Home
ಸುದ್ದಿಜಾಲ

Redmi: ಬರ್ತಿದೆ ಹೊಸ ಫೋನ್; 512GB ಸ್ಟೋರೇಜ್, ಸೂಪರ್ ಬ್ಯಾಟರಿ.. ಬೆಲೆಯೂ ಕಡಿಮೆ!

ರೆಡ್ಮಿ (Redmi) ಕಂಪನಿಯು ಮೂರು ಹೊಸ ಮೊಬೈಲ್‌ ಬಿಡುಗಡೆಗೆ ಸಜ್ಜಾಗಿದೆ. ಹೌದು, ಇತ್ತೀಚೆಗೆ ರೆಡ್ಮಿ ನೋಟ್ 14 (Redmi Note 14) ಸರಣಿಯನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಇದರ ಅಡಿಯಲ್ಲಿ ರೆಡ್ಮಿ ನೋಟ್ 14 5G, ರೆಡ್ಮಿ ನೋಟ್ 14 ಪ್ರೊ 5G ಮತ್ತು ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಫೋನ್‌ಗಳನ್ನು ಲೋಕಾರ್ಪಣೆಗೊಳಿಸಿದೆ. ಶೀಘ್ರದಲ್ಲಿಯೇ, ಈ ಮೂರು ಮೊಬೈಲ್‌ಗಳನ್ನು ಭಾರತೀಯ ಮಾರುಕಟ್ಟೆಗೂ ಪರಿಚಯಿಸಲಿದೆ. ಈ 5G ಫೋನ್‌ಗಳ ಬಿಡುಗಡೆಗೂ ಮೊದಲೇ, ರೆಡ್ಮಿ ನೋಟ್ 14 ಪ್ರೊ 4G ವೈಶಿಷ್ಟ್ಯಗಳನ್ನು ಬಹಿರಂಗಪಡಿಸಲಾಗಿದೆ.

ಹೌದು, ರೆಡ್ಮಿ ನೋಟ್ 14 ಪ್ರೊ 4G ಮೊಬೈಲ್ ಕೆಲವು ಪ್ರಮಾಣೀಕರಣ ಸೈಟ್‌ನಲ್ಲಿ ಕಾಣಿಸಿಕೊಂಡಿದೆ. ಇದನ್ನು ಮಾಡೆಲ್ ಸಂಖ್ಯೆ 24116RACCG ಯೊಂದಿಗೆ ಪಟ್ಟಿಮಾಡಲಾಗಿದೆ. ಈ ಮೂಲಕ, ಕಂಪನಿಯು ತನ್ನ ಹೊಸ 4G ಫೋನ್‌ ತರುವುದು ಖಚಿತವಾಗಿದೆ. ಇದನ್ನು ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಈ ಮೊಬೈಲ್ ನಾಲ್ಕು ಸ್ಟೋರೇಜ್‌ ರೂಪಾಂತರಗಳಲ್ಲಿ ಬರುತ್ತದೆ. ಇದರೊಂದಿಗೆ, ಮುಂಬರುವ ರೆಡ್ಮಿ ನೋಟ್ ಫೋನಿನ ಹಲವು ಪ್ರಮುಖ ವೈಶಿಷ್ಟ್ಯಗಳನ್ನು ಸಹ ಬಹಿರಂಗಪಡಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Redmi: ಬರ್ತಿದೆ ಹೊಸ ಫೋನ್; 512GB ಸ್ಟೋರೇಜ್, ದೊಡ್ಡ ಬ್ಯಾಟರಿ.. ಕಡಿಮೆ ಬೆಲೆ!

ರೆಡ್ಮಿ ನೋಟ್ 14 ಪ್ರೊ 4G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರೆಡ್ಮಿ ನೋಟ್ 14 ಪ್ರೊ 4G ಮೊಬೈಲ್ 6.67 ಇಂಚಿನ ಪೂರ್ಣ ಎಚ್‌ಡಿ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು 1,080 X 2,400 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರಲಿದೆ. ವರದಿಯ ಪ್ರಕಾರ, ಈ ರೆಡ್ಮಿ ಫೋನಿನಲ್ಲಿ ಪೋಲೆಡ್ (pOLED) ಸ್ಕ್ರೀನ್ ಪ್ಯಾನೆಲ್ ಬಳಸಲಾಗುತ್ತದೆ.

ಸ್ಟೋರೇಜ್ ಆಯ್ಕೆ

ಪ್ರಮಾಣೀಕರಣ ಸೈಟ್‌ನಲ್ಲಿ ರೆಡ್ಮಿ ನೋಟ್ 14 ಪ್ರೊ 4G ಫೋನನ್ನು ಒಟ್ಟು ನಾಲ್ಕು ಸ್ಟೋರೇಜ್‌ ರೂಪಾಂತರಗಳಲ್ಲಿ ತೋರಿಸಲಾಗಿದೆ. ಎರಡು ರೂಪಾಂತರಗಳು 8GB RAM ಅನ್ನು ಹೊಂದಿರಲಿದೆ. ಇನ್ನುಳಿದ ಎರಡು ರೂಪಾಂತರಗಳು 12GB RAM ಅನ್ನು ಹೊಂದಿವೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್, 8GB RAM + 256GB ಸ್ಟೋರೇಜ್, 12GB RAM + 256GB ಸ್ಟೋರೇಜ್, 12GB RAM + 512GB ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಮುಂಬರುವ ರೆಡ್ಮಿ ನೋಟ್ 14 ಪ್ರೊ 4G ಸ್ಮಾರ್ಟ್‌ಫೋನ್ 5,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುತ್ತದೆ ಎಂದು ಪಟ್ಟಿಯಲ್ಲಿ ಬಹಿರಂಗಪಡಿಸಲಾಗಿದೆ. ಈ ದೊಡ್ಡ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, ಕಂಪನಿಯು 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸುವ ಸಾಧ್ಯತೆಯಿದೆ.

ಇತರೆ ವೈಶಿಷ್ಟ್ಯಗಳು

ಮಾಹಿತಿಯ ಪ್ರಕಾರ, ರೆಡ್ಮಿ ನೋಟ್ 14 ಪ್ರೊ 4G ಮೊಬೈಲ್ ಡ್ಯುಯಲ್ ಬ್ಯಾಂಡ್ ವೈ-ಫೈ ಮತ್ತು ಬ್ಲೂಟೂತ್ ಅನ್ನು ಬೆಂಬಲಿಸುತ್ತದೆ. ಈ ಫೋನಿನಲ್ಲಿ NFC ಬೆಂಬಲ ಸಹ ಇರಲಿದೆ. ಈ ಮೊಬೈಲ್ ಡ್ಯುಯಲ್ ಸ್ಪೀಕರ್‌ಗಳು ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಸಹ ಹೊಂದಿರುವ ನಿರೀಕ್ಷೆಯಿದೆ.

ರೆಡ್ಮಿ ನೋಟ್ 14 ಪ್ರೊ 5G ಮೊಬೈಲ್‌ನ ವೈಶಿಷ್ಟ್ಯಗಳು

ರೆಡ್ಮಿ ನೋಟ್ 14 ಪ್ರೊ 5G ಫೋನ್ 6.67 ಇಂಚಿನ 1.5K ಕರ್ವ್ಡ್ OLED ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 1200 ನಿಟ್ಸ್ ಬ್ರೈಟ್‌ನೆಸ್ ಮತ್ತು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಬೆಂಬಲ ಹೊಂದಿದೆ. ಇದು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಮಾಲಿ G615 MC2 ಜಿಪಿಯು ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ LYT600 ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೋನಿ IMX355 ಅಲ್ಟ್ರಾವೈಡ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. ಸೆಲ್ಫಿ ಪ್ರಿಯರಿಗಾಗಿ, 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. ಈ ಸ್ಮಾರ್ಟ್‌ಫೋನ್ 5,500mAh ಬ್ಯಾಟರಿ ಹೊಂದಿದೆ. ಇದು 45W ವೇಗದ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

Best Mobiles in India

English summary
Redmi Note 14 Pro 4G smartphones india launch soon: Expected price, specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+