ಬಹಿರಂಗವಾಯ್ತು ರೆಡ್ಮಿ ನೋಟ್ 13 ಪ್ರೊ ಪ್ಲಸ್ ಫೀಚರ್ಸ್; 120W ವೇಗದ ಚಾರ್ಜಿಂಗ್ ನಿರೀಕ್ಷೆ!
ಶಿಯೋಮಿ ಸಂಸ್ಥೆಯು ತನ್ನ ರೆಡ್ಮಿ ಬ್ರ್ಯಾಂಡ್‌ನಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಹೊಸ ರೆಡ್ಮಿ ನೋಟ್ 13 ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎನ್ನಲಾಗಿದೆ. ಇನ್ನು ಈ ಸರಣಿಯಲ್ಲಿ ರೆಡ್ಮಿ ನೋಟ್ 13, ರೆಡ್ಮಿ ನೋಟ್ 13ಪ್ರೊ ಮತ್ತು ರೆಡ್ಮಿ ನೋಟ್ 13 ಪ್ರೊ+ ಸ್ಮಾರ್ಟ್‌ಫೋನ್‌ಗಳು ಬರಲಿವೆ.
ಹೌದು, ರೆಡ್ಮಿ ನೋಟ್ 13 ಬಿಡುಗಡೆಗೆ ಸಿದ್ಧವಾಗಿದೆ. ಇದರಲ್ಲಿ ರೆಡ್ಮಿ ನೋಟ್ 13 ಪ್ರೊ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್ 200 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾದೊಂದಿಗೆ ಬರಲಿದೆ ಎನ್ನಲಾಗಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬಲದೊಂದಿಗೆ ಬರುವ ನಿರೀಕ್ಷೆಯಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಹಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 13 ಪ್ರೊ ಪ್ಲಸ್ ಡಿಸ್‌ಪ್ಲೇ ನಿರೀಕ್ಷೆ?
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುವ ನಿರೀಕ್ಷೆಯಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತದೊಂದಿಗೆ ಬರಲಿದೆ. ಇದಲ್ಲದೆ ಈ ಡಿಸ್‌ಪ್ಲೇ 395 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಪ್ರೊಸೆಸರ್ ಯಾವುದು?
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200 MT6893 ಪ್ರೊಸೆಸರ್‌ನಲ್ಲಿ ಬರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಮಾಲಿ-G77 MC9 ಸಪೋರ್ಟ್ ಪಡೆದಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್‌ನಲ್ಲಿ ಬರಲಿದೆ. ಇನ್ನು ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್‌ನೊಂದಿಗೆ ಬರಲಿದೆ. ಇನ್ನುಳಿದ ಕ್ಯಾಮೆರಾ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಇನ್ನು ಸ್ಮಾರ್ಟ್‌ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಬ್ಯಾಟರಿ ಮತ್ತು ಇತರೆ ಸೌಲಭ್ಯ
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ 120W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಲೈಟ್ ಸೆನ್ಸರ್, ಕಂಪಾಸ್, ಜಿರೋಸ್ಕೋಪ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ.
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಬೆಲೆ ಮತ್ತು ಲಭ್ಯತೆ
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಇದೇ ತಿಂಗಳು ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಈ ಸ್ಮಾರ್ಟ್‌ಫೋನ್ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಬೆಲೆ ವಿವರಗಳು ಬಹಿರಂಗವಾಗುವ ನಿರೀಕ್ಷೆಯಿದೆ. ಇದರ ಕಲರ್ ಆಯ್ಕೆಗಳ ಬಗ್ಗೆ ಕೂಡ ಇನ್ನಷ್ಟು ವಿವರಗಳು ಶೀಘ್ರದಲ್ಲೇ ಬಹಿರಂಗವಾಗಲಿದೆ.


Click it and Unblock the Notifications








