ಅಮೆಜಾನ್‌ನಲ್ಲಿ ಇಂದು ರೆಡ್ಮಿ ನೋಟ್ 9 ಪ್ರೊ ಫೋನ್‌ ಸೇಲ್‌!

|

ಶಿಯೋಮಿಯ ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್‌ ಈಗಾಗಲೇ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಲಾಕ್‌ಡೌನ್ ವೇಳೆ ಬಿಡುಗಡೆ ಆಗಿರುವ ಈ ಫೋನ್ ಈಗಾಗಲೆ ಫ್ಲ್ಯಾಶ್‌ ಸೇಲ್ ಕಂಡಿದೆ. ಜನಪ್ರಿಯ ಇ-ಕಾಮರ್ಸ್‌ ತಾಣ ಅಮೆಜಾನ್ ಹಾಗೂ Mi.com ವೆಬ್‌ಸೈಟ್‌ ನಲ್ಲಿ ಇಂದು (ಆ.18) ಮಧ್ಯಾಹ್ನ 12ರಂದು ಮತ್ತೆ ಸೇಲ್ ನಡೆಯಲಿದೆ. 5,020mAh ಬಿಗ್ ಬ್ಯಾಟರಿ ಮತ್ತು ಕ್ವಾಡ್‌ ಕ್ಯಾಮೆರಾ ಈ ಫೋನಿನ ಪ್ರಮುಖ ಹೈಲೈಟ್ಸ್‌ಗಳಾಗಿವೆ.

ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್‌ 4GB + 64GB ವೇರಿಯಂಟ್‌ ಬೆಲೆಯು 13,999ರೂ. ಆಗಿದ್ದು, 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 16,999ರೂ. ಆಗಿದೆ. ಇನ್ನು ಈ ಫೋನ್ ಅರೋರಾ ಬ್ಲೂ, ಗ್ಲೇಸಿಯರ್ ವೈಟ್ ಮತ್ತು ಇಂಟರ್ ಸ್ಟೆಲ್ಲಾರ್ ಬ್ಲ್ಯಾಕ್ ಎಂಬ ಮೂರು ವಿಶೇಷ ಬಣ್ಣಗಳ ಆಯ್ಕೆಗಳನ್ನು ಈ ಫೋನ್ ಹೊಂದಿದೆ. ಹಾಗೆಯೇ ಆಯ್ದ ಕೆಲವು ಏರ್‌ಟೆಲ್‌ ಪ್ಲ್ಯಾನ್‌ಗಳ ಮೇಲೆ ಡಬಲ್‌ ಡೇಟಾ ಆಫರ್ ಸಹ ಲಭ್ಯ. ಉಳಿದಂತೆ ಇತರೆ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಮಾದರಿಯಲ್ಲಿದ್ದು, ಈ ಫೋನ್ 60Hz ಡಿಸ್‌ಪ್ಲೇ ರೀಫ್ರೇಶ್ ರೇಟ್ ಹೊಂದಿದೆ ಹಾಗೂ ಟಚ್ ಸಾಂಪ್ಲಿಂಗ್ ರೇಟ್ 120Hz ಆಗಿದೆ.

ಪ್ರೊಸೆಸರ್ ಹಾಗೂ ಓಎಸ್‌

ಪ್ರೊಸೆಸರ್ ಹಾಗೂ ಓಎಸ್‌

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್‌ ಅನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM +64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ನೀಡಲಾಗಿದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಇತ್ತೀಚಿನ ಫೀಚರ್ಸ್‌ಗಳು ಲಭ್ಯ ಇವೆ.

Best Mobiles in India

English summary
Redmi Note 9 Pro 4GB + 64GB is priced starting at Rs. 13,999 in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X