Home
ಸುದ್ದಿಜಾಲ

ಇಂದು ರೆಡ್ಮಿ ನೋಟ್‌ 13 5G ಫೋನಿನ ಸೇಲ್‌ ಆರಂಭ!..ಅಚ್ಚರಿಯ ಬೆಲೆ!

ಭಿನ್ನ ಪ್ರೈಸ್‌ಟ್ಯಾಗ್‌ನ ಮೊಬೈಲ್‌ ಮಾಡೆಲ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಭರ್ಜರಿ ಸದ್ದು ಮಾಡಿರುವ ರೆಡ್ಮಿ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ರೆಡ್ಮಿ ನೋಟ್‌ 13 5G ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಇಂದು (ಜನೆವರಿ 10 ರಂದು) ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ಫಸ್ಟ್‌ ಸೇಲ್‌ ಪ್ರಾರಂಭ ಆಗಲಿದೆ.

ಹೌದು, ರೆಡ್ಮಿ ನೋಟ್‌ 13 5G ಮೊಬೈಲ್‌ ಇಂದು ಮೊದಲ ಸೇಲ್‌ ಅನ್ನು ಅಮೆಜಾನ್‌ ಮೂಲಕ ಪ್ರಾರಂಭ ಮಾಡಿದ್ದು, ಗ್ರಾಹಕರಿಗೆ ಆಕರ್ಷಕ ಕೊಡುಗೆ ಕೂಡಾ ಸಿಗಲಿದೆ. ಈ ಫೋನ್‌ 6 GB RAM + 128 GB ಹಾಗೂ 8 GB RAM+ 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಸೌಲಭ್ಯ ಕೂಡಾ ಇದು ಪಡೆದಿದೆ.

ಇಂದು ರೆಡ್ಮಿ ನೋಟ್‌ 13 5G ಫೋನಿನ ಸೇಲ್‌ ಆರಂಭ!..ಅಚ್ಚರಿಯ ಬೆಲೆ!

ಅಂದಹಾಗೆ ರೆಡ್ಮಿ ನೋಟ್‌ 13 5G ಫೋನ್‌ ಆರಂಭಿಕ ವೇರಿಯಂಟ್‌ ಬೆಲೆಯು 16,999ರೂ. ಆಗಿದೆ. ಇನ್ನು ಈ ಫೋನ್‌ 5,000 mAh ಬ್ಯಾಟರಿ ಸಾಮರ್ಥ್ಯದ ಜೊತೆಗೆ 33W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ ನೋಟ್‌ 13 5G ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್‌ 13 5G - ಫೀಚರ್ಸ್ ಹೀಗಿವೆ

ರೆಡ್ಮಿ ನೋಟ್‌ 13 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದ್ದು, ಇದು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಅನ್ನು ಬೆಂಬಲಿಸಲಿದೆ.

ಇಂದು ರೆಡ್ಮಿ ನೋಟ್‌ 13 5G ಫೋನಿನ ಸೇಲ್‌ ಆರಂಭ!..ಅಚ್ಚರಿಯ ಬೆಲೆ!

ರೆಡ್ಮಿ ನೋಟ್‌ 13 ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಪವರ್‌ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM + 128 GB ಹಾಗೂ 8GB RAM+ 256 GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ರೆಡ್ಮಿ ನೋಟ್‌ 13 ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇಂದು ರೆಡ್ಮಿ ನೋಟ್‌ 13 5G ಫೋನಿನ ಸೇಲ್‌ ಆರಂಭ!..ಅಚ್ಚರಿಯ ಬೆಲೆ!

ರೆಡ್ಮಿ ನೋಟ್‌ 13 ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Redmi Note 13 5G sale today in India. check specifications, price and other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+