Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಈ ಟ್ಯಾಬ್‌ ಬೆಲೆಯಲ್ಲಿ ಭಾರಿ ಇಳಿಕೆ! 128GB ಸ್ಟೋರೇಜ್‌ ಆಯ್ಕೆ!

ಶಿಯೋಮಿ ಕಂಪೆನಿ ರೆಡ್ಮಿ ಬ್ರ್ಯಾಂಡ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು ಮಾತ್ರವಲ್ಲ ಟ್ಯಾಬ್‌ಗಳನ್ನು ಕೂಡ ಪರಿಚಯಿಸುತ್ತಾ ಬಂದಿದೆ. ಅದರಂತೆ ಕಳೆದ ವರ್ಷ ರೆಡ್ಮಿ ಪ್ಯಾಡ್‌ ಅನ್ನು ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿತ್ತು. ಸಾಕಷ್ಟು ಸದ್ದು ಮಾಡಿದ್ದ ರೆಡ್ಮಿ ಪ್ಯಾಡ್‌ ಇದೀಗ ಭಾರತದಲ್ಲಿ ಭಾರಿ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಈ ಮೂಲಕ ಅತಿ ಕಡಿಮೆ ಬೆಲೆಗೆ ಲಭ್ಯವಾಗುತ್ತಿದೆ.

ಹೌದು, ಭಾರತದಲ್ಲಿ ರೆಡ್ಮಿ ಪ್ಯಾಡ್‌ ಬೆಲೆಯು ಕಡಿಮೆ ಆಗಿದೆ. ಸೈಲೆಂಟ್‌ ಆಗಿಯೇ ಇದರ ಬೆಲೆಯಲ್ಲಿ ಭಾರಿ ಬದಲಾವಣೆಯಾಗಿದ್ದು 3,000ರೂ ಗಳಷ್ಟು ಬೆಲೆ ಕಡಿಮೆ ಆಗಿದೆ. ಇನ್ನು ರೆಡ್ಮಿ ಪ್ಯಾಡ್‌ ಮೂರು RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಲಭ್ಯವಾಗುತ್ತಿದೆ. ಪರಿಷ್ಕೃತ ಬೆಲೆಗಳು ಬ್ರ್ಯಾಂಡ್‌ನ ಅಧಿಕೃತ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ನೀಡಲಾಗಿದೆ. ಹಾಗಾದ್ರೆ ರೆಡ್ಮಿ ಪ್ಯಾಡ್‌ ಬೆಲೆ ಕಡಿತದ ನಂತರದ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಈ ಟ್ಯಾಬ್‌ ಬೆಲೆಯಲ್ಲಿ ಭಾರಿ ಇಳಿಕೆ!

ಭಾರತದಲ್ಲಿ ರೆಡ್ಮಿ ಪ್ಯಾಡ್ ಬೆಲೆ ಎಷ್ಟು ಇಳಿಕೆಯಾಗಿದೆ
ರೆಡ್ಮಿ ಪ್ಯಾಡ್‌ ಭಾರತದಲ್ಲಿ 3GB RAM + 64GB, 4GB RAM + 128GB, ಮತ್ತು 6GB RAM + 128GB ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಿದೆ. ಇವುಗಳಲ್ಲಿ 3GB RAM + 64GB ಸ್ಟೋರೇಜ್‌ ಆಯ್ಕೆಯು ಮೂಲ ಬೆಲೆಗಿಂತ 1,000ರೂ.ಗಳಷ್ಟು ಬೆಲೆ ಕಡಿತವನ್ನು ಪಡೆದುಕೊಂಡಿದೆ. ಆದರಿಂದ ಇದನ್ನು 13,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಆದರೆ ಇದರ 4GB RAM + 128GB ಸ್ಟೋರೇಜ್‌ ಆಯ್ಕೆಯು 3,000ರೂ ಗಳಷ್ಟು ಬೆಲೆ ಕಡಿತವನ್ನು ಪಡೆದುಕೊಂಡಿದೆ. ಆದರಿಂದ ಇದು ನಿಮಗೆ 14,999ರೂ ಬೆಲೆಯಲ್ಲಿ ದೊರೆಯಲಿದೆ.

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಈ ಟ್ಯಾಬ್‌ ಬೆಲೆಯಲ್ಲಿ ಭಾರಿ ಇಳಿಕೆ!

ಇನ್ನು 6GB RAM + 128GB ಮಾದರಿ ಆಯ್ಕೆಯು ಸಹ 3,000ರೂ ಗಳಷ್ಟು ಬೆಲೆ ಕಡಿತವನ್ನು ಪಡೆದಿರುವುದರಿಂದ ಕೇವಲ 16,999ರೂ ಬೆಲೆಯಲ್ಲಿ ದೊರೆಯಲಿದೆ. ಇದಲ್ಲದೆ ಹೆಚ್ಚುವರಿಯಾಗಿ, ಶಿಯೋಮಿ HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು EMI ಮತ್ತು ICICI ನೆಟ್ ಬ್ಯಾಂಕಿಂಗ್ ವಹಿವಾಟುಗಳ ಮೂಲಕ ಖರೀದಿಸಿದರೆ 1,000ರೂ ತ್ವರಿತ ರಿಯಾಯಿತಿಯನ್ನು ನೀಡುತ್ತಿದೆ. ಇದರಿಂದ ಇನ್ನಷ್ಟು ಬೆಲೆ ಕಡಿತವಾಗುವುದು ಪಕ್ಕಾ ಆಗಿದೆ. ಇದಲ್ಲದೆ 4GB ಮತ್ತು 6GB ಆಯ್ಕೆಗಳನ್ನು ಕ್ರೆಡಿಟ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ 1,500ರೂ ತ್ವರಿತ ರಿಯಾಯಿತಿ ಸಿಗಲಿದೆ. ಈ ಕೊಡುಗೆ ಇದೇ ಡಿಸೆಂಬರ್ 31 ರವರೆಗೆ ಮಾನ್ಯವಾಗಿರುತ್ತದೆ.

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಈ ಟ್ಯಾಬ್‌ ಬೆಲೆಯಲ್ಲಿ ಭಾರಿ ಇಳಿಕೆ!

ರೆಡ್ಮಿ ಪ್ಯಾಡ್‌ ಫೀಚರ್ಸ್‌ ಹೇಗಿದೆ?
ರೆಡ್ಮಿ ಪ್ಯಾಡ್‌ 10.6 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದ್ದು, 2000 x 1200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ ಅಡಾಪ್ಟಿವ್ ಸಿಂಕ್ 90Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಇದು 6nm ಆಧಾರಿತ ಮೀಡಿಯಾಟೆಕ್‌ ಹೆಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 12 OSನಲ್ಲಿ ರನ್‌ ಆಗಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಈ ಟ್ಯಾಬ್‌ ಬೆಲೆಯಲ್ಲಿ ಭಾರಿ ಇಳಿಕೆ!

ರೆಡ್ಮಿ ಪ್ಯಾಡ್‌ ಟ್ಯಾಬ್ಲೆಟ್ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದರ ಕ್ಯಾಮೆರಾ ಅಪ್ಲಿಕೇಶನ್ ಇಂಟರ್‌ಬಿಲ್ಟ್‌ ಡಾಕ್ಯುಮೆಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಟ್ಯಾಬ್‌ನಲ್ಲಿ ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಇದು 105 FOV ಅನ್ನು ಹೊಂದಿದ್ದು, ಆಡಿಯೋಗಾಗಿ ಡಾಲ್ಬಿ ಅಟ್ಮಾಸ್ ಅನ್ನು ಸಹ ಬೆಂಬಲಿಸುತ್ತದೆ. ಜೊತೆಗೆ 18W ವೇಗದ ಚಾರ್ಜಿಂಗ್‌ ಬೆಂಬಲಿಸುವ 8,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 21 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ಮತ್ತು ಎಂಟು ದಿನಗಳ ಮ್ಯೂಸಿಕ್‌ ಪ್ಲೇಬ್ಯಾಕ್ ಟೈಂ ಅನ್ನು ನೀಡಲಿದೆ.

Best Mobiles in India

English summary
Redmi Pad price slashed in India: Complete Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+