ರೆಡ್ಮಿಯ ಈ ಮೊಬೈಲ್‌ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
ಜನಪ್ರಿಯ ಶಿಯೋಮಿ ಕಂಪನಿಯ ಕೆಲವು ಫೋನ್‌ಗಳು ಸಿಕ್ಕಾಪಟ್ಟೆ ಸದ್ದು ಮಾಡಿವೆ. ಆ ಪೈಕಿ ರೆಡ್ಮಿ ನೋಟ್ 12 ಪ್ರೊ 5G ಮೊಬೈಲ್ ಕೂಡಾ ಒಂದಾಗಿದ್ದು, ಸದ್ಯ ಈ ಮೊಬೈಲ್ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಹೊಸದಾಗಿ ರೆಡ್ಮಿ 5G ಫೋನ್ ಖರೀದಿಸಬೇಕು ಅಂದುಕೊಂಡ ಗ್ರಾಹಕರಿಗೆ ಈ ಕೊಡುಗೆ ಆಕರ್ಷಕ ಎನಿಸಲಿದೆ.
ಹೌದು, ಲೀಡಿಂಗ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ನಲ್ಲಿ ರೆಡ್ಮಿ ನೋಟ್ 12 ಪ್ರೊ 5G ಫೋನ್ ಶೇ. 25% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8GB RAM + 256GB ವೇರಿಯಂಟ್ ಮೊಬೈಲ್ 23,999 ರೂ. ಗಳ ಡಿಸ್ಕೌಂಟ್ ದರದಲ್ಲಿ ಖರೀದಿಸಬಹುದು. ಇದಲ್ಲದೇ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್ ಆಫರ್, ವಿನಿಮಯ ಕೊಡುಗೆ ಸಹ ಪಡೆದುಕೊಂಡರೆ, ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಅವಕಾಶ ಇದೆ.

ಇನ್ನು ರೆಡ್ಮಿಯ ಈ 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್ ಪವರ್ ಒಳಗೊಂಡಿದೆ. ಹಾಗೆಯೇ ಬ್ಲೂ, ಬ್ಲ್ಯಾಕ್ ಹಾಗೂ ಓಪೆರಾ ಮಾವೆ ಕಲರ್ ಆಯ್ಕೆಗಳಲ್ಲಿ ಲಭ್ಯ. ಇನ್ನುಳಿದಂತೆ ರೆಡ್ಮಿ ನೋಟ್ 12 ಪ್ರೊ 5G ಮೊಬೈಲ್‌ನ ಇನ್ನುಳಿದ ಫೀಚರ್ಸ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 12 ಪ್ರೊ 5G - ಫೀಚರ್ಸ್
ರೆಡ್ಮಿ ಕಂಪನಿಯ ಈ ಸ್ಮಾರ್ಟ್‌ಫೋನ್ 1,440 x 3,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.73 ಇಂಚಿನ HD+ AMOLED ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ಡೈನಾಮಿಕ್ ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.
ರೆಡ್ಮಿ ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್ ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 6GB+ 128GB, 8GB RAM + 256 GB ಹಾಗೂ 12GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.
ರೆಡ್ಮಿ ನೋಟ್ 12 ಪ್ರೊ 5G ಫೋನ್ ಮೂರು ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಪಡೆದಿದೆ. ಇದರ ಜೊತೆಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ನೋಟ್ ಸರಣಿಯ ಈ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದ್ದು, ಇದಕ್ಕೆ ಬೆಂಬಲವಾಗಿ 120W ಫಾಸ್ಟ್ ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್ ಇದೆ. ಅಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, ವೈ-ಫೈ 6E, ಬ್ಲೂಟೂತ್ v5.2, NFC ಮತ್ತು ಯುಎಸ್‌ಬಿ ಟೈಪ್-C ಪೋರ್ಟ್ ಆಯ್ಕೆಗಳು ಇವೆ. ಇನ್ನು ಈ ಮೊಬೈಲ್ ಬ್ಲೂ, ಬ್ಲ್ಯಾಕ್ ಹಾಗೂ ಓಪೆರಾ ಮಾವೆ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








