Home
ಸುದ್ದಿಜಾಲ

Redmi: ಭಾರತದಲ್ಲಿ ರೆಡ್ಮಿ ನೋಟ್‌ 13 5G ಎಂಟ್ರಿಗೆ ಮುಹೂರ್ತ ಫಿಕ್ಸ್‌! ಸಿಡಿಲಬ್ಬರ ಗ್ಯಾರಂಟಿ!

ರೆಡ್ಮಿ ಬ್ರ್ಯಾಂಡ್‌ನ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಬಿಸಿ ದೋಸೆಯಂತೆ ಬಿಕರಿ ಆಗುತ್ತವೆ. ಇದಕ್ಕೆ ತಕ್ಕಂತೆ ರೆಡ್ಮಿ ಕೂಡ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಟೆಕ್‌ ವಲಯದಲ್ಲಿ ಧೂಳೆಬ್ಬಿಸುತ್ತಿರುವ ರೆಡ್ಮಿ ನೋಟ್‌ 13 5G ಸರಣಿಯು ಭಾರತದಲ್ಲಿ ಎಂಟ್ರಿ ನೀಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ 2024ರ ಜನವರಿ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ಶಿಯೋಮಿ ಕಂಪೆನಿ ದೃಢಪಡಿಸಿದೆ.

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ರೆಡ್ಮಿ ನೋಟ್‌ 13 5G ಸರಣಿ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ. ಈ ಸರಣಿಯಲ್ಲಿ ರೆಡ್ಮಿ ನೋಟ್‌ 13, ರೆಡ್ಮಿ ನೋಟ್‌ 13 ಪ್ರೊ ಮತ್ತು ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಅನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಹಾಗಾದ್ರೆ ರೆಡ್ಮಿ ನೋಟ್‌ 13 5G ಸರಣಿಯಲ್ಲಿ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Redmi: ಭಾರತದಲ್ಲಿ ರೆಡ್ಮಿ ನೋಟ್‌ 13 5G ಎಂಟ್ರಿಗೆ ಮುಹೂರ್ತ ಫಿಕ್ಸ್‌!

ರೆಡ್ಮಿ ನೋಟ್‌ 13 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್‌ 13 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇದರೊಂದಿಗೆ ಡಿಸ್‌ಪ್ಲೇಯು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್‌ 13 5G ಪ್ರೊಸೆಸರ್‌ ಯಾವುದು?
ರೆಡ್ಮಿ ನೋಟ್‌ 13 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 6GB RAM + 128GB ಹಾಗೂ 8GB RAM+ 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು ಎಂದು ಹೇಳಲಾಗಿದೆ.

Redmi: ಭಾರತದಲ್ಲಿ ರೆಡ್ಮಿ ನೋಟ್‌ 13 5G ಎಂಟ್ರಿಗೆ ಮುಹೂರ್ತ ಫಿಕ್ಸ್‌!

ರೆಡ್ಮಿ ನೋಟ್‌ 13 ಕ್ಯಾಮೆರಾ ಸೆಟ್‌ಅಪ್‌ ವಿಶೇಷ
ರೆಡ್ಮಿ ನೋಟ್‌ 13 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿದೆ. ಇದರ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ನೊಂದಿಗೆ ಬರಬಹುದು ಎಂದು ಅಂದಾಜಿಸಲಾಗಿದೆ. ಇದಿಷ್ಟೇ ಅಲ್ಲ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 13 ಬ್ಯಾಟರಿ ಮತ್ತು ಇತರೆ ಸೌಲಭ್ಯ
ರೆಡ್ಮಿ ನೋಟ್‌ 13 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಬಹುದು ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಬೆಂಬಲಿಸಲಿದೆ.

Redmi: ಭಾರತದಲ್ಲಿ ರೆಡ್ಮಿ ನೋಟ್‌ 13 5G ಎಂಟ್ರಿಗೆ ಮುಹೂರ್ತ ಫಿಕ್ಸ್‌!

ರೆಡ್ಮಿ ನೋಟ್‌ 13 ಸರಣಿಯ ನಿರೀಕ್ಷಿತ ಬೆಲೆ ಎಷ್ಟು?
ರೆಡ್ಮಿ ನೋಟ್‌ 13 ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ CNY 1,199 (ಸುಮಾರು 13,900ರೂ) ನಿಂದ ಪ್ರಾರಂಭವಾಗುತ್ತದೆ. ಇದೇ ಬೆಲೆಯಲ್ಲಿ ಭಾರತಕ್ಕೂ ಕೂಡ ಎಂಟ್ರಿ ನೀಡುವ ನಿರೀಕ್ಷೆಯಿದೆ. ಇದರ ಕಲರ್‌ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Redmi Note 13 5G Series set launch date in India on January 4: Expected Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+