ಶಿಯೋಮಿಯ ರೆಡ್‌ಮಿ ನೋಟ್ 9 ಸ್ಮಾರ್ಟ್‌ಫೋನ್ ಬಿಡುಗಡೆ!..ಆಕರ್ಷಕ ಫೀಚರ್ಸ್!
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಶಿಯೋಮಿ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಶಿಯೋಮಿ ಇದೀಗ ತನ್ನ ಜನಪ್ರಿಯ ರೆಡ್‌ಮಿ 9 ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಸದ್ಯ ಶಿಯೋಮಿ ಗ್ರಾಹಕರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, ಮತ್ತೆ ಮಾರುಕಟ್ಟೆಯಲ್ಲಿ ಮಿಮಚಿನ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ.

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ಶಿಯೋಮಿ ತನ್ನ ರೆಡ್‌ಮಿ ನೋಟ್ 9 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈಗಾಗಲೇ ಬಿಡುಗಡೆಯಾಗಿ ಮಾರುಕಟ್ಟೆಯಲ್ಲಿ ಸೌಂಡ್ ಮಾಡಿರೋ ರೆಡ್‌ಮಿ ನೋಟ್ 9 ಪ್ರೊ, ರೆಡ್‌ಮಿ ನೋಟ್ 9 ಪ್ರೊ ಮ್ಯಾಕ್ಸ್, ಮತ್ತು ರೆಡ್‌ಮಿ ನೋಟ್ 9S ಫೋನ್‌ಗಳಿಗೆ ಹೆಚ್ಚುವರಿಯಾಗಿ ಈ ಸ್ಮಾರ್ಟ್‌ಫೋನ್ ಎಂಟ್ರಿ ನೀಡಿದೆ. ಇನ್ನು ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ 9ಸರಣಿಯ ಇತರ ಫೋನ್‌ಗಳಂತೆ ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನ ಒಳಗೊಂಡಿದೆ. ಆದರೆ ಕಟೌಟ್ ಅನ್ನು ಸ್ಕ್ರೀನ್ ಮೇಲಿನ ಎಡ ತುದಿಯಲ್ಲಿ ಇರಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಇನ್ನು ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ
ರೆಡ್‌ಮಿ ನೋಟ್ 9 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಫುಲ್ ಹೆಚ್‌ಡಿ ಡಿಸ್‌ಪ್ಲೇ ಆಗಿದ್ದು ಐಪಿಎಸ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 19.5:9 ರಚನೆಯ ಅನುಪಾತವನ್ನ ಒಳಗೊಂಡಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G 85 ಆಕ್ಟಾ-ಕೋರ್ ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಎಂಐಯುಐ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 3GB RAM +64GB ಮತ್ತು 4GB RAM + 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 128GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಲು ಅವಕಾಶವನ್ನ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ನೋಟ್ 9 ಸರಣಿಯ ಇತರ ಫೋನ್‌ಗಳಂತೆಯೇ ಚದರ ಆಕಾರದ ಮಾಡ್ಯೂಲ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ GM1 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್ 2.4 ಮ್ಯಾಕ್ರೋ ಲೆನ್ಸ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಶಿಯೋಮಿ ಈ ಸ್ಮಾರ್ಟ್‌ಫೋನ್ ಬಾಕ್ಸ್ ಒಳಗೆ 22.5W ವೇಗದ ಚಾರ್ಜರ್ ಅನ್ನು ಸಹ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್, 3.5 ಎಂಎಂ ಆಡಿಯೊ ಜ್ಯಾಕ್, ಅನ್ನು ಬೆಂಬಲಿಸಲಿದೆ. ಜೊತೆಗೆ ರಿಯರ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ 3GB RAM + 64GB ಶೇಖರಣಾ ಆಯ್ಕೆಗೆ ಬೆಲೆ $ 199 (ಸರಿಸುಮಾರು ರೂ. 15,100) ಹೊಂದಿದ್ದು, 4GB RAM + 128GB ಶೇಖರಣಾ ಮಾದರಿಗೆ $ 249 (ಸರಿಸುಮಾರು ರೂ. 18,900) ಬೆಲೆಯನ್ನ ನಿಗಧಿ ಪಡಿಸಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಫಾರೆಸ್ಟ್ ಗ್ರೀನ್, ಪೋಲಾರ್ ವೈಟ್, ಮಿಡ್ನೈಟ್ ಗ್ರೇ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications




