ಭಾರತದಲ್ಲಿ ರೆಡ್‌ಮಿ ನೋಟ್‌ 9 ಪ್ರೊ ಸ್ಮಾರ್ಟ್‌ಫೋನ್‌ ಫ್ಲ್ಯಾಷ್ ಸೇಲ್‌ಮುಂದೂಡಿಕೆ!

|

ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಶಿಯೋಮಿ ಸ್ಮಾರ್ಟ್‌ಫೊನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದೆ. ಈಗಾಗ್ಲೆ ರೆಡ್‌ಮಿ ಆವೃತ್ತಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ಶಿಯೋಮಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ.ಅಲ್ಲದೆ ಶಿಯೋಮಿ ರೆಡ್‌ಮಿ ನೋಟ್‌ ಪ್ರೋ ಸ್ಮಾರ್ಟ್‌ಫೋನ್‌ ಇಂದಿನಿಂದ ಭಾರತದಲ್ಲಿ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾರಾಟವಾಗಲಿದೆ ಎಂದು ಹೇಳಲಾಗಿತ್ತು. ಅದರೆ ಇದೀಗ ರೆಡ್‌ಮಿ ನೋಟ್‌ 9 ಪ್ರೊ ಭಾರತದ ಮಾರುಕಟ್ಟೆಯಲ್ಲಿ ಇನ್ನು ಕೆಲ ದಿನಗಳ ಕಾಲ ಮಾರಾಟಕ್ಕೆ ಲಬ್ಯವಿರುವುದಿಲ್ಲ ಎಂದು ಹೇಳಲಾಗ್ತಿದೆ.

ಹೌದು

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ಕಂಪೆನಿ ಕೆಲ ದಿನಗಳ ಹಿಂದೆ ಶಿಯೋಮಿ ರೆಡ್‌ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿ ಸಂಚಲನ ಸೃಷ್ಟಿಸಿತ್ತು. ಆದರಂತೆ ಇಂದಿನಿಂದ ಭಾರತದ ಪ್ರಮುಖ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಮಾರಾಟಕ್ಕೆ ಸಜ್ಜಾಗಿತ್ತು. ಆದರೆ ಮಾರಕ ವೈರಸ್‌ ಕೊರೊನಾ ಬೀತಿಯಿಂದಾಗಿ ಈಗಾಗಲೇ ಭಾರತದ ಹಲವು ರಾಜ್ಯಗಳು ಲಾಕ್‌ಡೌನ್‌‌ ಆಗಿರುವುದರಿಂದ ಭಾರತದಲ್ಲಿ ಶಿಯೋಮಿ ರೆ್‌ಮಿ ನೋಟ್‌9 ಪ್ರೊ ಸೇಲ್‌ ಡೇಟ್‌ ಕೊನೆ ಕ್ಷಣದಲ್ಲಿ ಬದಲಾಗಿದೆ. ಹಿಂದಿನ ಪ್ಲ್ಯಾನ್‌ ಪ್ರಕಾರ ಈ ಫ್ಲ್ಯಾಷ್ ಮಾರಾಟವು ಇಂದು ಮಧ್ಯಾಹ್ನ 12:00 ಗಂಟೆಗೆ ಪ್ರಾರಂಭವಾಗ ಬೇಕಿತ್ತು, ಆದರೆ ಕೊನೆ ಕ್ಷಣದಲ್ಲಿ ಶಿಯೋಮಿ ತನ್ನ ನಿರ್ಧಾರವನ್ನ ಬದಲಾಯಿಸಿದೆ. ಇನ್ನು ರೆಡ್‌ಮಿ ನೋಟ್‌ 9 ಪ್ರೊ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಪಂಚ್ ಹೋಲ್ ವಿನ್ಯಾಸವನ್ನ ಹೊಂದಿದೆ. ಅಲ್ಲದೆ ಈ ಫೋನ್ 60Hz ಡಿಸ್‌ಪ್ಲೇ ರೀಫ್ರೇಶ್ ರೇಟ್ ಹೊಂದಿದೆ ಹಾಗೂ ಟಚ್ ಸಾಂಪ್ಲಿಂಗ್ ರೇಟ್ 120Hz ಆಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ನೀಡುವ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್‌ ವೇಗವನ್ನ ಪಡೆದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 4GB RAM +64GB ಮತ್ತು 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ತಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ವಿನ್ಯಾಸವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್‌ಹೊಂದಿದ್ದು,ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಶೂಟರ್ ಹೊಂದಿದ್ದು, 2cm ನಿಂದ 10cm ಫೋಕಸ್ ದೂರವನ್ನು ಬೆಂಬಲಿಸುತ್ತದೆ.ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಸೈಡ್‌ ಫೀಂಗರ್‌ಪ್ರಿಂಟ್‌ ಸೆನ್ಸಾರ್‌, ಅನ್ನು ಬೆಂಬಲಿಸಲಿದೆ. ಜೊತೆಗೆ ಆಂಬಿಯೆಂಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಇಂದು ಮಾರಾಟವಾಗಲಿರುವ ಶಿಯೋಮಿ ರೆಡ್‌ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್‌ 4GB RAM+ 64GB ಸ್ಟೋರೇಜ್ ಆಯ್ಕೆಗೆ ಬೆಲೆ 12,999 ರೂ.ಗೆ ನಿಗದಿಪಡಿಸಲಾಗಿದ್ದು, 6GB RAM + 128GB ಸ್ಟೋರೇಜ್ ಆಯ್ಕೆಯ ಮಾದರಿಯನ್ನ 15,999 ರೂಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇಂಟರ್ ಸ್ಟೆಲ್ಲಾರ್ ಬ್ಲ್ಯಾಕ್, ಗ್ಲೇಸಿಯರ್ ವೈಟ್ ಮತ್ತು ಅರೋರಾ ಬ್ಲೂ ಸೇರಿದಂತೆ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Redmi Note 9 Pro First Sale Postponed Due to Coronavirus Lockdowns.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X