ರೆಡ್ಮಿ ನೋಟ್ 9T ಸ್ಮಾರ್ಟ್‌ಫೋನ್ ಅನಾವರಣ!..ಬೆಲೆ ಎಷ್ಟು?

|

ಶಿಯೋಮಿ ಸಂಸ್ಥೆಯು ತನ್ನ ರೆಡ್ಮಿ ನೋಟ್ 9 ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಅದೇ ಸರಣಿಯಲ್ಲಿ ಇದೀಗ ರೆಡ್ಮಿ ನೋಟ್ 9T ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೆಯೇ 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ.

ಶಿಯೋಮಿ

ಹೌದು, ಶಿಯೋಮಿ ಸಂಸ್ಥೆಯು ಹೊಸದಾಗಿ ರೆಡ್ಮಿ ನೋಟ್ 9T ಚೀನಾದಲ್ಲಿ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ 64GB ಮತ್ತು 128GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಬ್ಲೂ, ಸನ್‌ರೈಸ್‌ ಆರೆಂಜ್‌, ಓಶಿಯನ್ ಗ್ರೀನ್‌ ಗ್ರೀನ್ ಬಣ್ಣಗಳ ಆಯ್ಕೆ ಇದೆ. ಇನ್ನುಳಿದಂತೆ ಈ ಫೋನಿನ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರೆಡ್ಮಿ ನೋಟ್ 9T ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 19.5:9 ಅನುಪಾತವನ್ನು ಪಡೆದಿದೆ. ಈ ಫೋನ್ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದಿದೆ.

ಪ್ರೊಸೆಸರ್ ಯಾವುದು

ಪ್ರೊಸೆಸರ್ ಯಾವುದು

ರೆಡ್ಮಿ ನೋಟ್ 9T ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 800U SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB, 4GB + 128GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ 512GB ವರೆಗೂ ಹೆಚ್ಚಿಸಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ರೆಡ್ಮಿ ನೋಟ್ 9T ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿಯ ಸೆನ್ಸಾರ್ ಹೊಂದಿದೆ. ಇನ್ನು ತೃತೀಯ ಕ್ಯಾಮೆರಾವು ಸಹ 2ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ ಸೆಲ್ಫಿಗಾಗಿ 13ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ರೆಡ್ಮಿ ನೋಟ್ 9T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ನೋಟ್ 9T ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 64GB ವೇರಿಯಂಟ್ ಬೆಲೆಯು EUR 229 (ಭಾರತದಲ್ಲಿ ಅಂದಾಜು 20,500ರೂ. ಎನ್ನಲಾಗಿದೆ). ಅದೇ ರೀತಿ. 128GB ವೇರಿಯಂಟ್ ಬೆಲೆಯು EUR 269 (ಭಾರತದಲ್ಲಿ ಅಂದಾಜು 24,100ರೂ. ಎನ್ನಲಾಗಿದೆ.)

Best Mobiles in India

English summary
Redmi Note 9T With MediaTek Dimensity 800U SoC Launched: Price.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X