ರೆಡ್ಮಿ ನೋಟ್ 9 ಸರಣಿಯಲ್ಲಿ ಮೂರು ಹೊಸ ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಶಿಯೋಮಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಶಿಯೋಮಿ ಇದೀಗ ತನ್ನ ಹೊಸ ರೆಡ್‌ಮಿ ನೋಟ್ 9 ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಸದ್ಯ ರೆಡ್ಮಿ ನೋಟ್ 9ಪ್ರೊ 5G, ರೆಡ್ಮಿ ನೋಟ್ 9 5G, ರೆಡ್ಮಿ ನೋಟ್ 9 4G ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹೊಸ ಮಾದರಿಯ ಫೀಚರ್ಸ್‌ಗಳನ್ನ ಒಳಗೊಂಡಿದೆ.

ಹೌದು, ಶಿಯೋಮಿ ಕಂಪೆನಿ ತನ್ನ ರೆಡ್‌ಮಿ ನೋಟ್ 9 ಸರಣಿಯಲ್ಲಿ ರೆಡ್ಮಿ ನೋಟ್ 9ಪ್ರೊ 5G, ರೆಡ್ಮಿ ನೋಟ್ 9 5G, ರೆಡ್ಮಿ ನೋಟ್ 9 4G ಸ್ಮಾರ್ಟ್‌ಫೋನ್‌ಗಳನ್ನ ಚೀನಾ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಇನ್ನು ರೆಡ್ಮಿ ನೋಟ್ 9 ಪ್ರೊ 5G ಮತ್ತು ನೋಟ್ 9 5G ಪಂಚ್-ಹೋಲ್ ಡಿಸ್‌ಪ್ಲೇ ಮತ್ತು ಹಿಂಭಾಗದಲ್ಲಿ ವೃತ್ತಾಕಾರದ ಕ್ಯಾಮೆರಾ ಮಾಡ್ಯೂಲ್ ಅನ್ನು ಹೊಂದಿವೆ. ರೆಡ್ಮಿ ನೋಟ್ 9 4G ಲಂಬವಾಗಿ ಜೋಡಿಸಲಾದ ರಿಯರ್ ಕ್ಯಾಮೆರಾ ಮಾಡ್ಯೂಲ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ ನೋಟ್ 9 ಪ್ರೊ 5G
ರೆಡ್ಮಿ ನೋಟ್ 9 ಪ್ರೊ 5G ಸ್ಮಾರ್ಟ್‌ಫೋನ್ 6.67-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಪ್ರೈಮರಿ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,820mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 9 5G
ರೆಡ್ಮಿ ನೋಟ್ 9 5G ಸ್ಮಾರ್ಟ್‌ಫೋನ್ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 800U ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 9 4G
ರೆಡ್ಮಿ ನೋಟ್ 9 4G ಸ್ಮಾರ್ಟ್‌ಫೋನ್ 6.53 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಬಲವನ್ನು ಪಡೆದುಕೊಮಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್,ಅನ್ನು ಹೊಂದಿದೆ. ಇದು 6000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕಪ್ ಅನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ರೆಡ್ಮಿ ನೋಟ್ 9 4G ಸ್ಮಾರ್ಟ್‌ಫೋನ್ ಸಿಎನ್‌ವೈ 999 ( ಅಂದಾಜು 11,300 ರೂ) ನಿಂದ ಪ್ರಾರಂಭವಾಗುತ್ತದೆ, ಮತ್ತು ಇದು ನಾಲ್ಕು ರೂಪಾಂತರಗಳಲ್ಲಿ ಬರುತ್ತದೆ. ರೆಡ್‌ಮಿ ನೋಟ್ 9 5G ಮೂರು ಶೇಖರಣಾ ರೂಪಾಂತರಗಳಲ್ಲಿ ಬರಲಿದ್ದು, ಸಿಎನ್‌ವೈ 1,299 (ಅಂದಾಜು 14,600 ರೂ) ಆರಂಭಿಕ ಬೆಲೆಯಲ್ಲಿ ಬರುತ್ತದೆ. ಇನ್ನು ರೆಡ್ಮಿ ನೋಟ್ 9 ಪ್ರೊ 5G ಯಂತೆ, ಮೂಲ ಮಾದರಿಯ ಸಿಎನ್‌ವೈ 1,599 (ಅಂದಾಜು, 18,000) ಬೆಲೆ ಹೊಂದಿದ್ದು,ಇದು ಕೂಡ ಮೂರು ರೂಪಾಂತರಗಳಲ್ಲಿ ಲಭ್ಯವಿದೆ.


Click it and Unblock the Notifications