Home
ಸುದ್ದಿಜಾಲ

ಶಿಯೋಮಿ 12 ಪ್ರೊ 5G ಬೆಲೆಯಲ್ಲಿ ಸಖತ್‌ ಇಳಿಕೆ; ಸೂಪರ್‌ ಆಫರ್‌!

ಮೊಬೈಲ್‌ ಮಾರುಕಟ್ಟೆಯಲ್ಲಿ ಶಿಯೋಮಿ ಸಂಸ್ಥೆಯು ಭಿನ್ನ ಶ್ರೇಣಿಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯು ಬಜೆಟ್‌ ಫೋನ್‌ಗಳ ಜೊತೆಗೆ ಹೈ ಎಂಡ್ ಮಾದರಿಯ ಫೋನ್‌ ಕೂಡಾ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯ ಶಿಯೋಮಿ 12 ಪ್ರೊ 5G ಫೋನ್‌ ಇದೀಗ ಬೊಂಬಾಟ್‌ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಶಿಯೋಮಿ 12 ಪ್ರೊ 5G ಮೊಬೈಲ್‌ ಶೇ. 31% ರಷ್ಟು ಡಿಸ್ಕೌಂಟ್‌ ಪಡೆದಿದೆ. 6GB RAM + 128GB ವೇರಿಯಂಟ್‌ ಫೋನ್‌ ಬೆಲೆಯು 29,990ರೂ. ಗಳು ಆಗಿದ್ದು, ಆದರೆ ಸದ್ಯ ಆಫರ್‌ನಲ್ಲಿ ಈ ಮೊಬೈಲ್‌ 20,600ರೂ. ಗಳ ಬಿಗ್‌ ಸಖತ್ ದರದಲ್ಲಿ ಖರೀದಿಗೆ ಲಭ್ಯ ಇದೆ.

ಶಿಯೋಮಿ 12 ಪ್ರೊ 5G ಬೆಲೆಯಲ್ಲಿ ಸಖತ್‌ ಇಳಿಕೆ; ಸೂಪರ್‌ ಆಫರ್‌!

ಇನ್ನು ಶಿಯೋಮಿ 12 ಪ್ರೊ 5G ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಜೊತೆಗೆ ಇದು 4,600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗಾದರೆ ಶಿಯೋಮಿ 12 ಪ್ರೊ 5G ಫೋನಿನ ಇನ್ನುಳಿದ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 12 ಪ್ರೊ 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ :
ಶಿಯೋಮಿ 12 ಪ್ರೊ 5G ಮೊಬೈಲ್‌ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.73 ಇಂಚಿನ WQHD+ Samsung E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 1,500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಶಿಯೋಮಿ 12 ಪ್ರೊ 5G ಪ್ರೊಸೆಸರ್‌ ಪವರ್‌ ಯಾವುದು :
ಶಿಯೋಮಿ 12 ಪ್ರೊ 5G ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8 GB RAM + 256 GB ಹಾಗೂ 12 GB RAM + 256 GB ಇಂಟರ್‌ ಸ್ಟೋರೇಜ್‌ ಆಯ್ಕೆ ಹೊಂದಿದೆ.

ಶಿಯೋಮಿ 12 ಪ್ರೊ 5G ಕ್ಯಾಮೆರಾ ಸೆನ್ಸಾರ್ ರಚನೆ :
ಶಿಯೋಮಿ 12 ಪ್ರೊ 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯೊಂದಿಗೆ ಕಾಣಿಸಿಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪೋರ್ಟ್ರೇಟ್ ಲೆನ್ಸ್‌ ಮತ್ತು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಶಿಯೋಮಿ 12 ಪ್ರೊ 5G ಬ್ಯಾಟರಿ ಮತ್ತು ಇತರೆ ಆಯ್ಕೆ :
ಶಿಯೋಮಿ 12 ಪ್ರೊ 5G ಮೊಬೈಲ್‌ 4,600 mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದೆ. ಇದು 120W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಕೂಡ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6E, ಬ್ಲೂಟೂತ್ v5.2, NFC ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಬ್ಲೂ, ಬ್ಲ್ಯಾಕ್‌ ಹಾಗೂ ಓಪೆರಾ ಮಾವೆ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Redmi Note 12 Pro 5G big price drop on amazon. offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+