ಶಿಯೋಮಿ ರೆಡ್ಮಿ ನೋಟ್ 9 ಪ್ರೊ ಬಿಡುಗಡೆ!..ಖರೀದಿಗೆ ಕ್ಯೂ ಪಕ್ಕಾ!
ಶಿಯೋಮಿ ಸಂಸ್ಥೆಯ ರೆಡ್ಮಿ ನೋಟ್ ಸರಣಿಯ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡಿವೆ. ಅದೇ ಸರಣಿಯಲ್ಲಿ ಶಿಯೋಮಿ ಇದೀಗ ರೆಡ್ಮಿ ನೋಟ್ 9 ಸರಣಿಯನ್ನು ಭಾರತದಲ್ಲಿ ಇಂದು (ಮಾ.12) ಬಿಡುಗಡೆ ಮಾಡಿದೆ. ಅದ್ಧೂರಿ ಕಾರ್ಯಕ್ರಮದಲ್ಲಿ ನೋಟ್ 9 ಸರಣಿಯನ್ನು ಲಾಂಚ್ ಮಾಡುವ ಯೋಜನೆ ಹೊಂದಿತ್ತು. ಆದರೆ ಕೊರೊನಾ ವೈರಸ್ ಹರಡುವ ಆತಂಕದಿಂದ ಆನ್‌ಲೈನ್ ಮೂಲಕವೇ ರೆಡ್ಮಿ ನೋಟ್ 9 ಫೋನ್ ಸರಣಿಯನ್ನು ಬಿಡುಗಡೆ ಮಾಡಿದೆ.

ಹೌದು, ಶಿಯೋಮಿಯ ಬಹುನಿರೀಕ್ಷಿತ ರೆಡ್ಮಿ ನೋಟ್ 9 ಸರಣಿಯು ಇಂದು ಬಿಡುಗಡೆ ಆಗಿದೆ. ಈ ಸರಣಿಯು ರೆಡ್ಮಿ ನೋಟ್ 9 ಪ್ರೊ ಮತ್ತು ರೆಡ್ಮಿ ನೋಟ್ 9 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಆರಂಭಿಕ ವೇರಿಯಂಟ್ ಬೆಲೆಯು 12,999ರೂ. ಆಗಿದ್ದು, ಅದೇ ರೀತಿ ರೆಡ್ಮಿ ನೋಟ್ 9 ಪ್ರೊ ಮ್ಯಾಕ್ಸ್ ಬೇಸ್ ವೇರಿಯಂಟ್ ಫೋನ್ ಬೆಲೆಯು 14,999ರೂ. ಆಗಿದೆ.

ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿವೆ. ರೆಡ್ಮಿ ನೋಟ್ 9 ಪ್ರೊ ಫೋನ್ ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ ಹಾಗೂ ರೆಡ್ಮಿ ನೋಟ್ 9 ಪ್ರೊ ಮ್ಯಾಕ್ಸ್ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಪಡೆದಿದೆ. ಅಂದಹಾಗೆ ಬಜೆಟ್ ಬೆಲೆಯಲ್ಲಿ ಕಾಣಿಸಿಕೊಂಡಿರುವ ರೆಡ್ಮಿ ನೋಟ್ 9 ಪ್ರೊ ಫೋನ್ ಇದೇ ಮಾರ್ಚ್ 17 ರಂದು ಖರೀದಿಗೆ ಲಭ್ಯವಾಗಲಿದೆ. ರೆಡ್ಮಿ ನೋಟ್ 9 ಪ್ರೊ ಫೋನಿನ ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಮಾದರಿಯಲ್ಲಿದ್ದು, ಈ ಫೋನ್ 60Hz ಡಿಸ್‌ಪ್ಲೇ ರೀಫ್ರೇಶ್ ರೇಟ್ ಹೊಂದಿದೆ ಹಾಗೂ ಟಚ್ ಸಾಂಪ್ಲಿಂಗ್ ರೇಟ್ 120Hz ಆಗಿದೆ.

ಪ್ರೊಸೆಸರ್ ಯಾವುದು
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್ ಅನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM +64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ರಚನೆ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್ ಆಂಗಲ್ ಲೆನ್ಸ್ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಬಲ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಇತ್ತೀಚಿನ ಫೀಚರ್ಸ್‌ಗಳು ಲಭ್ಯ ಇವೆ.


Click it and Unblock the Notifications








