Home
ಸುದ್ದಿಜಾಲ

ಭಾರತದಲ್ಲಿ ರೆಡ್ಮಿ ನೋಟ್‌ 12 ಸರಣಿ ಲಾಂಚ್‌ ಡೇಟ್‌ ಬಹಿರಂಗ! ನಿರೀಕ್ಷೆ ಏನು?

ಶಿಯೋಮಿ ಕಂಪೆನಿ ತನ್ನ ರೆಡ್ಮಿ ಸರಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ರಡ್ಮಿ ಸರಣಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಸೌಂಡ್‌ ಮಾಡಿವೆ. ಸದ್ಯ ಇದೀಗ ರೆಡ್ಮಿ ಸರಣಿಯಲ್ಲಿ ಹೊಸ ರೆಡ್ಮಿ ನೋಟ್‌ 12 ಸರಣಿ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಸರಣಿಯು ಭಾರತಕ್ಕೆ ಮುಂದಿನ ವರ್ಷ ಜನವರಿ ತಿಂಗಳಿನಲ್ಲಿ ಬರಲಿದೆ ಎನ್ನಲಾಗಿದೆ. ಇನ್ನು ಈ ಸರಣಿಯಲ್ಲಿ ರೆಡ್ಮಿ ನೋಟ್‌, ರೆಡ್ಮಿ ನೋಟ್‌ 12 ಪ್ರೊ ಮತ್ತು ರೆಡ್ಮಿ ನೋಟ್‌ 12 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಿದೆ.

ರೆಡ್ಮಿ

ಹೌದು, ರೆಡ್ಮಿ ನೋಟ್‌ 12 ಸರಣಿ ಭಾರತದಲ್ಲಿ ಮುಂದಿನ ವರ್ಷದ ಜನವರಿ 5 ರಂದು ಬಿಡುಗಡೆಯಾಗಲಿದೆ. ಇದರಲ್ಲಿ ರೆಡ್ಮಿ ನೋಟ್‌ 12 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಅನ್ನೊದು ಅಧಿಕೃತವಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಸರಣಿಯ ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸರಣಿಯ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್‌ 12 ಪ್ರೊ ಫೀಚರ್ಸ್‌ ಹೇಗಿದೆ?

ರೆಡ್ಮಿ ನೋಟ್‌ 12 ಪ್ರೊ ಫೀಚರ್ಸ್‌ ಹೇಗಿದೆ?

ರೆಡ್ಮಿ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ. ರೆಡ್ಮಿ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್‌ 12ಪ್ರೊ ಪ್ಲಸ್‌

ರೆಡ್ಮಿ ನೋಟ್‌ 12ಪ್ರೊ ಪ್ಲಸ್‌

ರೆಡ್ಮಿ ನೋಟ್‌ 12 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಒಎಲ್‌ಎಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ OIS ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ 120W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಇನ್ನು ಕೂಡ ಬಹಿರಂಗವಾಗಿಲ್ಲ.

Best Mobiles in India

English summary
Redmi Note 12 series will be launched in India on January 5
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+