Home
ಸುದ್ದಿಜಾಲ

ಎಂಟ್ರಿ ಕೊಡಲು ಸಜ್ಜಾಗಿದೆ ರೆಡ್ಮಿ ನೋಟ್‌ 12 ಟರ್ಬೋ!..ಫೀಚರ್ಸ್ ಏನು?

ಶಿಯೋಮಿ ಮೊಬೈಲ್‌ ಸಂಸ್ಥೆಯು ಇತ್ತೀಚಿಗೆ ನೂತನವಾಗಿ ರೆಡ್ಮಿ ನೋಟ್‌ 12 ಸ್ಮಾರ್ಟ್‌ಫೋನ್‌ ಸರಣಿ ಅನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ರೆಡ್ಮಿ ನೋಟ್‌ 12 ಟರ್ಬೋ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಬರಲಿರುವ ಈ ಫೋನ್‌ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿರುವುದು ಬಹುತೇಕ ಖಚಿತ ಆಗಿದೆ.

ಹೌದು, ಶಿಯೋಮಿ ಸಂಸ್ಥೆಯು ಹೊಸದಾಗಿ ರೆಡ್ಮಿ ನೋಟ್‌ 12 ಟರ್ಬೋ ಫೋನ್‌ ಅನ್ನು ಲಾಂಚ್ ಮಾಡಲಿದೆ. ಅಂದಹಾಗೆಯೇ ಈ ಫೋನ್‌ ಇದೇ ಮಾರ್ಚ್ 28 ರಂದು ಅಧಿಕೃತವಾಗಿ ಅನಾವರಣ ಆಗುವ ನಿರೀಕ್ಷೆಗಳಿವೆ. ಈ ಫೋನ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್ 7+ ಜೆನ್‌ 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆಗಳು ಇವೆ.

ಎಂಟ್ರಿ ಕೊಡಲು ಸಜ್ಜಾಗಿದೆ ರೆಡ್ಮಿ ನೋಟ್‌ 12 ಟರ್ಬೋ!..ಫೀಚರ್ಸ್ ಏನು?

ಬಿಡುಗಡೆಗೂ ಮುನ್ನವೇ ರೆಡ್ಮಿ ನೋಟ್‌ 12 ಟರ್ಬೋ ಫೋನ್‌ ಕೆಲವು ಫೀಚರ್ಸ್‌ ಲೀಕ್‌ ಆಗಿದ್ದು, ಗ್ರಾಹಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್‌ ಚಾರ್ಜರ್‌ ಸೌಲಭ್ಯ ಒಳಗೊಂಡಿರಲಿದೆ. ಹಾಗಾದರೆ ರೆಡ್ಮಿ ನೋಟ್‌ 12 ಟರ್ಬೋ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ಪ್ರೊಸೆಸರ್‌ : ರೆಡ್ಮಿ ನೋಟ್‌ 12 ಟರ್ಬೋ ಸ್ಮಾರ್ಟ್‌ಫೋನ್‌ 6.67 FHD+ ಅಮೊಲೇಡ್‌ ಸ್ಕ್ರೀನ್‌ ಹೊಂದಿರಲಿದ್ದು, ಇದಕ್ಕೆ ಪೂರಕವಾಗಿ 120Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿರಲಿದೆ. ಹಾಗೆಯೇ ಈ ಫೋನ್ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್ 7+ ಜೆನ್‌ 1 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಫೋರ್ಟ್‌ ಸಹ ಪಡೆದಿರಲಿದೆ.

ಎಂಟ್ರಿ ಕೊಡಲು ಸಜ್ಜಾಗಿದೆ ರೆಡ್ಮಿ ನೋಟ್‌ 12 ಟರ್ಬೋ!..ಫೀಚರ್ಸ್ ಏನು?

ಕ್ಯಾಮೆರಾ ರಚನೆ : ರೆಡ್ಮಿ ನೋಟ್‌ 12 ಟರ್ಬೋ ಫೋನ್‌ ತ್ರಿವಳಿ ಕ್ಯಾಮೆರಾ ರಚನೆ ಪಡೆದಿರಲಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿರಲಿದ್ದು, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇರಲಿದೆ. ಹಾಗೆಯೇ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿರಲಿದೆ. ಇದರೊಂದಿಗೆ 16 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸೌಲಭ್ಯ ಪಡೆದಿರಲಿದೆ.

ಬ್ಯಾಟರಿ ಮತ್ತು ಇತರೆ : ರೆಡ್ಮಿ ನೋಟ್‌ 12 ಟರ್ಬೋ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್‌ ಚಾರ್ಜಿಂಗ್ ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ವೈ-ಫೈ, ಜಿಪಿಎಸ್, ಬ್ಲೂಟೂತ್ ಮತ್ತು ಯುಎಸ್‌ಬಿ ಟೈಪ್-ಸಿ ಆಯ್ಕೆಗಳನ್ನು ಪಡೆದಿರಲಿದೆ.

ಎಂಟ್ರಿ ಕೊಡಲು ಸಜ್ಜಾಗಿದೆ ರೆಡ್ಮಿ ನೋಟ್‌ 12 ಟರ್ಬೋ!..ಫೀಚರ್ಸ್ ಏನು?

ರೆಡ್ಮಿ ನೋಟ್‌ 12 5G ಫೀಚರ್ಸ್‌ : ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 128GB, 4GB RAM + 128GB ಮತ್ತು 6GB RAM + 128GB ಇಂಟರ್‌ ಸ್ಟೋರೇಜ್‌ ಆಯ್ಕೆಗಳನ್ನು ಹೊಂದಿದೆ.

ಹಾಗೆಯೇ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Redmi Note 12 Turbo Confirmed to Pack 16GB of RAM, 1TB Storage. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+