫೀಚರ್ಸ್
ರೆಡ್ಮಿ ನೋಟ್ 11T 5G ಮೊಬೈಲ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಪಡೆದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು ಮಧ್ಯದಲ್ಲಿ ಹೋಲ್ ಪಂಚ್ ಕಟ್-ಔಟ್ ಪಡೆದಿರುವ ಅಡಾಪ್ಟಿವ್ ಸಿಂಕ್ ಡಿಸ್‌ಪ್ಲೇ ಆಗಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಕೂಡ ಪಡೆದಿದೆ.

ರೆಡ್ಮಿ ನೋಟ್ 11T 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಹಾಗೆಯೇ ಇದು Mali-G57 MC2 GPU ಹೊಂದಿದೆ.ಮತ್ತು 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಅನ್ನು ಹೊಂದಿದೆ.
ಇದರೊಂದಿಗೆ 3GB ಹೆಚ್ಚುವರಿ RAM ಅನ್ನು ವರ್ಚುವಲ್ ಸೇರಿಸಲು ಫೋನ್‌ನಲ್ಲಿ RAM ಬೂಸ್ಟರ್ ಫೀಚರ್ಸ್ ಅನ್ನು ಸಹ ಫ್ರೀ ಲೋಡ್ ಆಗಿ ನೀಡಲಾಗಿದೆ. ಹಾಗೆಯೇ ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ಇದೆ.

ರೆಡ್ಮಿ ನೋಟ್ 11T 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ f/1.8 ಲೆನ್ಸ್ ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದ್ದು, ಇದು f/2.45 ಲೆನ್ಸ್ ಆಗಿದೆ.
ಇನ್ನು ರೆಡ್ಮಿ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿರುವ ಜೊತೆಗೆ 33W ಪ್ರೊ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.1, ಸೇರಿದಂತೆ ಅಗತ್ಯ ಆಯ್ಕೆಗಳು ಹಾಗೂ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.


Click it and Unblock the Notifications








