Just In
- 38 min ago
ಜಿಯೋದ ಈ ಪ್ಲ್ಯಾನ್ ಸಖತ್ ಆಗಿದೆ!..ರೀಚಾರ್ಜ್ ಮಾಡಬೇಕಾ?.ಬೇಡವೇ?
- 56 min ago
ದೃಷ್ಟಿಹೀನರಿಗಾಗಿ ಹೊಸ ಸ್ಮಾರ್ಟ್ವಾಚ್; ಇದು ಹೇಗೆಲ್ಲಾ ಕೆಲಸ ಮಾಡಲಿದೆ!?
- 3 hrs ago
Vivo X90 Pro : ಲಾಂಚ್ ಆಗಿಯೇ ಬಿಡ್ತು 'ವಿವೋ X90 ಪ್ರೊ' ಫೋನ್; ಖರೀದಿಗೆ ಕ್ಯೂ ಖಚಿತ!
- 3 hrs ago
ವಿವೋ X90 ಸ್ಮಾರ್ಟ್‌ಫೋನ್ ಲಾಂಚ್; ಅಚ್ಚರಿ ಫೀಚರ್ಸ್ ಬಗ್ಗೆ ತಿಳಿದುಕೊಳ್ಳಿ!
Don't Miss
- Finance
ಭಾರತಕ್ಕೆ ಸವಾಲು ಹಾಕಬೇಡಿ: ಅದಾನಿ ಘಟನೆ ಬೆನ್ನಲ್ಲೇ ಉದ್ಯಮಿ ಆನಂದ್ ಮಹೀಂದ್ರಾ ಎಚ್ಚರಿಕೆ
- Movies
Paaru serial: ಪಾರು ತಾಯಿ ಆಗುತ್ತಿರುವ ವಿಚಾರ ಆದಿಗೆ ತಿಳಿದೇಹೋಯಿತು!
- News
ಭಾರತದ ವಿರುದ್ಧ ಬಾಜಿ ಕಟ್ಟಬೇಡಿ: ಅದಾನಿ ಘಟನೆ ಬೆನ್ನಲ್ಲೇ ಉದ್ಯಮಿ ಆನಂದ್ ಮಹೀಂದ್ರಾ ಎಚ್ಚರಿಕೆ
- Automobiles
ಏರ್ಫಿಲ್ಟರ್ ಬದಲಾಯಿಸುವ ಸಮಯ ಬಂದಾಗ ಕಾರು ನೀಡುವ ಐದು ಮುನ್ಸೂನೆಗಳಿವು!
- Lifestyle
Chankya Neeti: ಶತ್ರುವಿನ ವಿರುದ್ಧ ಗೆಲ್ಲಬೇಕಾ..? ಚಾಣಾಕ್ಯನ ಈ ನೀತಿ ಅನುಸರಿಸಿ..!
- Sports
ಕೊಹ್ಲಿ ಅಲ್ಲ, ರೋಹಿತ್ ಅಲ್ಲ; ಈತ ಭಾರತದ ಬ್ಯಾಟಿಂಗ್ ಕ್ರಮಾಂಕದ ಬೆನ್ನೆಲುಬು ಎಂದ ಆರ್ ಅಶ್ವಿನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ರೆಡ್ಮಿ ನೋಟ್ 12 ಪ್ರೊ ಪ್ಲಸ್ 5G ಲಾಂಚ್! 200 MP ಕ್ಯಾಮೆರಾ ವಿಶೇಷ!
ಭಾರತದಲ್ಲಿ ತನ್ನ ಫೀಚರ್ಸ್ ಬಹಿರಂಗ ಪಡಿಸುವ ಮೂಲಕವೇ ಬಿರುಗಾಳಿ ಎಬ್ಬಿಸಿದ್ದ ರೆಡ್ಮಿ ನೋಟ್ 12 5G ಸರಣಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಭಾರತಕ್ಕೆ ಎಂಟ್ರಿ ನೀಡಿರುವ ರೆಡ್ಮಿ ನೋಟ್ 12 5G ಸರಣಿಯಲ್ಲಿ ಎರಡು ಪ್ರೊ ಮಾಡೆಲ್‌ಗಳನ್ನು ಪರಿಚಯಿಸಲಾಗಿದೆ. ಇವುಗಳನ್ನು ರೆಡ್ಮಿ 12 ಪ್ರೊ ಪ್ಲಸ್ 5G ಮತ್ತು ರೆಡ್ಮಿ 12 ಪ್ರೊ 5G ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಇನ್ನು ಈ ಎರಡು ಪ್ರೊ 5G ಮಾದರಿಗಳು ಮಿಡಿಯಾಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ.

ಹೌದು, ರೆಡ್ಮಿ ನೋಟ್ 12 ಪ್ರೊ ಪ್ಲಸ್ 5G ಮತ್ತು ರೆಡ್ಮಿ ನೋಟ್ 12 ಪ್ರೊ 5G ಸ್ಮಾರ್ಟ್‌ಫೋನ್‌ಗಳು ಭಾರತಕ್ಕೆ ಎಂಟ್ರಿ ನೀಡಿವೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿವೆ. ಇದಲ್ಲದೆ ಈ ಎರಡು ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಜೊತೆಗೆ ಗಾಜಿನ ಸ್ಯಾಂಡ್‌ವಿಚ್ ವಿನ್ಯಾಸವನ್ನು ಹೊಂದಿವೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 12 ಪ್ರೊ ಪ್ಲಸ್ 5G ಫೀಚರ್ಸ್ ಹೇಗಿದೆ?
ರೆಡ್ಮಿ ನೋಟ್ 12 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಜೊತೆಗೆ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಜೊತೆಗೆ 1920Hz PWM ಡಿಮ್ಮಿಂಗ್ ಅನ್ನು ನೀಡಲಿದೆ. ಅಲ್ಲದೆ HDR10+, HDR 10, ಮತ್ತು ಡಾಲ್ಬಿ ವಿಷನ್‌ಗೆ ಬೆಂಬಲವನ್ನು ಸಹ ನೀಡಲಿದೆ.

ಇದು ಮೀಡಿಯಾಟೆಕ್ ಡೈಮೆನ್ಸಿಟಿ 1080SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ನೀಡಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಸ್ಯಾಮ್‌ಸಂಗ್ HPX ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇನ್ನು ರೆಡ್ಮಿ ನೋಟ್ 12 ಪ್ರೊ+ 5G ಸ್ಮಾರ್ಟ್‌ಫೋನ್ 4,980mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಲ್ಲಿರುವ ವೇಗದ ಚಾರ್ಜಿಂಗ್ ತಂತ್ರಜ್ಞಾನವು ಕೇವಲ 19 ನಿಮಿಷಗಳಲ್ಲಿ ಫೋನ್ ಅನ್ನು 100% ಚಾರ್ಜ್ ಮಾಡಲಿದೆ. ಇದಲ್ಲದೆ ಈ ಫೋನ್‌ನಲ್ಲಿ ಹೈ-ರೆಸ್ ಆಡಿಯೊ ಬೆಂಬಲದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 12ಪ್ರೊ 5G ಫೀಚರ್ಸ್ ಹೇಗಿದೆ?
ರೆಡ್ಮಿ ನೋಟ್ 12ಪ್ರೊ 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ OLED ಪ್ಯಾನಲ್ 5000000:1 ರಚನೆಯ ಅನುಪಾತ, 1920Hz PWM ಡಿಮ್ಮಿಂಗ್ ಮತ್ತು 16,000-ಲೆವೆಲ್ ಡಿಮ್ಮಿಂಗ್ ಅನ್ನು ನೀಡಲಿದೆ. ಈ ಡಿಸ್‌ಪ್ಲೇ 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಅಲ್ಲದೆ ಡಿಸ್‌ಪ್ಲೇ HDR10+, HDR 10, ಮತ್ತು ಡಾಲ್ಬಿ ವಿಷನ್‌ಗೆ ಬೆಂಬಲವನ್ನು ಸಹ ಹೊಂದಿದೆ.

ಇದು ಕೂಡ ಮೀಡಿಯಾಟೆಕ್ ಡೈಮೆನ್ಸಿಟಿ 1080SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ನೀಡಲಿದೆ. ಈ ಸ್ಮಾರ್ಟ್‌ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ ನೋಟ್ 12 ಪ್ರೊ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಡ್ಯುಯಲ್ ಸ್ಟೀರಿಯೋ ಸ್ಪೀಕರ್‌ಗಳನ್ನು ಡಾಲ್ಬಿ ಅಟ್ಮಾಸ್ ಮತ್ತು ಹೈ-ಫೈ ಆಡಿಯೋ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟಿದೆ?
ರೆಡ್ಮಿ ನೋಟ್ 12 ಪ್ರೊ+ 5G ಸ್ಮಾರ್ಟ್‌ಫೋನ್ ಭಾರತದಲ್ಲಿ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 29,999ರೂ ಬೆಲೆ ಹೊಂದಿದೆ. ಇದರ 12GB RAM + 256GB ಸ್ಟೋರೇಜ್ ಮಾದರಿಗೆ 32,999ರೂ.ಬೆಲೆ ಹೊಂದಿದೆ. ಇದು ಆರ್ಕ್ಟಿಕ್ ವೈಟ್, ಐಸ್ಬರ್ಗ್ ಬ್ಲೂ ಮತ್ತು ಅಬ್ಸಿಡಿಯನ್ ಕಪ್ಪು ಬಣ್ಣದ ರೂಪಾಂತರಗಳನ್ನು ಹೊಂದಿದೆ.
ಇನ್ನು ರೆಡ್ಮಿ ನೋಟ್ 12 ಪ್ರೊ 5G ಫೋನ್ 6GB RAM + 128GB ಸ್ಟೋರೇಜ್ ಮಾದರಿಗೆ 24,999ರೂ.ಬೆಲೆ ಹೊಂದಿದೆ. ಇದರ 8GB RAM + 128GB ಸ್ಟೋರೇಜ್ ಆಯ್ಕೆಗೆ 26,999ರೂ. ಬೆಲೆ ಪಡೆದಿದೆ. ಹಾಗೆಯೇ 8GB RAM + 256GB ಹೊಂದಿರುವ ಟಾಪ್ ಎಂಡ್ ಮಾಡೆಲ್ ಬೆಲೆ 27,999ರೂ. ಬೆಲೆ ಹೊಂದಿದೆ. ಇದು ಫ್ರಾಸ್ಟೆಡ್ ಬ್ಲೂ, ಸ್ಟಾರ್ಡಸ್ಟ್ ಪರ್ಪಲ್ ಮತ್ತು ಓನಿಕ್ಸ್ ಬ್ಲ್ಯಾಕ್ ಶ್ಯಾಡೋ ಕಲರ್ ಆಯ್ಕೆಗಳಲ್ಲಿ ದೊರೆಯಲಿದೆ.

ಲಭ್ಯತೆ ಯಾವಾಗ?
ರೆಡ್ಮಿ ನೋಟ್ 12 ಪ್ರೊ 5G ಮತ್ತು ರೆಡ್ಮಿ ನೋಟ್ 12 ಪ್ರೊ + 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಫ್ಲಿಪ್‌ಕಾರ್ಟ್, ಅಮೆಜಾನ್, ಮಿ.ಕಾಮ್, ಮಿ ಹೋಮ್ ಸ್ಟೋರ್ಸ್ ಮತ್ತು ಆಫ್‌ಲೈನ್ ರಿಟೇಲ್ ಸ್ಟೋರ್‌ಗಳಲ್ಲಿ ಇದೇ ಜನವರಿ 11 ರಿಂದ ಮಾರಾಟವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470