Home
ಸುದ್ದಿಜಾಲ

ರೆಡ್ಮಿ ನೋಟ್‌ 12 ಪ್ರೊ 5G ಸ್ಮಾರ್ಟ್‌ಫೋನಿಗೆ ಈಗ ಬಿಗ್‌ ಡಿಸ್ಕೌಂಟ್‌!

ಇ ಕಾಮರ್ಸ್ ದೈತ್ಯ ಅಮೆಜಾನ್‌ ಸಂಸ್ಥೆಯ ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯಲ್‌ ಡೇಸ್‌ ಸೇಲ್‌ ಈಗ ನಡೆಯುತ್ತಿದೆ. ಈ ವಿಶೇಷ ಸೇಲ್‌ನಲ್ಲಿ ಎಲ್ಲ ಪ್ರಮುಖ ಸಂಸ್ಥೆಗಳ ಮೊಬೈಲ್‌ಗಳಿಗೆ ಡಿಸ್ಕೌಂಟ್‌ ಇದ್ದು, ಆ ಪೈಕಿ ರೆಡ್ಮಿ ನೋಟ್‌ 12 ಪ್ರೊ 5G ಫೋನ್‌ ಅಧಿಕ ರಿಯಾಯಿತಿ ಪಡೆದಿದ್ದು, ಗ್ರಾಹಕರನ್ನು ಸೆಳೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ ಸೇಲ್‌ನಲ್ಲಿ ರೆಡ್ಮಿ ನೋಟ್‌ 12 ಪ್ರೊ 5G ಮೊಬೈಲ್‌ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಫೋನ್‌ 128GB ವೇರಿಯಂಟ್‌ ಫೋನ್‌ 27,999ರೂ. ಗಳ ದರ ಪಡೆದಿದ್ದು, ಇದೀಗ ಆಫರ್‌ನಲ್ಲಿ ಎಲ್ಲ ಕೊಡುಗೆಗಳು ಸೇರಿ ಈ ಫೋನ್‌ ಅನ್ನು 17,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದು.

ರೆಡ್ಮಿ ನೋಟ್‌ 12 ಪ್ರೊ 5G ಸ್ಮಾರ್ಟ್‌ಫೋನಿಗೆ ಈಗ ಬಿಗ್‌ ಡಿಸ್ಕೌಂಟ್‌!

ಹಾಗೆಯೇ ರೆಡ್ಮಿ ನೋಟ್‌ 12 ಪ್ರೊ 5G ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 ಜೆನ್‌ 1 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಇದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಮುಖ್ಯ ಕ್ಯಾಮೆರಾ ಇದೆ. ಹಾಗಾದರೆ ರೆಡ್ಮಿ ನೋಟ್‌ 12 ಪ್ರೊ 5G ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ಫೋನಿನ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್‌ 12 ಪ್ರೊ 5G ಫೋನ್‌ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.73 ಇಂಚಿನ WQHD+ Samsung E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 1,500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120 Hz ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಪವರ್‌ ಯಾವುದು ಹಾಗೂ ಸ್ಟೋರೇಜ್‌ ಎಷ್ಟು
ರೆಡ್ಮಿ ನೋಟ್‌ 12 ಪ್ರೊ 5G ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 ಜೆನ್‌ 1 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8 GB RAM + 256 GB ಹಾಗೂ 12 GB RAM + 256 GB ಇಂಟರ್‌ ಸ್ಟೋರೇಜ್‌ ಆಯ್ಕೆ ಹೊಂದಿದೆ.

ಕ್ಯಾಮೆರಾ ಸೆನ್ಸಾರ್ ರಚನೆ ಹೇಗಿದೆ
ರೆಡ್ಮಿ ನೋಟ್‌ 12 ಪ್ರೊ 5G ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯೊಂದಿಗೆ ಕಾಣಿಸಿಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪೋರ್ಟ್ರೇಟ್ ಲೆನ್ಸ್‌ ಮತ್ತು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಆಯ್ಕೆ
ರೆಡ್ಮಿ ನೋಟ್‌ 12 ಪ್ರೊ 5G ಫೋನ್‌ 4,600 mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದೆ. ಇದು 120W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಕೂಡ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6E, ಬ್ಲೂಟೂತ್ v5.2, NFC ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಬ್ಲೂ, ಬ್ಲ್ಯಾಕ್‌ ಹಾಗೂ ಓಪೆರಾ ಮಾವೆ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
REDMI Note 12 Pro 5G available at discounted price on flipkart sale. all details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+