ಭಾರತಕ್ಕೆ ಎಂಟ್ರಿ ನೀಡಲಿದೆ ರೆಡ್ಮಿ ನೋಟ್‌ 12 ಸರಣಿ! ಇದರ ಫೀಚರ್ಸ್ ತಿಳಿದ್ರೆ, ನೀವು ವಾವ್ ಅಂತೀರಾ!

|

ರೆಡ್ಮಿ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿವೆ. ಇಂದಿನ ಯುವಜನತೆಯ ನೆಚ್ಚಿನ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ ಗುರುತಿಸಿಕೊಂಡಿದೆ. ಅದರಂತೆ ಶಿಯೋಮಿ ತನ್ನ ರೆಡ್ಮಿ ಬ್ರ್ಯಾಂಡ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ತನ್ನ ಮುಂದಿನ ಸ್ಮಾರ್ಟ್‌ಫೋನ್‌ ಸರಣಿ ರೆಡ್ಮಿ ನೋಟ್‌ 12 ಸರಣಿಯನ್ನು ಮುಂದಿನ ವರ್ಷ ಜನವರಿ 5 ರಂದು ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಸಿದ್ಧತೆ ನಡೆಸಿದೆ.

ಶಿಯೋಮಿ

ಹೌದು, ಶಿಯೋಮಿ ರೆಡ್ಮಿ ನೋಟ್‌ 12 ಮುಂದಿನ ವರ್ಷ ಭಾರತಕ್ಕೆ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್‌ ಸರಣಿಯಲ್ಲಿ ರೆಡ್ಮಿ ನೋಟ್‌ 12, ರೆಡ್ಮಿ ನೋಟ್‌ 12ಪ್ರೊ ಮತ್ತು ರೆಡ್ಮಿ ನೋಟ್‌ 12 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಿದೆ. ಇನ್ನೇನು ಹೊಸ ವರ್ಷಕ್ಕೆ ಕಾಲಿಡಲು ಕೆಲದಿನಗಳಷ್ಟೇ ಬಾಕಿಯಿದ್ದು, ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸಲು ರೆಡ್ಮಿ ಬ್ರ್ಯಾಂಡ್‌ ಸಿದ್ದವಾಗಿದೆ. ಈ ಸರಣಿಯ ರೆಡ್ಮಿ ನೋಟ್‌ 12 5G ಅಗ್ಗದ ಬೆಲೆಯಲ್ಲಿ ಎಂಟ್ರಿ ನೀಡುವ ಸಾಧ್ಯತೆಯದೆ. ಹಾಗಾದ್ರೆ ಈ ಫೋನ್‌ನ ಫೀಚರ್ಸ್‌ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್‌ 12 5G ಫೀಚರ್ಸ್‌ ಹೇಗಿದೆ?

ರೆಡ್ಮಿ ನೋಟ್‌ 12 5G ಫೀಚರ್ಸ್‌ ಹೇಗಿದೆ?

ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್‌ ರೇಟ್‌ ಬೆಂಬಲವನ್ನು ಪಡೆದಿರುವ ಸಾದ್ಯತೆಯಿದೆ. ಜೊತೆಗೆ 1200 ಗರಿಷ್ಠ ಬ್ರೈಟ್‌ನೆಸ್‌ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಸ್‌ಪ್ಲೇ 85.0% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ. ಇದರ ರಚನೆಯ ಅನುಪಾತ 20:9 ರಷ್ಟಿದೆ ಎಂದು ಹೇಳಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 4 Gen 1SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 256GB ಇನ್‌ಬಿಲ್ಟ್‌ ಸ್ಟೋರೇಜ್‌ ಬಲವನ್ನು ಪಡೆದುಕೊಂಡಿದೆ. ಆದರೆ ಈ ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ನಲ್ಲಿ ಬರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿರುವ ಸಾದ್ಯತೆಯಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಹೇಗಿದೆ?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಹೇಗಿದೆ?

ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲವನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌ 15,000ರೂ. ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಆದರೆ ಇದೇ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಬೇಸ್‌ ಮಾಡೆಲ್‌ 4GB RAM ಮತ್ತು 128GB ಸ್ಟೋರೇಜ್ ಮಾದರಿಗಾಗಿ CNY 1199 (ಅಂದಾಜು 13500ರೂ.) ಬೆಲೆಯನ್ನು ಹೊಂದಿದೆ. ಇದರ 6GB RAM + 128GB ಸ್ಟೋರೇಜ್‌ ಆಯ್ಕೆಯು CNY 1299 (ಸುಮಾರು 14,500ರೂ)ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ.

Best Mobiles in India

English summary
Redmi Note 12 series is launching in India next month on January 5

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X