ಸೈಲೆಂಟ್ ಆಗಿ ಎಂಟ್ರಿ ಕೊಟ್ಟ ರೆಡ್ಮಿ ನೋಟ್ 13.. ಅತ್ಯಾಕರ್ಷಕ ಕ್ಯಾಮೆರಾ ಫೀಚರ್ಸ್!
ಶಿಯೋಮಿ ರೆಡ್ಮಿ ಬ್ರ್ಯಾಂಡ್‌ನ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಕ್ರೇಜ್ ಇದೆ. ಅದರಲ್ಲೂ ರೆಡ್ಮಿ ನೋಟ್ ಸರಣಿಯ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಟ್ರೆಂಡ್ ಸೃಷ್ಟಿಸಿವೆ. ಇದೀಗ ರೆಡ್ಮಿ ನೋಟ್ ಸರಣಿಯಲ್ಲಿ ರೆಡ್ಮಿ ನೋಟ್ 13 ಸ್ಮಾರ್ಟ್‌ಫೋನ್ ಸೈಲೆಂಟ್ ಆಗಿ ಎಂಟ್ರಿ ನೀಡಿದೆ. ಇದು ಡೈಮೆನ್ಸಿಟಿ 6080 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ರೆಡ್ಮಿ ನೋಟ್ 13 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 13 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್ 13 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇದು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ ನೋಟ್ 13 ಪ್ರೊಸೆಸರ್ ಯಾವುದು?
ರೆಡ್ಮಿ ನೋಟ್ 13 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಹಾಗೂ 8GB RAM+ 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.
ರೆಡ್ಮಿ ನೋಟ್ 13 ಕ್ಯಾಮೆರಾ ಸೆಟ್‌ಅಪ್
ರೆಡ್ಮಿ ನೋಟ್ 13 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ ನೋಟ್ 13 ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 13 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ
3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ ನೋಟ್ 13 ಬೆಲೆ ಮತ್ತು ಲಭ್ಯತೆ
ರೆಡ್ಮಿ ನೋಟ್ 13 ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ಆಯ್ಕೆಗೆ ಯುವಾನ್ 1,199 (ಅಂದಾಜು 13,640ರೂ) ಬೆಲೆಯನ್ನು ಹೊಂದಿದೆ. ಇದರ 8GB + 128GB ಸ್ಟೋರೇಜ್ ಆಯ್ಕೆಗೆ 1,299 ಯುವಾನ್ (ಸುಮಾರು 15,005ರೂ) ಬೆಲೆ ಹೊಂದಿದೆ. ಇನ್ನು 8GB + 256GB ಆಯ್ಕೆಗೆ ಯುವಾನ್ 1,499 (ಅಂದಾಜು 17,315ರೂ) ಹಾಗೂ 12GB + 256GB ಆಯ್ಕೆಯು ಯುವಾನ್ 1,699 (ಅಂದಾಜು 19,625ರೂ)ಬೆಲೆಯನ್ನು ಪಡೆದುಕೊಂಡಿದೆ.
ಈ ಸ್ಮಾರ್ಟ್‌ಫೋನ್ ಅನ್ನು ಸ್ಟಾರ್ ಸ್ಯಾಂಡ್ ವೈಟ್, ಮಿಡ್ನೈಟ್ ಡಾರ್ಕ್ ಮತ್ತು ಟೈಮ್ ಬ್ಲೂ ಬಣ್ಣಗಳಲ್ಲಿ ನೀಡಲಾಗುತ್ತದೆ.


Click it and Unblock the Notifications








