ಸದ್ದಿಲ್ಲದೆ Redmi Note 14 5G ಫೋನ್ ಬಿಡುಗಡೆ; ಖರೀದಿಗೆ ಕ್ಯೂ ಖಚಿತ!
ಶಿಯೋಮಿ ರೆಡ್ಮಿ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ತನ್ನದೇ ಗ್ರಾಹಕ ಬಳಗವನ್ನು ಹೊಂದಿದೆ. ಇನ್ನು ಸಂಸ್ಥೆಯ ನೋಟ್ ಸರಣಿಯ ಫೋನ್‌ಗಳು ಹೆಚ್ಚು ಜನಪ್ರಿಯತೆ ಪಡೆದಿದ್ದು, ಈ ಸರಣಿಯ ಮುಂದಿನ ಆವೃತ್ತಿಯಾಗಿ ಇದೀಗ ಸಂಸ್ಥೆಯು ರೆಡ್ಮಿ ನೋಟ್ 14 5G (Redmi Note 14 5G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸದ್ದಿಲ್ಲದೆ ಎಂಟ್ರಿ ನೀಡಿರುವ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ.
ಹೌದು, ರೆಡ್ಮಿ ನೋಟ್ 14 (Redmi Note 14 5G) ಸ್ಮಾರ್ಟ್‌ಫೋನ್ ಈಗ ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಇದರ ಜೊತೆಗೆ 5110mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಗ್ರಾಹಕರ ಗಮನ ಸೆಳೆದಿದೆ.

ಹಾಗೆಯೇ ರೆಡ್ಮಿ ನೋಟ್ 14 ಮೊಬೈಲ್ 6GB + 128GB, 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಇದು ಸ್ಟಾರ್ರಿ ವೈಟ್, ಫ್ಯಾಂಟಮ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನುಳಿದಂತೆ ರೆಡ್ಮಿ ನೋಟ್ 14 5G ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ ನೋಟ್ 14 5G - ಫೀಚರ್ಸ್
ರೆಡ್ಮಿ ನೋಟ್ 14 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ Super AMOLED ಡಿಸ್‌ಪ್ಲೇಯನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲ ಇದ್ದು, ಇದು 2100 nits ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ ನೋಟ್ 14 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ SoC ಪ್ರೊಸೆಸರ್ ವೇಗದಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB + 128GB, 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.
ರೆಡ್ಮಿ ನೋಟ್ 14 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದ್ದು, ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ ನೋಟ್ 14 5G ಸ್ಮಾರ್ಟ್‌ಫೋನ್ 5110mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G, ಬ್ಲೂಟೂತ್ 5.3, USB ಟೈಪ್-C ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಚೀನಾದಲ್ಲಿ ಈ ಫೋನಿನ ಆರಂಭಿಕ 6GB + 128GB ವೇರಿಯಂಟ್ ಬೆಲೆಯು 1199 yuan (ಭಾರತದಲ್ಲಿ ಅಂದಾಜು 14,300ರೂ. ಎನ್ನಲಾಗಿದೆ) ಆಗಿದೆ.


Click it and Unblock the Notifications








