ಇಂದು 'ರೆಡ್ಮಿ ನೋಟ್ 9 ಪ್ರೊ' ಫಸ್ಟ್ ಸೇಲ್!..ಬೆಲೆ ಜಸ್ಟ್ 12,999ರೂ!
ಇದೇ ಮಾರ್ಚ್ 12ರಂದು ಶಿಯೋಮಿ ಸಂಸ್ಥೆಯು ದೇಶಿಯ ಮಾರುಕಟ್ಟೆಗೆ ಹೊಸದಾಗಿ 'ರೆಡ್ಮಿ ನೋಟ್ 9 ಪ್ರೊ' ಅನ್ನು ಬಿಡುಗಡೆ ಮಾಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಭಾರಿ ಸದ್ದು ಮಾಡುತ್ತಿರುವ ರೆಡ್ಮಿ ನೋಟ್ 9 ಪ್ರೊ ಫೋನ್ ಇಂದು ಫ್ಲಿಪ್‌ಕಾರ್ಟ್ ತಾಣದಲ್ಲಿ ಮಧ್ಯಾಹ್ನ 12ರಿಂದ ಮೊದಲ ಸೇಲ್ ಪ್ರಾರಂಭವಾಗಲಿದೆ. ಇನ್ನು ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 12,999ರೂ. ಆಗಿದೆ.

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿವೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಡಿಸ್‌ಪ್ಲೇ ರೀಫ್ರೇಶ್ ರೇಟ್ 60Hz ಆಗಿದ್ದು, 6GB/64GB, 6GB/128GB ಮತ್ತು 8GB/128GB ಮೂರು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ರೆಡ್ಮಿ ನೋಟ್ 9 ಪ್ರೊ ಫೋನಿನ ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಮಾದರಿಯಲ್ಲಿದ್ದು, ಈ ಫೋನ್ 60Hz ಡಿಸ್‌ಪ್ಲೇ ರೀಫ್ರೇಶ್ ರೇಟ್ ಹೊಂದಿದೆ ಹಾಗೂ ಟಚ್ ಸಾಂಪ್ಲಿಂಗ್ ರೇಟ್ 120Hz ಆಗಿದೆ.

ಪ್ರೊಸೆಸರ್ ಯಾವುದು
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್ ಅನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM +64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ರಚನೆ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್ ಆಂಗಲ್ ಲೆನ್ಸ್ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಬಲ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಇತ್ತೀಚಿನ ಫೀಚರ್ಸ್‌ಗಳು ಲಭ್ಯ ಇವೆ.

ಬೆಲೆ ಮತ್ತು ಲಭ್ಯತೆ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. 4GB RAM ಮತ್ತು 64GB ಸ್ಟೋರೇಜ್ ಬೇಸ್ ವೇರಿಯಂಟ್ ಬೆಲೆಯು 12,999ರೂ. ಆಗಿದೆ. 6GB RAM ಮತ್ತು 128GB ಸ್ಟೋರೇಜ್ ಬೆಲೆಯು 15,999ರೂ. ಆಗಿದೆ. ಇನ್ನು ಈ ಫೋನ್ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ಸೇಲ್ ಆರಂಭಿಸಲಿದೆ.


Click it and Unblock the Notifications








