ಭಾರತದಲ್ಲಿ ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

|

ಶಿಯೋಮಿ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರಾಂಡ್‌ಗಳಲ್ಲಿ ಒಂದಾಗಿದೆ. ಇನ್ನು ಶಿಯೋಮಿ ಸಬ್‌ಬ್ರಾಂಡ್‌ ರೆಡ್ಮಿ ಹೆಸರಿನಲ್ಲಿ ಅನೇಕ ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಭಾರತದಲ್ಲಿ ಲಾಂಚ್‌ ಆಗುತ್ತಿರುವ ಮೊದಲ Note 11 ಸರಣಿಯ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ ರೆಡ್ಮಿ ನೋಟ್‌ 10T 5G ಯ ಉತ್ತರಾಧಿಕಾರಿಯಾಗಿದೆ. ಇದು ರಿಯಲ್‌ಮಿ 8s 5G, iQoo Z3 ಮತ್ತು ಲಾವಾ ಅಗ್ನಿ 5G ಫೋನ್‌ಗಳಿಗೆ ಪೈಪೋಟಿ ನೀಡಲಿದೆ.

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ಹೊಸ ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಫೋನ್‌ 6.6-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ 810 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ಪ್ರೊ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಪಡೆದಿದೆ. ಇದು ಮಧ್ಯದಲ್ಲಿ ಹೋಲ್ ಪಂಚ್ ಕಟ್-ಔಟ್ ಹೊಂದಿರುವ ಅಡಾಪ್ಟಿವ್ ಸಿಂಕ್ ಡಿಸ್ಪ್ಲೇ ಆಗಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಕೂಡ ಒಳಗೊಂಡಿದೆ.

ಪ್ರೊಸೆಸರ್‌ ಹೇಗಿದೆ?

ಪ್ರೊಸೆಸರ್‌ ಹೇಗಿದೆ?

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ Mali-G57 MC2 GPU ಹೊಂದಿದೆ.ಮತ್ತು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು 3GB ಹೆಚ್ಚುವರಿ RAM ಅನ್ನು ವಾಸ್ತವಿಕವಾಗಿ ಸೇರಿಸಲು ಫೋನ್‌ನಲ್ಲಿ RAM ಬೂಸ್ಟರ್ ಫೀಚರ್ಸ್‌ ಅನ್ನು ಸಹ ಫ್ರೀ ಲೋಡ್ ಮಾಡಿದೆ. ಇದು Realme ಮತ್ತು Vivo ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡುಬರುವ ಡೈನಾಮಿಕ್ RAM ವಿಸ್ತರಣೆಯನ್ನು ಹೋಲುತ್ತದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್‌ f/1.8 ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇದು f/2.45 ಲೆನ್ಸ್ ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್‌ಫ್ರಾರೆಡ್ (IR), USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ. ಈ ಫೋನ್‌ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ ವಾಯ್ಸ್‌ ಅಸಿಸ್ಟೆಂಟ್‌ ಅನ್ನು ಸಕ್ರಿಯಗೊಳಿಸಲು ಮತ್ತು ಕ್ಯಾಮೆರಾವನ್ನು ಪ್ರಾರಂಭಿಸಲು ಡಬಲ್-ಟ್ಯಾಪ್ ಶಾರ್ಟ್‌ಕಟ್‌ಗಳನ್ನು ಬೆಂಬಲಿಸುವ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿದೆ. ಇನ್ನು ಈ ಫೋನ್‌ IP53-ರೇಟೆಡ್ ಬಿಲ್ಡ್ ಅನ್ನು ಹೊಂದಿದೆ, ಇದು ಸ್ಪ್ಲಾಶ್ ವಾಟರ್ ಮತ್ತು ಧೂಳು ನಿರೋಧಕವಾಗಿದೆ ಎಂದು ಹೇಳಲಾಗುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 6GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕಾಗಿ 16,999ರೂ.ಬೆಲೆ ಹೊಂದಿದೆ. ಆದರೆ 6GB RAM ಮತ್ತು 128GB ಸ್ಟೋರೇಜ್ ರೂಪಾಂತರವು 17,999 ರೂ. ಹಾಗೂ ಟಾಪ್-ಎಂಡ್ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 19,999.ರೂ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಡಿಸೆಂಬರ್ 7, 2021 ರಿಂದ ಮಾರಾಟವಾಗಲಿದೆ.

ಆಫರ್‌ ಏನು?

ಆಫರ್‌ ಏನು?

ಶಿಯೋಮಿ ಕಂಪನಿಯು ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ ಲಾಂಚ್‌ ಆಫರ್‌ ಅನ್ನು ಕೂಡ ನೀಡುತ್ತಿದೆ. ಈ ಆಫರ್‌ನಲ್ಲಿ ಗ್ರಾಹಕರು 1,000ರೂ. ರಿಯಾಯಿತಿಯನ್ನು ಪಡೆಯಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ, ICICI ಬ್ಯಾಂಕ್ ಗ್ರಾಹಕರು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಮತ್ತು EMI ವಹಿವಾಟುಗಳೊಂದಿಗೆ 1,000ರೂ.ಗಳ ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಆದರೆ ಈ ಲಾಂಚ್‌ ಆಫರ್‌ ಮೊದಲ ಕೆಲವು ಮಾರಾಟಗಳಿಗೆ ಮಾತ್ರ ಅನ್ವಯಿಸುತ್ತದೆ. ಲಾಂಚ್‌ ಆಫರ್‌ ಮತ್ತು ICICI ಬ್ಯಾಂಕ್ ಆಫರ್‌ ಗ್ರಾಹಕರ ಹೊರಯನ್ನು ಕಡಿಮೆಮಾಡಲಿದೆ. ಇದರಿಂದ ನೀವು ಹೊಸ ರೆಡ್ಮಿ Note 11T 5G ಫೋನ್‌ 6GB RAM ಮತ್ತು 64GB ಸ್ಟೋರೇಜ್‌ ಆಯ್ಕೆಗೆ 14,999 ರೂ.ಗಳಷ್ಟು ಪರಿಣಾಮಕಾರಿ ಬೆಲೆಯಲ್ಲಿ ಪಡೆದುಕೊಳ್ಳಬಹುದು. ಜೊತೆಗೆ 6GB RAM ಮತ್ತು 128GB ಸ್ಟೋರೇಜ್ ಮಾದರಿಗೆ 15,999 ರೂ. ಟಾಪ್-ಆಫ್-ಲೈನ್ 8GB RAM ಮತ್ತು 128GB ಸ್ಟೋರೇಜ್ ಮಾದರಿಯು 17,999 ರೂಪಾಯಿಗಳ ಪರಿಣಾಮಕಾರಿ ಬೆಲೆಯಲ್ಲಿ ಲಭ್ಯವಿರುತ್ತದೆ.

Best Mobiles in India

English summary
Xiaomi's sub-brand Redmi has launched its new affordable smartphone, Redmi Note 11T 5G in India at a starting price of Rs 16,999.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X