ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಲಾಂಚ್!..ಬೆಲೆ 11,999ರೂ!
ಶಿಯೋಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮೀಡಿಯಾ ಟೆಕ್ ಹಿಲಿಯೊ G85 ಆಕ್ಟಾ ಕೋರ್ ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಈ ಫೋನ್ 11,999ರೂ. ಬೆಲೆಯ ಆರಂಭಿಕ ಪ್ರೈಸ್‌ಟ್ಯಾಗ್ ಅನ್ನು ಪಡೆದಿರುವುದು ಪ್ರಮುಖ ಆಕರ್ಷಣೆ ಅನಿಸಿದೆ.

ಹೌದು, ಶಿಯೋಮಿ ಸಂಸ್ಥೆಯು ಹೊಸದಾಗಿ ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 5,020mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, 22.5W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ 4GB + 64GB, 4GB + 128GB ಮತ್ತು 6GB RAM + 128GB ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಆಕ್ವಾ ಗ್ರೀನ್, ಪೆಬ್ಬಲ್ ಗ್ರೇ ಮತ್ತು ಆರ್ಕ್ಟಿಕ್ ವೈಟ್ ಬಣ್ಣಗಳ ಆಯ್ಕೆ ಇದೆ. ಇನ್ನುಳಿದಂತೆ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 19.5:9 ಅನುಪಾತವನ್ನು ಪಡೆದಿದೆ. ಈ ಫೋನ್ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದಿದೆ.

ಪ್ರೊಸೆಸರ್ ಯಾವುದು
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85 ಆಕ್ಟಾ ಕೋರ್ ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB, 4GB + 128GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ 512GB ವರೆಗೂ ಹೆಚ್ಚಿಸಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ರಚನೆ
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್ ಆಂಗಲ್ ಲೆನ್ಸ್ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ ಎರಡು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 13ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಬಲ
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 22.5W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಮೂರು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 4GB + 64GB ವೇರಿಯಂಟ್ ಬೆಲೆಯು 11,999ರೂ. ಆಗಿದೆ. 4GB + 128GB ವೇರಿಯಂಟ್ ಬೆಲೆಯು 13,999ರೂ. ಆಗಿದೆ ಹಾಗೂ 6GB RAM + 128GB ವೇರಿಯಂಟ್ 14,999ರೂ.ಗಳಾಗಿದೆ. ಇನ್ನು ಈ ಫೋನ್ ಇದೇ ಜುಲೈ 24ರಂದು ಫಸ್ಟ್ ಸೇಲ್ ಆರಂಭಿಸಲಿದೆ.


Click it and Unblock the Notifications




