Home
ಸುದ್ದಿಜಾಲ

Redmi: ಭಾರಿ ಸದ್ದು ಮಾಡಿದ್ದ ರೆಡ್ಮಿ ಬ್ರ್ಯಾಂಡ್‌ನ ಈ ಫೋನ್‌ಗೆ 42% ಡಿಸ್ಕೌಂಟ್‌:..33W ಫಾಸ್ಟ್‌ ಚಾರ್ಜಿಂಗ್‌!

ಭಾರತದ ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಇದೀಗ ರಿಯಾಯಿತಿ ದರದಲ್ಲಿ ಸೇಲ್‌ ಆಗುತ್ತಿದೆ. ಜನಪ್ರಿಯ ಇ-ಕಾಮರ್ಸ್‌ ತಾಣವಾದ ಅಮೆಜಾನ್‌ನಲ್ಲಿ ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ಗೆ ಭರ್ಜರಿ ಡಿಸ್ಕೌಂಟ್‌ ಘೋಷಣೆ ಮಾಡಲಾಗಿದೆ. ಇದರೊಂದಿಗೆ ವಿವಿಧ ಬ್ಯಾಂಕ್‌ ಕಾರ್ಡ್‌ ಆಫರ್‌ಗಳು ಕೂಡ ದೊರೆಯುತ್ತಿವೆ.

ಹೌದು, ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 42% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿರುವ ಒಂದೊಳ್ಳೆ ಫೋನ್‌ ಖರೀದಿಸಬೇಕೆಂದುಕೊಂಡವರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 685SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

Redmi: ಭಾರಿ ಸದ್ದು ಮಾಡಿದ್ದ ರೆಡ್ಮಿ ಬ್ರ್ಯಾಂಡ್‌ನ ಈ ಫೋನ್‌ಗೆ 42% ಡಿಸ್ಕೌಂಟ್‌!

Redmi Note 12 ಫೋನ್‌ ಮೇಲೆ ಭರ್ಜರಿ ಆಫರ್‌
Redmi Note 12 ಸ್ಮಾರ್ಟ್‌ಫೋನಿನ 6GB RAM ಮತ್ತು 64GB ಸ್ಟೋರೇಜ್‌ ಆಯ್ಕೆಯನ್ನು ಅಮೆಜಾನ್‌ ತಾಣದಲ್ಲಿ 18,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಮೇಲೆ 42% ಡಿಸ್ಕೌಂಟ್‌ ಘೋಷಣೆ ಮಾಡಲಾಗಿದೆ. ಆದರಿಂದ ಈ ಫೋನ್‌ ಅನ್ನು ಕೇವಲ 10,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಅನ್ನು ನೀವು ಹೆಚ್‌ಡಿಎಫ್‌ಸಿ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲ ಖರೀದಿಸಿದರೆ 1000ರೂ ವರೆಗೆ ಹೆಚ್ಚುವರಿ ರಿಯಾಯಿತಿ ಕೂಡ ದೊರೆಯಲಿದೆ.

ರೆಡ್ಮಿ ನೋಟ್‌ 12 ಫೀಚರ್ಸ್‌ ಹೇಗಿದೆ?
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್‌ ರೇಟ್‌ ಬೆಂಬಲವನ್ನು ಹೊಂದಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಬೆಂಬಲಿಸಲಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಲೇಯರ್ ಪ್ರೊಟೆಕ್ಷನ್‌ ಹೊಂದಿದೆ.

ರೆಡ್ಮಿ ನೋಟ್‌ 12 ಪ್ರೊಸೆಸರ್‌ ಏನು?
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 685SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ರನ್‌ ಅಗಲಿದೆ. ಹಾಗೆಯೇ 6GB RAM + 64GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 6GB RAM ಮತ್ತು 64GB ಸ್ಟೋರೇಜ್‌ ಆಯ್ಕೆಯು ರಿಯಾಯಿತಿ ಪಡೆದಿದೆ.

ರೆಡ್ಮಿ ನೋಟ್‌ 12 ಕ್ಯಾಮೆರಾ ರಚನೆ?
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರಲ್ಲಿ ಪ್ರೈಮೆರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

Redmi: ಭಾರಿ ಸದ್ದು ಮಾಡಿದ್ದ ರೆಡ್ಮಿ ಬ್ರ್ಯಾಂಡ್‌ನ ಈ ಫೋನ್‌ಗೆ 42% ಡಿಸ್ಕೌಂಟ್‌!

ರೆಡ್ಮಿ ನೋಟ್‌ 12 ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದ್ದು, 33W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಬೆಂಬಲಿಸಲಿದೆ. ಇನ್ನು ಅಕ್ಸಿಲೆರೊಮೀಟರ್, ಗೈರೊ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್ ಅನ್ನು ಹೊಂದಿರಲಿದೆ.

ರೆಡ್ಮಿ ನೋಟ್‌ 12 ಕಲರ್‌ ಮತ್ತು ಆಯ್ಕೆ
ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಐಸ್ ಬ್ಲೂ ಕಲರ್‌ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ನ 6GB RAM ಮತ್ತು 64GB ಸ್ಟೋರೇಜ್‌ ಆಯ್ಕೆಯು ಇದೀಗ ಅಮೆಜಾನ್‌ನಲ್ಲಿ 10,999ರೂ ಬೆಲೆಯಲ್ಲಿ ದೊರೆಯಲಿದೆ.

Best Mobiles in India

English summary
Redmi Note 12 Samrtphone Gets Massive Discount in Amazon website: Offer Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+