ನಾಳೆ Redmi Note 14 Pro+ 5G ಫಸ್ಟ್ ಸೇಲ್; 512GB ಸ್ಟೋರೇಜ್.. 6200mAh ಬ್ಯಾಟರಿ.. ಭರ್ಜರಿ ಆಫರ್!
ರೆಡ್ಮಿ ಇತ್ತೀಚೆಗೆ ಬಹುನಿರೀಕ್ಷಿತ ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G (Redmi Note 14 Pro+ 5G) ಫೋನನ್ನು ಬಿಡುಗಡೆ ಮಾಡಿದೆ. ಇದನ್ನು Redmi Note 14 ಸರಣಿಯಲ್ಲಿ ಪರಿಚಯಿಸಲಾಗಿದೆ. ಈ ಮೊಬೈಲ್ ನಾಳೆ (ಡಿಸೆಂಬರ್ 13) ಅಧಿಕೃತವಾಗಿ ಗ್ರಾಹಕರ ಕೈ ಸೇರಲಿದೆ. ಹೌದು, ಈ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್ ಮೂಲಕ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಬನ್ನಿ, ಈ ಹೊಸ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಮೊಬೈಲ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 7S ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 512GB ಸ್ಟೋರೇಜ್, 6200mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಿದ್ಧವಾಗಿದೆ.

20ಕ್ಕೂ ಹೆಚ್ಚು ಎಐ ವೈಶಿಷ್ಟ್ಯಗಳು
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಸೂಪರ್ ಎಐ ಸ್ಮಾರ್ಟ್‌ಫೋನ್ ಎಂಬ ಹೆಗ್ಗಳಿಕೆ ಪಡೆದಿದೆ. ಈ ಫೋನಿನಲ್ಲಿ 20ಕ್ಕೂ ಹೆಚ್ಚು ಎಐ ವೈಶಿಷ್ಟ್ಯಗಳು ಲಭ್ಯವಿದೆ. ಎಐ ಇಮೇಜ್ ವಿಸ್ತರಣೆ, ಎಐ ಎರೇಸ್ ಪ್ರೊ, ಎಐ ಸ್ಮಾರ್ಟ್ ಕ್ಲಿಪ್, ಎಐ ಕಟೌಟ್, ಎಐ ಸ್ಕೈ, ಎಐ ಇಂಟರ್ಪ್ರಿಟರ್, ಎಐ ಲೈವ್ ಟ್ರಾನ್ಸ್‌ಲೇಟ್, ಎಐ ಉಪಶೀರ್ಷಿಕೆಗಳು, ಅಂತರ್ನಿರ್ಮಿತ ಜೆಮಿನಿ, ಜೋನ್ ಟು ಸರ್ಚ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G: ಟಾಪ್ 5 ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್ 6.67 ಇಂಚಿನ 1.5K ಡಿಸ್ಪ್ಲೇ ಹೊಂದಿದೆ. ಇದು 2712 x 1220 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಡಾಲ್ಬಿ ವಿಷನ್ ತಂತ್ರಜ್ಞಾನ ಹೊಂದಿದೆ. ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಯಾವುದು?
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S ಜೆನ್ 3 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸುತ್ತದೆ.
ಟ್ರಿಪಲ್ ಕ್ಯಾಮೆರಾ ಸೆಟಪ್
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನ್ OIS ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಜೊತೆಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 20 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಇದೆ.
6200mAh ದೊಡ್ಡ ಬ್ಯಾಟರಿ
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್ 6200mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಕಲ್ಫಿಸಲಾಗಿದೆ. ಈ ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ.
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಬೆಲೆ ಮತ್ತು ಲಭ್ಯತೆ
8GB + 12GB ಸ್ಟೋರೇಜ್ ಬೆಲೆ = 29,999 ರೂ.
8GB + 256GB ಸ್ಟೋರೇಜ್ ಬೆಲೆ = 31,999 ರೂ.
8GB + 512GB ಸ್ಟೋರೇಜ್ ಬೆಲೆ = 34,999 ರೂ.
ಕಂಪನಿಯು ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಫೋನನ್ನು 29,999 ರೂ. ಆರಂಭಿಕ ಬೆಲೆಯಲ್ಲಿ ಪರಿಚಯಿಸಿದೆ. ಇದು ಬ್ಯಾಂಕ್ ಆಫರ್‌ಗಳು ಮತ್ತು ಎಕ್ಸ್‌ಚೇಂಜ್ ಆಫರ್‌ಗಳನ್ನು ಒಳಗೊಂಡಿದೆ. ಈ ಫೋನಿನ ಮಾರಾಟವು ಡಿಸೆಂಬರ್ 13 ರಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಾರಂಭವಾಗಲಿದೆ. ನೀವು, ಕಂಪನಿಯ ವೆಬ್‌ಸೈಟ್, ಅಮೆಜಾನ್‌ನಲ್ಲಿ ಕೊಳ್ಳಬಹುದು.


Click it and Unblock the Notifications