Home
ಸುದ್ದಿಜಾಲ

ಶಿಯೋಮಿ ರೆಡ್ಮಿ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! ಅತ್ಯಾಕರ್ಷಕ ಫೀಚರ್ಸ್‌ ?

ಶಿಯೋಮಿ ರೆಡ್ಮಿ ಬ್ರ್ಯಾಂಡ್‌ನಲ್ಲಿ ಹೊಸ ರೆಡ್ಮಿ ನೋಟ್‌ 12 ಪ್ರೊ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ರೆಡ್ಮಿ ನೋಟ್‌ 12 ಪ್ರೊ, ರೆಡ್ಮಿ ನೋಟ್‌ 12 ಪ್ರೊ ಪ್ಲಸ್‌ ಮತ್ತು ರೆಡ್ಮಿ ನೋಟ್‌ 12 ಎಕ್ಸ್‌ಪ್ಲೋರರ್‌ ಆವೃತ್ತಿ ಫೋನ್‌ಗಳು ಸೇರಿವೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳು ಬಹುತೇಕ ಒಂದೇ ಮಾದರಿಯ ಫೀಚರ್ಸ್‌ಗಳನ್ನು ಹೊಂದಿವೆ. ಆದರೆ ಕ್ಯಾಮೆರಾ ಸೆಟ್‌ಅಪ್‌, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್‌ ವಿಚಾರದಲ್ಲಿ ಸಾಕಷ್ಟು ವ್ಯತ್ಯಾಸಗಳನ್ನು ಕಾಣಬಹುದಾಗಿದೆ.

ರೆಡ್ಮಿ

ಹೌದು, ರೆಡ್ಮಿ ಕಂಪೆನಿ ಹೊಸ ರೆಡ್ಮಿ ನೋಟ್‌ 12 ಪ್ರೊ ಸರಣಿಯನ್ನು ಪರಿಚಯಿಸಿದೆ. ಇದರಲ್ಲಿ ರೆಡ್ಮಿ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 1080 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ರೆಡ್ಮಿ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ OLED ಪ್ಯಾನೆಲ್ ಆಗಿದ್ದು, 10 ಬಿಟ್ ಡೆಪ್ತ್‌ ಕಲರ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, HDR10+ ಬೆಂಬಲವನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರೆಡ್ಮಿ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸರಣಿಯ ರೆಡ್ಮಿ ನೋಟ್‌ 12 ಪ್ರೊ ಪ್ಲಸ್ ಮತ್ತು ಎಕ್ಸ್‌ಪ್ಲೋರರ್ ಆವೃತ್ತಿಯು 3,000mm² VC ಕೂಲಿಂಗ್ ವ್ಯವಸ್ಥೆಯನ್ನು ಹೊಂದಿದೆ, ಆದರೆ ಸಾಮಾನ್ಯ ಪ್ರೊ ಆವೃತ್ತಿಯು ಚಿಕ್ಕದಾದ 2,000mm² ಗ್ರ್ಯಾಫೀನ್-ಆಧಾರಿತ ಕೂಲಿಂಗ್ ಸಿಸ್ಟಂ ಅನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ವೈಫೈ 6, GNSS, NFC, ಮತ್ತು USB ಟೈಪ್-ಸಿ ಸೇರಿವೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಐಆರ್ ಬ್ಲಾಸ್ಟರ್, ಎಕ್ಸ್-ಆಕ್ಸಿಸ್ ಲೀನಿಯರ್ ವೈಬ್ರೇಶನ್ ಮೋಟಾರ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್‌ ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ CNY 1,699 (ಅಂದಾಜು 19,300ರೂ)ಬೆಲೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತ ಸೇರಿದಂತೆ ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

Best Mobiles in India

English summary
Redmi Note 12 Pro with 67W fast charging Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+