Home
ಸುದ್ದಿಜಾಲ

ರೆಡ್ಮಿ ನೋಟ್‌ 12R ಪ್ರೊ 5G ಎಂಟ್ರಿಗೆ ಮುಹೂರ್ತ ಫಿಕ್ಸ್‌! ಸೌಂಡ್‌ ಮಾಡೋದು ಪಕ್ಕಾನ!

ಟೆಕ್‌ ವಲಯದಲ್ಲಿ ರೆಡ್ಮಿ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಪವರ್‌ಫುಲ್‌ ಪ್ರೊಸೆಸರ್‌ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನದೇ ಆದ ಪ್ರಾಬಲ್ಯವನ್ನು ಸಾಧಿಸಿದೆ. ಸದ್ಯ ತನ್ನ ನೋಟ್‌ ಸರಣಿಯಲ್ಲಿ ಹೊಸ ರೆಡ್ಮಿ ನೋಟ್‌ 12R ಪ್ರೊ 5G ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್ 29ಕ್ಕೆ ಬಿಡುಗಡೆ ಆಗೋದು ಪಕ್ಕಾ ಆಗಿದೆ.

ಹೌದು, ರೆಡ್ಮಿ ನೋಟ್‌ 12R ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದು ಸ್ನಾಪ್‌ಡ್ರಾಗನ್ 4 ಜನ್ 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್‌ 12R ಪ್ರೊ 5G ಎಂಟ್ರಿಗೆ ಮುಹೂರ್ತ ಫಿಕ್ಸ್‌!

ರೆಡ್ಮಿ ನೋಟ್‌ 12R ಪ್ರೊ 5G ಡಿಸ್‌ಪ್ಲೇ

ರೆಡ್ಮಿ ನೋಟ್‌ 12R ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 85.0% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ರೆಡ್ಮಿ ನೋಟ್‌ 12R ಪ್ರೊ 5G ಪ್ರೊಸೆಸರ್‌

ರೆಡ್ಮಿ ನೋಟ್‌ 12R ಪ್ರೊ 5G ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 4 ಜನ್ 1 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಮೆಮೊರಿ ಕಾರ್ಡ್‌ ಬಳಸುವುದಕ್ಕೆ ಅವಕಾಶ ನೀಡಲಿದೆಯಾ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ರೆಡ್ಮಿ ನೋಟ್‌ 12R ಪ್ರೊ 5G ಎಂಟ್ರಿಗೆ ಮುಹೂರ್ತ ಫಿಕ್ಸ್‌!

ರೆಡ್ಮಿ ನೋಟ್‌ 12R ಪ್ರೊ 5G ಕ್ಯಾಮೆರಾ ಸೆಟ್‌ಅಪ್‌

ರೆಡ್ಮಿ ನೋಟ್‌ 12R ಪ್ರೊ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48MP ಸೆನ್ಸಾರ್‌ ಅನ್ನು ಹೊಂದಿರಬಹುದು. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕ್ಯಾಮೆರಾ ಸೆಟ್‌ಅಪ್‌ ನಲ್ಲಿ HDR, ಪನೋರಮಾದಂತಹ ಫೀಚರ್ಸ್‌ಗಳನ್ನು ಸೇರ್ಪಡೆ ಮಾಡಲಾಗಿದೆ ಎನ್ನಲಾಗಿದೆ.

ರೆಡ್ಮಿ ನೋಟ್‌ 12R ಪ್ರೊ 5G ಬ್ಯಾಟರಿ ಯಾವುದು?

ರೆಡ್ಮಿ ನೋಟ್‌ 12R ಪ್ರೊ 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 33W ವೇಗದ ಚಾರ್ಜಿಂಗ್‌ ಬೆಂಬಲಿಸುವ ಸಾಧ್ಯತೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಹೊಂದಿರಲಿದೆ ಎಂದು ಹೇಳಲಾಗಿದೆ.

ರೆಡ್ಮಿ ನೋಟ್‌ 12R ಪ್ರೊ 5G ಎಂಟ್ರಿಗೆ ಮುಹೂರ್ತ ಫಿಕ್ಸ್‌!

ರೆಡ್ಮಿ ನೋಟ್‌ 12R ಪ್ರೊ 5G ಬೆಲೆ ಮತ್ತು ಲಭ್ಯತೆ ವಿವರ

ರೆಡ್ಮಿ ನೋಟ್‌ 12R ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಏಪ್ರಿಲ್ 29 ಕ್ಕೆ ಬಿಡುಗಡೆಯಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಲಾಂಚ್‌ ಆಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
Redmi Note 12R Pro launching on April 29th: expected specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+