Just In
Don't Miss
- Automobiles
ಬಹುಬೇಡಿಕೆಯ ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಆಫರ್
- Sports
IND Vs NZ 2nd ODI: ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಕಿವೀಸ್ ಪಡೆ: 108 ರನ್ಗಳಿಗೆ ಆಲೌಟ್
- News
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ
- Movies
ಆರ್ಸಿಬಿ ಟ್ವಿಟರ್ನ ಹ್ಯಾಕ್ ಮಾಡಿದ್ದಾರೆ, ನಮ್ ಮೇಲೆ ಕಣ್ಣು ಬಿದ್ದಿದೆ ಎಂದ ಸಿಂಪಲ್ ಸುನಿ
- Finance
ಅನುಷ್ಕಾ, ಕೊಹ್ಲಿ ಬಾಡಿಗಾರ್ಡ್ ಸೋನು ವೇತನ ಎಷ್ಟಿದೆ ತಿಳಿಯಿರಿ
- Lifestyle
ದೇಹದಲ್ಲಿ ಮೆಗ್ನೇಸಿಯಂ ಕಡಿಮೆಯಾದ್ರೆ ಹೃದ್ರೋಗ ಖಚಿತ..! ಈ ಹತ್ತು ಆಹಾರಗಳು ನಿಮ್ಮ ಡಯಟ್ನಲ್ಲಿರಲಿ..
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ಲಾಂಚ್ ಆಯ್ತು ರೆಡ್ಮಿ ನೋಟ್ 12 5G!..ಖರೀದಿಗೆ ಕ್ಯೂ ಪಕ್ಕಾ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಸಂಸ್ಥೆಗಳಲ್ಲಿ ಒಂದಾದ ಶಿಯೋಮಿ ತನ್ನ ಬಹುನಿರೀಕ್ಷಿತ ರೆಡ್ಮಿ ನೋಟ್ 12 ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಿದೆ. ಭಾರೀ ಕುತೂಹಲ ಮೂಡಿಸಿದ್ದ ಈ ಸರಣಿಯು ರೆಡ್ಮಿ ನೋಟ್ 12 5G, ರೆಡ್ಮಿ ನೋಟ್ 12 ಪ್ರೊ ಮತ್ತು ರೆಡ್ಮಿ ನೋಟ್ 12 ಪ್ರೊ+ ವೇರಿಯಂಟ್ ಮಾಡೆಲ್‌ಗಳನ್ನು ಒಳಗೊಂಡಿದೆ. ಆ ಪೈಕಿ ರೆಡ್ಮಿ ನೋಟ್ 12 5G ಸ್ಮಾರ್ಟ್‌ಫೋನ್ ಬರೋಬ್ಬರಿ 5000 mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ.

ಹೌದು, ಶಿಯೋಮಿ ತನ್ನ ಬಹು ನಿರೀಕ್ಷಿತ ರೆಡ್ಮಿ ನೋಟ್ 12 ಸ್ಮಾರ್ಟ್‌ಫೋನ್ ಸರಣಿಯನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಸರಣಿಯಲ್ಲಿ ರೆಡ್ಮಿ ನೋಟ್ 12 ಗಮನ ಸೆಳೆದಿದ್ದು, ಇದು ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ಈ ಫೋನ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿರುವುದು ಪ್ಲಸ್ ಪಾಯಿಂಟ್ ಆಗಿ ಕಾಣಿಸಿದೆ. ಹಾಗಾದರೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ರೆಡ್ಮಿ ನೋಟ್ 12 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್ 12 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಡಿಸ್‌ಪ್ಲೇ 1200nits ಬ್ರೈಟ್ನೆಸ್ ಹೊಂದಿದ್ದು, HDR10+ ಬೆಂಬಲವನ್ನು ಪಡೆದಿದೆ.

ಪ್ರೊಸೆಸರ್ ಪವರ್ ಯಾವುದು
ರೆಡ್ಮಿ ನೋಟ್ 12 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 128GB, 4GB RAM + 128GB ಮತ್ತು 6GB RAM + 128GB ಇಂಟರ್ ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 12 ಓಎಸ್ ಆಧಾರಿತ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ.

ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್
ರೆಡ್ಮಿ ನೋಟ್ 12 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ
ರೆಡ್ಮಿ ನೋಟ್ 12 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಆಡಿಯೊಗಾಗಿ, ಹೈ-ರೆಸ್ ಆಡಿಯೊ ಬೆಂಬಲದೊಂದಿಗೆ ಫೋನ್ ಒಂದೇ ಸ್ಪೀಕರ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಫೋನ್ ವೈಫೈ ಮತ್ತು ಬ್ಲೂಟೂತ್ v5.1 ಮತ್ತು USB ಟೈಪ್-ಸಿ ಸೇರಿವೆ.

ಬೆಲೆ ಎಷ್ಟು ಹಾಗೂ ಲಭ್ಯತೆಯ ಮಾಹಿತಿ
ರೆಡ್ಮಿ ನೋಟ್ 12 5G ಸ್ಮಾರ್ಟ್‌ಫೋನ್ 4GB + 128GB ವೇರಿಯಂಟ್ ಬೆಲೆಯು 15,499ರೂ.
ರೆಡ್ಮಿ ನೋಟ್ 12 5G ಸ್ಮಾರ್ಟ್‌ಫೋನ್ 4GB RAM + 128GB ವೇರಿಯಂಟ್ ಬೆಲೆಯು 17,999ರೂ. (ಆಫರ್ ಬೆಲೆ 16,499ರೂ)
ರೆಡ್ಮಿ ನೋಟ್ 12 5G ಸ್ಮಾರ್ಟ್‌ಫೋನ್ 6GB RAM + 128GB ವೇರಿಯಂಟ್ ಬೆಲೆಯು 19,999ರೂ. (ಆಫರ್ ಬೆಲೆ 18,499ರೂ)
ಇದೇ ಜನವರಿ 11 ರಿಂದ ಅಮೆಜಾನ್ ಇ ಕಾಮರ್ಸ್ ತಾಣ, ಅಧಿಕೃತ ರೆಡ್ಮಿ ವೆಬ್‌ಸೈಟ್, ಮಿ ಹೋಮ್ ಹಾಗೂ ಮಿ ರಿಟೈಲ್ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470