Just In
- 56 min ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 1 hr ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 2 hrs ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 18 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
Don't Miss
- News
ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ: ಯೋಗಿ ಆದಿತ್ಯನಾಥ್ ಮತ್ತೆ ವಿವಾದ
- Finance
ವಿಶ್ವದ ಶ್ರೀಮಂತ ವ್ಯಕ್ತಿ: 3ರಿಂದ 7ನೇ ಸ್ಥಾನಕ್ಕೆ ಇಳಿದ ಅದಾನಿ, ಹೂಡಿಕೆದಾರರ ನಂಬಿಕೆ ಗಳಿಸುವಲ್ಲಿ ಸೋತರೇ?
- Movies
ಕ್ರಾಂತಿಗೆ ಸಿಕ್ಕಾಪಟ್ಟೆ ನೆಗೆಟಿವ್ ವಿಮರ್ಶೆ; ಚಿತ್ರ ನೋಡಿ ಕಿಡಿಕಾರಿದ ನಟ ಪ್ರಮೋದ್!
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಂತರಿಕ್ಷದಲ್ಲಿ ಫೋಟೊ ತೆಗೆದು ಇತಿಹಾಸ ಸೃಷ್ಠಿಸಿತು 'ರೆಡ್‌ಮಿ ನೋಟ್ 7'!..ವಿಡಿಯೋ ನೋಡಿ!
ಭಾರತದಲ್ಲಿ ಮಾತ್ರವಲ್ಲದೇ ವಿಶ್ವ ಮೊಬೈಲ್ ಮಾರುಕಟ್ಟೆಯಲ್ಲೂ ಶಿಯೋಮಿ 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಭರ್ಜರಿ ಮಾರಾಟವಾಗುತ್ತಿದೆ. ಆದರೆ, ಈ ಮಾರಾಟದ ಬಗ್ಗೆ ಶಿಯೋಮಿ ಕಂಪೆನಿ ತೃಪ್ತಿ ಹೊಂದಿಲ್ಲ ಎನ್ನಬಹುದು.! ಏಕೆಂದರೆ, ರೆಡ್‌ಮಿ ನೋಟ್ 7 ಕಡೆಗೆ ಗ್ರಾಹಕರ ಗಮನಸೆಳೆಯಲು ಶಿಯೋಮಿ ಕಂಪೆನಿ ಮಾಡಿದ ಆ ಒಂದು ಕೆಲಸಕ್ಕೆ ಮೊಬೈಲ್ ಮಾರುಕಟ್ಟೆಯೇ ಆಶ್ಚರ್ಯಪಟ್ಟಿದೆ. ಗ್ರಾಹಕರನ್ನು ಸೆಳೆಯುವ ಸಲುವಾಗಿ ಶಿಯೋಮಿ ತನ್ನ ರೆಡ್‌ಮಿ ನೋಟ್ 7 ಸ್ಮಾರ್ಟ್‌ಫೋನನ್ನು ಅಂತರಿಕ್ಷಕ್ಕೆ ಹಾರಿಸಿ ಎಲ್ಲರ ತಲೆಕೆಡಿಸಿದೆ.!

ಹೌದು, ತನ್ನ ವಿಶೇಷ ಜಾಹಿರಾತುಗಳ ಮೂಲಕ ಗ್ರಾಹಕರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿರುವ ಶಿಯೋಮಿ, ಇದೀಗ ತನ್ನ 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಮೂಲಕ ಅಂತರಿಕ್ಷದಲ್ಲಿ ಸೆಲ್ಫೀ ತೆಗೆದು ತೋರಿಸಿದೆ. ಬಲೂನ್ ಮೂಲಕ 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಅನ್ನು 35,375 ಮೀಟರ್ ಎತ್ತರಕ್ಕೆ ಹಾರಿಸಿರುವ ಶಿಯೋಮಿ, ಆ ಎತ್ತರದಲ್ಲಿ (56 ಡಿಗ್ರಿ ಉಷ್ಣತೆ) ಫೋನಿನಲ್ಲಿ ಚಿತ್ರಗಳನ್ನು ತೆಗೆದು ಆಶ್ಚರ್ಯ ಮೂಡಿಸಿದೆ. 56 ಡಿಗ್ರಿ ಉಷ್ಣತೆಯಲ್ಲೂ ಫೋನ್ ಯಾವುದೇ ಸಮಸ್ಯೆಯನ್ನು ಎದುರಿಸದೇ ವಿಡಿಯೋ ಮತ್ತು ಚಿತ್ರಗಳನ್ನು ಚಿತ್ರಿಸಿದೆ.!
Some stellar space shots by #RedmiNote7. #48MPforEveryone gives you the bigger picture. pic.twitter.com/9pfZ2x64ED
— Xiaomi #5GIsHere (@Xiaomi) May 5, 2019
ಶಿಯೋಮಿ ಸಂಸ್ಥೆಯ ಅಫಿಷಿಯಲ್ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೊಗಳನ್ನು ಹಂಚಿಕೊಳ್ಳಲಾಗಿದ್ದು, ಬಾಹ್ಯಾಕಾಶದಿಂದ ತೆಗೆದ ಚಿತ್ರಗಳನ್ನು ಮೊಬೈಲ್ ಮಾರಾಟಗಾರಿಕೆ ತಂತ್ರವಾಗಿ ಉಪಯೋಗಿಸಿಕೊಂಡಿರುವ ಈ ವಿಧಾನ ಎಲ್ಲರ ಗಮನಸೆಳೆದಿದೆ. ಚೀನಾದಲ್ಲಿ 'ರೆಡ್‌ಮಿ ನೋಟ್ 7' ಆಗಿರುವ ಈ ಫೋನ್ ಭಾರತದಲ್ಲಿ 'ರೆಡ್‌ಮಿ ನೋಟ್ 7 ಪ್ರೊ' ಮಾದರಿಯಾಗಿದ್ದು, ಅಂತರಿಕ್ಷಕ್ಕೆ ಹಾರಿದ ಫೋನನ್ನು ನಾವು 'ರೆಡ್‌ಮಿ ನೋಟ್ 7 ಪ್ರೊ' ಎಂದು ತಿಳಿಯಬೇಕಿದೆ. ಹಾಗಾದರೆ, ರೆಡ್‌ಮಿ ನೋಟ್ 7 ಪ್ರೋ ಹೇಗಿದೆ ನೋಡೋಣ ಬನ್ನಿ. ವಿಡಿಯೋವನ್ನು ಲೇಖನದ ಕೊನೆಯಲ್ಲಿ ನೀವು ವೀಕ್ಷಿಸಬಹುದು.

'ರೆಡ್‌ಮಿ ನೋಟ್ 7 ಪ್ರೊ' ಡಿಸೈನ್
ಈಗಾಗಲೇ ವಿಶ್ವ ಮಾರುಕಟ್ಟೆಗೆ ಕಾಲಿಟ್ಟಿರುವ ರೆಡ್‌ಮಿ ನೋಟ್ 7 ಮಾದರಿಯಲ್ಲೇ 'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನ್ ವಿನ್ಯಾಸವನ್ನು ಹೊಂದಿದೆ ಎಂದು ಹೇಳಬಹುದು. ಹಿಂಬಾಗದಲ್ಲಿ ಡ್ಯುಯಲ್ ಕ್ಯಾಮೆರಾ ಮತ್ತು ಫಿಂಗರ್‌ಪ್ರಿಂಟ್ ಆಯ್ಕೆಯ ಡಿಸೈನ್ ಹೊಂದಿರುವ ಸ್ಮಾರ್ಟ್‌ಪೋನ್ ಎರಡೂ ಭಾಗಗಳಲ್ಲಿ 2.D ಕರ್ವಡ್ ಗ್ಲಾಸ್ ಡಿಸೈನ್ ಹೊಂದಿರುವುದು ವಿಶೇಷ ಎನ್ನಬಹುದು.

'ರೆಡ್‌ಮಿ ನೋಟ್ 7 ಪ್ರೊ' ಡಿಸ್‌ಪ್ಲೇ.
'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನ್ FHD + ರೆಸಲ್ಯೂಶನ್ ಮತ್ತು 19.5:9ರ ಆಕಾರ ಅನುಪಾತದೊಂದಿಗೆ 6.3-ಇಂಚಿನ LTPS ಎಲ್‌ಸಿಡಿ ಪ್ರದರ್ಶನದೊಂದಿಗೆ ಬಿಡುಗಡೆಯಾಗಿದೆ. ಕಣ್ಣಿನ ಒತ್ತಡವನ್ನು ತಪ್ಪಿಸಲು ಸನ್‌ಲೈಟ್ ಡಿಸ್‌ಪ್ಲೇ ಮತ್ತು ಓದುವಿಕೆ ವಿಶೇಷ ಮೋಡ್ ಅನ್ನು ಹೊಂದಿರುವ ಫೋನ್ ಭಾಗಶಃ ಪೂರ್ಣ ಪ್ರಮಾಣದ ಸ್ಕ್ರೀನ್ ಡಿಸ್‌ಪ್ಲೇಯಂತೆ ಹೊಂದಿದೆ.

'ರೆಡ್‌ಮಿ ನೋಟ್ 7 ಪ್ರೊ' ಪ್ರೊಸೆಸರ್
ಆಕ್ಟಕೋರ್ ಸ್ನಾಪ್‌ಡ್ರಾಗನ್ 675 SoC ಪ್ರೊಸೆಸರ್ ಜೊತೆಗೆ 6GB LPDDR4X RAM ಮತ್ತು 128GB ಆಂತರಿಕ ಮೆಮೊರಿಯನ್ನು 'ರೆಡ್‌ಮಿ ನೋಟ್ 7 ಪ್ರೊ'ನಲ್ಲಿ ನೋಡಬಹುದು. ರೆಡ್‌ಮಿ ಫೋನಿನಲ್ಲಿ ಇದೇ ಮೊದಲ ಬಾರಿಗೆ 128GB ಮೆಮೊರಿಯನ್ನು ತರಲಾಗಿದ್ದು, ಅಡ್ರಿನೋ 612 ಜಿಪಿಯು ಜೊತೆಗೆ MIUI 10 ಟಾಪ್ ಆಂಡ್ರಾಯ್ಡ್ ಪೈನಲ್ಲಿ ಸ್ಮಾರ್ಟ್ ಕಾರ್ಯನಿರ್ವಹಣೆ ನೀಡಲಿದೆ.

'ರೆಡ್‌ಮಿ ನೋಟ್ 7 ಪ್ರೊ' ರಿಯರ್ ಕ್ಯಾಮೆರಾ
ರೆಡ್‌ಮಿ ನೋಟ್ 7 ಪ್ರೊನಲ್ಲಿ 13MP ಪ್ರಾಥಮಿಕ ಸಂವೇದಕ ಮತ್ತು 5 MP ಸೆಕೆಂಡರಿ ಸಂವೇದಕಗಳನ್ನು ನೀಡಲಾಗಿದೆ. 13MP ಕ್ಯಾಮರಾವು ಸೋನಿ IMX586 ಸಂವೇದಕವನ್ನು ಬಳಸುತ್ತಿದ್ದು, ಇದು ಸ್ಮಾರ್ಟ್ಫೋನ್ಗಳಿಗಾಗಿ ಅತ್ಯುನ್ನತ ರೆಸಲ್ಯೂಶನ್ ಸಂವೇದಕವಾಗಿದ್ದು ಉತ್ತಮ ಫೋಟೋಗಳಿಗಾಗಿ 4x ಡೈನಾಮಿಕ್ ಶ್ರೇಣಿಯನ್ನು ಬೆಂಬಲಿಸಲಿದೆ.

'ರೆಡ್‌ಮಿ ನೋಟ್ 7 ಪ್ರೊ' ಕ್ಯಾಮೆರಾ ತಂತ್ರಜ್ಞಾನ!
ರೆಡ್‌ಮಿ ನೋಟ್ 7 ಪ್ರೊ ಸಂವೇದಕವು 4 ಪಿಕ್ಸೆಲ್‌ಗಳನ್ನು 1 ಸೂಪರ್ ಪಿಕ್ಸೆಲ್‌ಗೆ ವಿಲೀನಗೊಳಿಸುವ ಮೂಲ ಕಡಿಮೆ ಬೆಳಕಿನಲ್ಲೂ ಅತ್ಯುತ್ತಮ ಚಿತ್ರಗಳನ್ನು ಚಿತ್ರಿಸಲಿದೆ. ಕೃತಕ ಬುದ್ದಿಮತ್ತೆ ಸಹಾಯದಿಂದ ರಾತ್ರಿ ಸಮಯದಲ್ಲೂ ಛಾಯಾಗ್ರಹಣಕ್ಕೆ ಶಕ್ತವಾಗಿದೆ. AI ಪೋರ್ಟ್ರೇಟ್ 2.0 ಹೊಂದಿರುವ ಕ್ಯಾಮೆರಾ ಬೊಕೆ ಚಿತ್ರಗಳು, 4K ವೀಡಿಯೋ ರೆಕಾರ್ಡಿಂಗ್ ಫೀಚರ್ಸ್ ಹೊಂದಿದೆ.

'ರೆಡ್‌ಮಿ ನೋಟ್ 7 ಪ್ರೊ' ಸೆಲ್ಫೀ ಕ್ಯಾಮೆರಾ!
'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನಿನಲ್ಲಿ 48MP ಎಂಪಿ ಎಐ ಸೆಲ್ಫಿ ಕ್ಯಾಮರಾವನ್ನು ಹೊಂದಿದೆ. ಎಐ ಭಾವಚಿತ್ರ ಸೆಲ್ಫಿ, ಸ್ಟುಡಿಯೋ ಲೈಟಿಂಗ್ ಸೆಲ್ಫಿ, ಎಐ ಫೇಸ್ ಅನ್ಲಾಕ್, ಎಐ ಬ್ಯೂಟಿಗಳೊಂದಿಗೆ 48MPಎಂಪಿ ಎಐ ಸೆಲ್ಫ್ ಕ್ಯಾಮರಾ ಅದ್ಬುತವಾಗಿದೆ. ನಿರ್ದಿಷ್ಟ ಆಪ್ಟಿಮೈಸೇಶನ್ಗಳೊಂದಿಗೆ AI ದೃಶ್ಯ ಪತ್ತೆಹಚ್ಚುವಿಕೆ ತಂತ್ರಜ್ಞಾನ ಹೊಂದಿರುವುದು ಇದರ ವಿಶೇಷತೆ.

'ರೆಡ್‌ಮಿ ನೋಟ್ 7 ಪ್ರೊ' ಬ್ಯಾಟರಿ
'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಪೋನಿನಲ್ಲಿ ಎರಡು ದಿನಗಳ ಬ್ಯಾಟರಿ ಬಾಳಿಕೆ ಬರುವಂತಹ 4000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ನೀಡಲಾಗಿದೆ. ಇದು ವೇಗವಾಗಿ ಚಾರ್ಜಿಂಗ್ ಆಗಲು ಕ್ವಾಲ್ಕಾಮ್ ಕ್ವಿಕ್ ಚಾರ್ಜ್ 4.0 ಅನ್ನು ಬೆಂಬಲಿಸುತ್ತದೆ ಎಂದು ಶಿಯೋಮಿ ತಿಳಿಸಿದೆ. ಶಿಯೋಮಿ ರೆಡ್‌ಮಿ ನೋಟ್ 6 ನಲ್ಲಿ ಕ್ವಿಕ್ ಚಾರ್ಜ್ 3.0 ತಂದಿದನ್ನು ನಾವಿಲ್ಲಿ ನೋಡಬಹುದು.

'ರೆಡ್‌ಮಿ ನೋಟ್ 7 ಪ್ರೊ' ಇತರೆ ಫೀಚರ್ಸ್
ಅಂಟುಂಟು ಬೆಂಚ್‌ಮಾರ್ಕ್ನಲ್ಲಿ 180,808 ರಷ್ಟು ಸ್ಕೋರ್ ಮಾಡಿರುವ 'ರೆಡ್‌ಮಿ ನೋಟ್ 7 ಪ್ರೊ' ಡ್ಯುಯಲ್ ವೋಲ್ಟ್ ಸಿಮ್ ಸಪೋರ್ಟ್ ಮಾಡಲಿದೆ. ಇನ್ನುಳಿದಂತೆ 3.5mm ಜಾಕ್, ಫೇಸ್‌ಲಾಕ್, ಸ್ಟೂಡಿಯೋ ಲೈಟಿಂಗ್, 8 ಯುನಿಕ್ ಎಫೆಕ್ಟ್ ಕ್ಯಾಮೆರಾ ತಂತ್ರಜ್ಞಾನಗಳು, 4k ವಿಡಿಯೋ ರೆಕಾರ್ಡಿಂಗ್, ಹೆವಿ ಗೇಮಿಗ್‌ಗಾಗಿ ಅಡ್ರಿನೋ 612 ಜಿಪಿಯುಗಳನ್ನು ಹೊಂದಿದೆ.

'ರೆಡ್‌ಮಿ ನೋಟ್ 7 ಪ್ರೊ' ಬೆಲೆಗಳು
'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನ್ ಎರಡು ವೆರಿಯಂಟ್‌ಗಳಲ್ಲಿ ಮೊಬೈಲ್ ಮಾರುಕಟ್ಟೆಗೆ ಲಾಂಚ್ ಆಗಿದ್ದು, 4GB RAM ಮತ್ತು 64GB ಆಂತರಿಕ ಮೆಮೊರಿಯನ್ನು ಹೊಂದಿರುವ 'ರೆಡ್‌ಮಿ ನೋಟ್ 7 ಪ್ರೊ' ಫೋನಿನ ಬೆಲೆ 13,999 ರೂ.ಗಳಾಗಿವೆ. ಹಾಗೆಯೇ, 6GB RAM ಮತ್ತು 128GB ಆಂತರಿಕ ಮೆಮೊರಿಯ ನೋಟ್ 7 ಪ್ರೊ ಫೋನ್ ಬೆಲೆ 16,999 ರೂ.ಗಳಾಗಿವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470