Home
ಸುದ್ದಿಜಾಲ

ರೆಡ್ಮಿ ನೋಟ್‌ 12 ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆ: ಖರೀದಿಗೆ ಇದುವೇ ಬೆಸ್ಟ್‌ ಟೈಂ!

ಅಗ್ಗದ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದುಕೊಂಡವರಿಗೆ ರೆಡ್ಮಿ ಬ್ರ್ಯಾಂಡ್‌ ಗುಡ್‌ನ್ಯೂಸ್‌ ನೀಡಿದೆ. ಇದೇ ವರ್ಷ ಭಾರತಕ್ಕೆ ಎಂಟ್ರಿ ನೀಡಿದ್ದ ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಬೆಲೆಯನ್ನು ಇನ್ನಷ್ಟು ಕಡಿಮೆ ಮಾಡಿದ್ದು, ಹೊಸ ಆಫರ್‌ ನೀಡಿದೆ. ಇದರಿಂದ ನಿಮಗೆ ಇನ್ನಷ್ಟು ಹಣ ಉಳಿಯತಾಯವಾಗಲಿದೆ.

ಹೌದು, ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ನ 6GB + 64GB ಮತ್ತು 6GB + 128GB ರೂಪಾಂತರಗಳು ಕೂಡ 2,000ರೂ ನಷ್ಟು ಬೆಲೆ ಕಡಿತವನ್ನು ಪಡೆದಿವೆ. ಹಾಗಾದ್ರೆ ಬೆಲೆ ಕಡಿತದ ನಂತರ ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿದೆ? ಇದರೊಂದಿಗೆ ಲಭ್ಯವಿರುವ ಇತರೆ ಆಫರ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್‌ 12 ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆ: ಖರೀದಿಗೆ ಇದುವೇ ಬೆಸ್ಟ್‌ ಟೈಂ!

ರೆಡ್ಮಿ ನೋಟ್‌ 12 ಬೆಲೆಯಲ್ಲಿ ಭಾರಿ ಇಳಿಕೆ
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 2,000ರೂ ಕಡಿತವಾಗಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ 6GB + 64GBರೂಪಾಂತರದ ಆಯ್ಕೆಯು ಇದೀಗ 12,999ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಇದರ 6GB + 128GB ರೂಪಾಂತರದ ಆಯ್ಕೆಯು ನಿಮಗೆ ಕೇವಲ 14,999ರೂ ಬೆಲೆಗೆ ಲಭ್ಯವಾಗಲಿದೆ. ಇದಲ್ಲದೆ ಖರೀದಿದಾರರು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಖರೀದಿಸಿದರೆ 1,000ರೂ. ರಿಯಾಯಿತಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಐಸ್ ಬ್ಲೂ, ಲೂನಾರ್ ಬ್ಲ್ಯಾಕ್ ಅಥವಾ ಸನ್‌ರೈಸ್ ಗೋಲ್ಡ್ ಬಣ್ಣ ಆಯ್ಕೆಗಳಲ್ಲಿ ತೆಗೆದುಕೊಳ್ಳಬಹುದು.

ರೆಡ್ಮಿ ನೋಟ್‌ 12 ಡಿಸ್‌ಪ್ಲೇ ರಚನೆ
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲವನ್ನು ಸಹ ಪಡೆದಿದೆ. ಇನ್ನು ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಲೇಯರ್ ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 12 ಪ್ರೊಸೆಸರ್‌ ಯಾವುದು?
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 685SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಿದೆ.

ರೆಡ್ಮಿ ನೋಟ್‌ 12 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 12 ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಬೆಂಬಲದೊಂದಿಗೆ ಬರಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್ ಅನ್ನು ಹೊಂದಿರಲಿದೆ.

Best Mobiles in India

English summary
Redmi Note 12 receives Massive price cut in India: specs detail in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+