Home
ಸುದ್ದಿಜಾಲ

ಶೀಘ್ರದಲ್ಲೇ ಬರಲಿದೆ ರೆಡ್ಮಿ ಸಂಸ್ಥೆಯಿಂದ 200MP ಕ್ಯಾಮೆರಾ ಫೋನ್‌!..120W ವೇಗದ ಚಾರ್ಜಿಂಗ್‌ ಸಾಧ್ಯತೆ!

ಶಿಯೋಮಿ ರೆಡ್ಮಿ ಬ್ರ್ಯಾಂಡ್‌ ಅಡಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಸದ್ದು ಮಾಡುತ್ತಿವೆ. ಇದೇ ಹಾದಿಯಲ್ಲಿ ಟೆಕ್‌ ವಲಯದಲ್ಲಿ ಸದ್ದು ಮಾಡುವ ಭರವಸೆಯನ್ನು ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಮೂಡಿಸಿದೆ. ಈ ಸ್ಮಾರ್ಟ್‌ಫೋನ್‌ ಮುಂದಿನ ವರ್ಷ ಅಂದರೆ ಜನವರಿ 4, 2024ರಂದು ಭಾರತಕ್ಕೆ ಎಂಟ್ರಿ ನೀಡೋದು ಪಕ್ಕಾ ಆಗಿದೆ.

ಹೌದು, ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಜನವರಿ ಮೊದಲ ವಾರದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಶಿಯೋಮಿ ದೃಢಪಡಿಸಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೊರ್‌ ಡೈಮೆನ್ಸಿಟಿ 7200 ಅಲ್ಟ್ರಾ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇದರ ಡಿಸ್‌ಪ್ಲೇ ಪ್ಯಾನೆಲ್ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ ವಿಕ್ಟಸ್‌ ಪ್ರೊಟೆಕ್ಷನ್‌ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶೀಘ್ರದಲ್ಲೇ ಬರಲಿದೆ ರೆಡ್ಮಿ ಸಂಸ್ಥೆಯಿಂದ 200MP ಕ್ಯಾಮೆರಾ ಫೋನ್‌!

ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಡಿಸ್‌ಪ್ಲೇ ರಚನೆ ನಿರೀಕ್ಷೆ?
ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.67 ಇಂಚಿನ OLED ಡಿಸ್‌ಪ್ಲೇಯೊಂದಿಗೆ ಬರಲಿದೆ. ಈ ಡಿಸ್‌ಪ್ಲೇ 1220 x 2712 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದ್ದು, 20:9 ರಚನೆಯ ಅನುಪಾತದೊಂದಿಗೆ ಬರಲಿದೆ. ಇದಲ್ಲದೆ ಡಿಸ್ಪ್ಲೇ ಪ್ಯಾನೆಲ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿರಲಿದೆ.

ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಪ್ರೊಸೆಸರ್‌ ಯಾವುದು?
ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಡೈಮೆನ್ಸಿಟಿ 7200 ಅಲ್ಟ್ರಾ SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು Mali-G610 MC4 GPU ಸಪೋರ್ಟ್‌ ಪಡೆದಿದ್ದು, ಆಂಡ್ರಾಯ್ಡ್‌13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿರಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಶೀಘ್ರದಲ್ಲೇ ಬರಲಿದೆ ರೆಡ್ಮಿ ಸಂಸ್ಥೆಯಿಂದ 200MP ಕ್ಯಾಮೆರಾ ಫೋನ್‌!

ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಕ್ಯಾಮೆರಾ ನಿರೀಕ್ಷೆ ಏನು?
ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ ಎನ್ನಲಾಗಿದೆ. ಎರಡನೆ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ನೊಂದಿಗೆ ಬರುವ ಸಾಧ್ಯತೆಯಿದೆ. ಇದಲ್ಲದೆ 16MP ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಬ್ಯಾಟರಿ ಸಾಮರ್ಥ್ಯ
ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಬಹುದು. ಇದು 120W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ,ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಹೊಂದಿರಲಿದೆ. ಜೊತೆಗೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, IP68 ರೇಟಿಂಗ್ ಮತ್ತು ಸ್ಟಿರಿಯೊ ಸ್ಪೀಕರ್ ಸೆಟಪ್ ನೊಂದಿಗೆ ಬರಲಿದೆ.

ಶೀಘ್ರದಲ್ಲೇ ಬರಲಿದೆ ರೆಡ್ಮಿ ಸಂಸ್ಥೆಯಿಂದ 200MP ಕ್ಯಾಮೆರಾ ಫೋನ್‌!

ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ 5G ಬೆಲೆ ಮತ್ತು ಲಭ್ಯತೆ
ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ 5G ಸ್ಮಾರ್ಟ್‌ಫೋನ್‌ ಜನವರಿ ಮೊದಲ ವಾರದಲ್ಲಿ ಬರಲಿದೆ. ಇದರ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ನಿರೀಕ್ಷೆಯಿದೆ. ಇದರ ಕಲರ್‌ ಆಯ್ಕೆಗಳ ವಿವರಗಳು ಕೂಡ ತಿಳಿದುಬಂದಿಲ್ಲ.

Best Mobiles in India

English summary
Redmi Note 13 Pro+ 5G is set to Launch Date in India on January 4
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+