ರೆಡ್ಮಿ ನೋಟ್ 8 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಮತ್ತೆ ಏರಿಕೆ!
ಶಿಯೋಮಿ ಸಂಸ್ಥೆಯ ರೆಡ್ಮಿ ನೋಟ್ ಸರಣಿಯ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಹೆಚ್ಚಾಗಿ ಆಕರ್ಷಿಸಿವೆ. ಈ ಸರಣಿಯಲ್ಲಿ ಕಳೆದ ವರ್ಷ ಲಾಂಚ್ ಆದ ರೆಡ್ಮಿ ನೋಟ್ 8 ಸ್ಮಾರ್ಟ್‌ಫೋನ್ ಇತ್ತೀಚಿಗೆ ಬೆಲೆ ಏರಿಕೆ ಕಂಡಿತ್ತು. ಇದೀಗ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಮತ್ತೊಮ್ಮೆ ದರ ಹೆಚ್ಚಳ ಆಗಿದ್ದು, ಹೀಗಾಗಿ ಆರಂಭಿಕ ಬೇಸ್ ವೇರಿಯಂಟ್ ಬೆಲೆಯು 12,499ರೂ.ಗಳು ಆಗಿದೆ.

ಹೌದು, ಶಿಯೋಮಿ ಕಂಪನಿಯು ರೆಡ್ಮಿ ನೋಟ್ 8 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಮತ್ತೆ 500ರೂ. ಏರಿಕೆ ಮಾಡಿದೆ. ಈ ವರ್ಷದಲ್ಲಿ ಇದು ಐದನೇ ಬಾರಿ ಬೆಲೆ ಏರಿಕೆ ಕಾಣುತ್ತಿರುವುದು. ಇನ್ನೂ ಈ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಬೇಸ್ ವೇರಿಯಂಟ್ 4GB+64GB ಆಗಿದ್ದು, 12,499ರೂ ಪ್ರೈಸ್‌ಟ್ಯಾಗ್ ಹೊಂದಿದೆ. ಹಾಗೆಯೇ 6GB+128GB ವೇರಿಯಂಟ್ 14,499ರೂ. ದರವನ್ನು ಹೊಂದಿದೆ. ಆನ್‌ಲೈನ್ ಮತ್ತು ಆಫ್‌ಲೈನ್ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ತಿಳಿಯಲು ಮುಂದೆ ಓದಿರಿ.

ರೆಡ್ಮಿ ನೋಟ್ 8 ಡಿಸ್‌ಪ್ಲೇ
ರೆಡ್ಮಿ ನೋಟ್ 8 ಸ್ಮಾರ್ಟ್‌ಫೋನ್ 6.39-ಇಂಚಿನ ಪೂರ್ಣ-ಎಚ್‌ಡಿ + 1080x2340 ಪಿಕ್ಸೆಲ್‌ಗಳು ಪರದೆ ಹೊಂದಿದೆ. 90 ಪ್ರತಿಶತದಷ್ಟು ಸ್ಕ್ರೀನ್-ಟು -ಬಾಡಿ ಅನುಪಾತ ಮತ್ತು 19.5: 9 ಆಕಾರ ಅನುಪಾತ. ಫೋನ್ ಮುಂಭಾಗ ಮತ್ತು ಹಿಂಭಾಗದಲ್ಲಿ ಗೊರಿಲ್ಲಾ ಗ್ಲಾಸ್ 5 ಅನ್ನು ಒಳಗೊಂಡಿದೆ ಮತ್ತು ವಾಟರ್ ಡ್ರಾಪ್ ಶೈಲಿಯ ನಾಚ್ ಅಪ್ ಫ್ರಂಟ್ ಅನ್ನು ಹೊಂದಿದೆ.

ರೆಡ್ಮಿ ನೋಟ್ 8 ಪ್ರೊಸೆಸರ್
ರೆಡ್ಮಿ ನೋಟ್ 8 ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸುತ್ತದೆ. ಇದು 6 ಜಿಬಿ RAM ಮತ್ತು 128 ಜಿಬಿ ಆನ್‌ಬೋರ್ಡ್ ಸಂಗ್ರಹದೊಂದಿಗೆ ಬಂದಿದೆ. ಆಂಡ್ರಾಯ್ಡ್ 9 ಪೈ ಆಧಾರಿತ ಡ್ಯುಯಲ್ ಸಿಮ್ (ನ್ಯಾನೊ) ಕಾರ್ಯನಿರ್ವಹಿಸುವ ಈ ಫೋನಿನ ಬೇಸ್ ರೂಪಾಂತರದ ಶೇಖರಣೆಯನ್ನು 64 ಜಿಬಿಗೆ ಹೆಚ್ಚಿಸಿ ಶಿಯೋಮಿ ಸಿಹಿಸುದ್ದಿ ನೀಡಿದೆ

ರೆಡ್ಮಿ ನೋಟ್ 8 ಕ್ಯಾಮೆರಾ
ರೆಡ್ಮಿ ನೋಟ್ 8 ನಲ್ಲಿ ನಾಲ್ಕು ಹಿಂದಿನ ಕ್ಯಾಮೆರಾಗಳನ್ನು ನಿಡಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಬೆಲೆಗೆ ಕ್ವಾಡ್ ಕ್ಯಾಮೆರಾ ಫೋನ್ ಒಂದು ಬಂದಂತಾಗಿದೆ. 48 ಮೆಗಾಪಿಕ್ಸೆಲ್ ಪ್ರಾಥಮಿಕ, 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಮತ್ತು ಎರಡು 2 ಮೆಗಾಪಿಕ್ಸೆಲ್ ಕ್ಯಾಮೆರಾಗಳನ್ನು ನೀಡಲಾಗಿದೆ. ಇನ್ನು 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ರೆಡ್ಮಿ ನೋಟ್ 8 ಇತರೆ ಫೀಚರ್ಸ್
ರೆಡ್ಮಿ ನೋಟ್ 8 4000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಸಹ ಹೊಂದಿದೆ. ಕೆಳಭಾಗದಲ್ಲಿ ಯುಎಸ್ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಐಆರ್ ಬ್ಲಾಸ್ಟರ್ ಅನ್ನು ಸ್ಮಾರ್ಟ್‌ಪೋನ್ ಒಳಗೊಂಡಿದೆ. ಮುಂಭಾಗ ಮತ್ತು ಹಿಂಭಾಗದಲ್ಲಿ ಗೊರಿಲ್ಲಾ ಗ್ಲಾಸ್ 5 ಹೊಂದಿರುವುದು ಈ ಫೋನಿನ ಪ್ರಮುಖ ವಿಶೇಷತೆಗಳನ್ನು ಒಂದಾಗಿದೆ.

ರೆಡ್ಮಿ ನೋಟ್ 8 ಬೆಲೆ
ರೆಡ್ಮಿ ನೋಟ್ 8 4GB+64GB ವೇರಿಯಂಟ್ ಸ್ಮಾರ್ಟ್‌ಫೋನ್ ಬೆಲೆಯು 12,499ರೂ.ಗಳಾಗಿದೆ. 6GB+128GB ವೇರಿಯಂಟ್ 14,499ರೂ. ಬೆಲೆಯನ್ನು ಪಡೆದಿದೆ. ಇನ್ನೂ ಈ ಫೋನ್ ಆಫ್‌ಲೈನ್ ಹಾಗೂ ಆನ್‌ಲೈನ್ ತಾಣಗಳಲ್ಲಿ ಲಭ್ಯ.


Click it and Unblock the Notifications








