Just In
- 18 hrs ago
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- 21 hrs ago
Tech News of this Week; ಜಿಯೋ ಹಿಂದಿಕ್ಕಿದ ಏರ್ಟೆಲ್, ಹೆಚ್ಚು ಸೇಲ್ ಆದ ಫೋನ್ ಯಾವುದು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!
- 1 day ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 1 day ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
Don't Miss
- News
ನೋಡ ಬನ್ನಿರಾ ಪರಶುರಾಮ ಥೀಮ್ ಪಾರ್ಕ್: ಸಚಿವ ಸುನಿಲ್ ಕುಮಾರ್ ಸಂದರ್ಶನ
- Movies
ರಿಲೀಸ್ ದಿನ ಅಬ್ಬರಿಸಿದ್ದ ಕ್ರಾಂತಿ ನಂತರದ 3 ದಿನಗಳಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ವೀಕೆಂಡ್ ಕಲೆಕ್ಷನ್ ರಿಪೋರ್ಟ್
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರೆಡ್ಮಿ ನೋಟ್ 12 ಪ್ರೊ ಸ್ಪೀಡ್ ಎಡಿಷನ್! ಫೀಚರ್ಸ್ ಹೇಗಿದೆ?
ರೆಡ್ಮಿ ಕಂಪೆನಿ ತನ್ನ ನೋಟ್ ಸರಣಿಯಲ್ಲಿ ಹೊಸ ರೆಡ್ಮಿ ನೋಟ್ 12 ಪ್ರೊ ಸ್ಪೀಡ್ ಎಡಿಷನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ರೆಡ್ಮಿ ನೋಟ್ 12 ಪ್ರೊ ಮಾದರಿಯ ಫೀಚರ್ಸ್‌ಗಳನ್ನೇ ಹೊಂದಿದ್ದು, ವಿಶೇಷ ವಿನ್ಯಾಸದಿಂದ ಗಮನಸೆಳೆದಿದೆ. ಇದು ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, 108 ಮೆಗಾಪಿಕ್ಸೆಲ್ ಸೆನ್ಸಾರ್ ಮುಖ್ಯ ಕ್ಯಾಮೆರಾವನ್ನು ಒಳಗೊಂಡಿದೆ.

ಹೌದು, ರೆಡ್ಮಿ ನೋಟ್ 12 ಪ್ರೊ ಸ್ಪೀಡ್ ಎಡಿಷನ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಮೂರು ವಿಭಿನ್ನ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು 6.67-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದ್ದು, 5,000mAh ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?
ರೆಡ್ಮಿ ನೋಟ್ 12 ಪ್ರೊ ಸ್ಪೀಡ್ ಆವೃತ್ತಿಯು 6.67 ಇಂಚಿನ ಫುಲ್ HD+ ಒಎಲ್‌ಇಡಿ ಫ್ಲೆಕ್ಸಿಬಲ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದಲ್ಲದೆ HDR10+ ಬೆಂಬಲಿಸಲಿದ್ದು, 1920Hz PWM ಡಿಮ್ಮಿಂಗ್ ಮತ್ತು DCI-P3 ಕಲರ್ ಗ್ಯಾಮಟ್ ಅನ್ನು ನೀಡಲಿದೆ.

ಪ್ರೊಸೆಸರ್ ಯಾವುದು?
ರೆಡ್ಮಿ ನೋಟ್ 12 ಪ್ರೊ ಸ್ಪೀಡ್ ಆವೃತ್ತಿಯು ಆಕ್ಟಾ-ಕೋರ್ 6nm ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್-12 ಆಧಾರಿತ MIUI 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ರೆಡ್ಮಿ ನೋಟ್ 12 ಪ್ರೊ ಸ್ಪೀಡ್ ಆವೃತ್ತಿಯು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM2 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್ ಜೊತೆಗೆ 119 ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ರೆಡ್ಮಿ ನೋಟ್ 12 ಪ್ರೊ ಸ್ಪೀಡ್ ಆವೃತ್ತಿಯು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಆಂಬಿಯೆಂಟ್ ಸೆನ್ಸಾರ್, ಇ-ದಿಕ್ಸೂಚಿ, IR ರಿಮೋಟ್ ಕಂಟ್ರೋಲ್ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ರೆಡ್ಮಿ ನೋಟ್ 12ಪ್ರೊ ಸ್ಪೀಡ್ ಆವೃತ್ತಿ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 256GB ಸ್ಟೋರೇಜ್ ಮಾದರಿಗಾಗಿ CNY 1,699 (ಸುಮಾರು 20,200ರೂ)ಬೆಲೆ ಹೊಂದಿದೆ. ಇದರ 8GB + 256GB ಸ್ಟೋರೇಜ್ ರೂಪಾಂತರದ ಬೆಲೆ CNY 1,799 (ಸುಮಾರು 21,400ರೂ)ಆಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470