ನಾಳೆ ಹೊಸ ರೆಡ್ಮಿ ನೋಟ್ 14 5G ಫೋನಿನ ಫಸ್ಟ್ ಸೇಲ್ ಶುರು; ಆಫರ್ ಸಿಗುತ್ತಾ?
ಭಿನ್ನ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಲೀಡಿಂಗ್ ಸ್ಥಾನದಲ್ಲಿ ಕಾಣಿಸಿಕೊಂಡಿರುವ ರೆಡ್ಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ರೆಡ್ಮಿ ನೋಟ್ 14 5G (Redmi Note 14 5G) ಮೊಬೈಲ್ ಅನ್ನು ಇತ್ತೀಚಿಗೆ ಮಾರುಕಟ್ಟೆಗೆ ಪರಿಚಯಿಸಿ ಗಮನ ಸೆಳೆದಿದೆ. ಈ ನೂತನ ಮೊಬೈಲ್ ನಾಳೆ (ಡಿಸೆಂಬರ್ 13 ರಂದು) ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಫಸ್ಟ್ ಸೇಲ್ ಪ್ರಾರಂಭ ಮಾಡಲಿದ್ದು, ಅಗ್ಗದ ಬೆಲೆ ಪಡೆದಿದೆ. ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜೆನ್ 2 ಚಿಪ್‌ಸೆಟ್ ಪ್ರೊಸೆಸರ್ ಪಡೆದಿದೆ.
ಹೌದು, ರೆಡ್ಮಿ ನೋಟ್ 14 5G (Redmi Note 14 5G) ಮೊಬೈಲ್ ನಾಳೆ ಮೊದಲ ಸೇಲ್ ಅನ್ನು ಅಮೆಜಾನ್ ಹಾಗೂ ರೆಡ್ಮಿ ವೆಬ್‌ಸೈಟ್ ಮೂಲಕ ಪ್ರಾರಂಭ ಮಾಡಲಿದ್ದು, ಖರೀದಿದಾರರಿಗೆ ಆಕರ್ಷಕ ಆಫರ್ ಕೂಡಾ ಸಿಗಲಿದೆ. ಈ ಫೋನ್ 6GB + 128GB ವೇರಿಯಂಟ್, 8GB + 128GB ವೇರಿಯಂಟ್ ಹಾಗೂ 8GB + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.

ಅಂದಹಾಗೆ ಈ ಫೋನಿನ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದ್ದು, ಇದರೊಂದಿಗೆ 5000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಅಲ್ಲದೇ 16 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 17,999ರೂ. ಆಗಿದೆ. ಹಾಗಾದರೆ ರೆಡ್ಮಿ ನೋಟ್ 14 5G (Redmi Note 14 5G) ಫೋನಿನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆಯ ಮಾಹಿತಿ
ರೆಡ್ಮಿ ನೋಟ್ 14 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲ ಇದ್ದು, ಇದು 2100 nits ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಬೆಂಬಲಿಸಲಿದೆ.
ಪ್ರೊಸೆಸರ್ ಪವರ್ ಯಾವುದು
ರೆಡ್ಮಿ ನೋಟ್ 14 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 6GB + 128GB, 8GB + 128GB ಹಾಗೂ 8GB+256GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ಪಡೆದಿದೆ.
ಕ್ಯಾಮೆರಾ ರಚನೆಯ ಮಾಹಿತಿ
ರೆಡ್ಮಿ ನೋಟ್ 14 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದ್ದು, ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ವೇಗದ ಚಾರ್ಜಿಂಗ್
ರೆಡ್ಮಿ ನೋಟ್ 14 5G ಮೊಬೈಲ್ 5110mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 45W ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಅಲ್ಲದೇ ಈ ಫೋನ್ ಫ್ಯಾಂಟಮ್ ಪರ್ಪಲ್, ಟೈಟಾನ್ ಬ್ಲಾಕ್, ಮಿಸ್ಟಿಕ್ ವೈಟ್ ಕಲರ್ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ ಇದು ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಹಾಗೂ IP64 ರೇಟಿಂಗ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಪಡೆದಿದೆ. ಈ ಫೋನಿನ ಬೇಸ್ ವೇರಿಯಂಟ್ (6GB + 128GB) ಬೆಲೆಯು 17,999ರೂ. ಆಗಿದೆ.


Click it and Unblock the Notifications