ದೈತ್ಯ ಶಿಯೋಮಿಯಿಂದ ಹೊಸ ಟ್ಯಾಬ್ ಅನಾವರಣ; 8000mAh ಬ್ಯಾಟರಿ ಬ್ಯಾಕ್‌ಅಪ್
ಟೆಕ್ ವಲಯದ ದೈತ್ಯ ಶಿಯೋಮಿ ಇದೀಗ ಹೊಸ ರೆಡ್ಮಿ ಪ್ಯಾಡ್ SE ಬಿಡುಗಡೆ ಮಾಡಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿದ್ದ ರೆಡ್ಮಿ ಪ್ಯಾಡ್‌ನ ಟೋನ್ ಡೌನ್ ಆವೃತ್ತಿಯಾಗಿದೆ. ಇನ್ನು ಈ ಟ್ಯಾಬ್ ಎಂಟ್ರಿ ಲೆವೆಲ್ ಆಂಡ್ರಾಯ್ಡ್ ಟ್ಯಾಬ್ ಆಗಿದ್ದು ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಟ್ಯಾಬ್ 11 ಇಂಚಿನ ಡಿಸ್‌ಪ್ಲೇಯನ್ನು ಒಳಗೊಂಡಿದೆ.
ಹೌದು, ಶಿಯೋಮಿ ರೆಡ್ಮಿ ಪ್ಯಾಡ್ SE ಟ್ಯಾಬ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಟ್ಯಾಬ್ 90Hz ರಿಫ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 400 ನಿಟ್ಸ್ ಬ್ರೈಟ್‌ನೆಸ್‌ನೊಂದಿಗೆ ಬರಲಿದೆ. ಇನ್ನುಳಿದಂತೆ ಈ ಟ್ಯಾಬ್‌ನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ಪ್ಯಾಡ್ SE ಡಿಸ್‌ಪ್ಲೇ ರಚನೆ
ರೆಡ್ಮಿ ಪ್ಯಾಡ್ SE 11 ಇಂಚಿನ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1920 × 1200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 207 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 400 ನೀಟ್ಸ್ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಇದರೊಂದಿಗೆ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಹಾಗೂ 1500:1 ಕಾಂಟ್ರಾಸ್ಟ್ ಅನುಪಾತವನ್ನು ಒಳಗೊಂಡಿದೆ ಎನ್ನಲಾಗಿದೆ.
ರೆಡ್ಮಿ ಪ್ಯಾಡ್ SE ಪ್ರೊಸೆಸರ್ ಯಾವುದು?
ರೆಡ್ಮಿ ಪ್ಯಾಡ್ SE ಟ್ಯಾಬ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB 6GB / 8GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯೊಂದಿಗೆ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.
ರೆಡ್ಮಿ ಪ್ಯಾಡ್ SE ಕ್ಯಾಮೆರಾ ಸೆಟ್‌ಅಪ್
ರೆಡ್ಮಿ ಪ್ಯಾಡ್ SE 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ರೆಡ್ಮಿ ಪ್ಯಾಡ್ SE ಬ್ಯಾಟರಿ ಮತ್ತು ಇತರೆ
ರೆಡ್ಮಿ ಪ್ಯಾಡ್ SE 8000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C ಪೋರ್ಟ್, ಬ್ಲೂಟೂತ್, ವೈಫೈ, ಡಾಲ್ಬಿ ಅಟ್ಮಾಸ್ ಆಡಿಯೊದೊಂದಿಗೆ ಕ್ವಾಡ್ ಸ್ಪೀಕರ್ ಸೆಟಪ್, ಹೈ-ರೆಸ್ ಆಡಿಯೊದೊಂದಿಗೆ 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಒಳಗೊಂಡಿದೆ. ಇದು ಲ್ಯಾವೆಂಡರ್ ಪರ್ಪಲ್, ಗ್ರ್ಯಾಫೈಟ್ ಗ್ರೇ ಮತ್ತು ಮಿಂಟ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯವಿದೆ.
ರೆಡ್ಮಿ ಪ್ಯಾಡ್ SE ಬೆಲೆ ಮತ್ತು ಲಭ್ಯತೆ
ರೆಡ್ಮಿ ಪ್ಯಾಡ್ SE ಸ್ಮಾರ್ಟ್ ಟ್ಯಾಬ್ ಬೇಸ್ ಮಾಡೆಲ್ ಬೆಲೆ €199 (ಅಂದಾಜು 18,000ರೂ)ಗಳಿಂದ ಪ್ರಾರಂಭವಾಗಲಿದೆ. ಇದರ 6GB + 128GB ಸ್ಟೋರೇಜ್ ಸಾಮರ್ಥ್ಯದ ಬೆಲೆ €229 (ಅಂದಾಜು 20,800ರೂ) ಹಾಗೂ 8GB + 128GB ಸಾಮರ್ಥ್ಯದ ಆಯ್ಕೆಯ ಬೆಲೆ €249 (ಅಂದಾಜು 22,600ರೂ)ಆಗಿದೆ. ಈ ಸ್ಮಾರ್ಟ್ ಟ್ಯಾಬ್ ಭಾರತಕ್ಕೆ ಯಾವಾಗ ಬರಲಿದೆ ಅನ್ನೊದರ ಬಗ್ಗೆ ಇನ್ನು ಕೂಡ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಈ ಟ್ಯಾಬ್ ಭಾರತಕ್ಕೆ ಕೂಡ ಕಾಲಿಡುವ ಸಾಧ್ಯತೆಯಿದೆ ಎಂದು ಟೆಕ್ ವಲಯದಲ್ಲಿ ಹೇಳಲಾಗ್ತಿದೆ.


Click it and Unblock the Notifications








