ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರೆಡ್ಮಿ ವಾಚ್ 3! ಜಬರ್ದಸ್ತ್ ಫೀಚರ್ಸ್!
ರೆಡ್ಮಿ ಕಂಪೆನಿ ಸ್ಮಾರ್ಟ್‌ಫೋನ್ ಮಾತ್ರವಲ್ಲದೆ ಇತರೆ ಭಿನ್ನ ಶ್ರೇಣಿಯ ಸ್ಮಾರ್ಟ್ ಡಿವೈಸ್‌ಗಳನ್ನು ಕೂಡ ಪರಿಚಯಿಸುತ್ತಾ ಬಂದಿದೆ. ಇದರಲ್ಲಿ ಸ್ಮಾರ್ಟ್‌ವಾಚ್‌ಗಳು ಕೂಡ ಸೇರಿವೆ. ಈಗಾಗಲೇ ಮಾರುಕಟ್ಟೆಯಲ್ಲಿ ವಿಭಿನ್ನ ಮಾದರಿಯ ಸ್ಮಾರ್ಟ್‌ವಾಚ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ಹೊಸ ರೆಡ್ಮಿ ವಾಚ್ 3 ಅನ್ನು ಬಿಡುಗಡೆ ಮಾಡಿದೆ.
ಹೌದು, ರೆಡ್ಮಿ ವಾಚ್ 3 ಸ್ಮಾರ್ಟ್‌ವಾಚ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ವಾಚ್ ಬ್ಲೂಟೂತ್ ಕಾಲಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೆ 120ಕ್ಕೂ ಹೆಚ್ಚು ಸ್ಪೋರ್ಟ್ಸ್ ಮೋಡ್‌ಗಳನ್ನು ಒಳಗೊಂಡಿದೆ. ಜೊತೆಗೆ 289mAh ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ವಾಚ್ ಯಾವೆಲ್ಲಾ ಫೀಚರ್ಸ್ ಬೆಂಬಲಿಸಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ವಾಚ್ 3 ಫೀಚರ್ಸ್ ಹೇಗಿದೆ?
ರೆಡ್ಮಿ ವಾಚ್ 3 ಸ್ಮಾರ್ಟ್‌ವಾಚ್ 1.75 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 390×450 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 60Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 600 ನಿಟ್ಸ್ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.
ಈ ಸ್ಮಾರ್ಟ್‌ವಾಚ್ ಬ್ಲೂಟೂತ್ ಕಾಲಿಂಗ್ ಫೀಚರ್ಸ್ ಅನ್ನು ಒಳಗೊಂಡಿದೆ. ಇದರಿಂದ ನಿಮ್ಮ ಸ್ಮಾರ್ಟ್‌ಫೋನ್‌ಗೆ ಬರುವ ಕರೆಗಳನ್ನು ಸ್ವೀಕರಿಸುವ ಮತ್ತು ತಿರಸ್ಕರಿಸುವ ಆಯ್ಕೆಯನ್ನು ನೀಡಲಿದೆ. ಜೊತೆಗೆ ಇದು SOS ಎಮರ್ಜೆನ್ಸಿ ಕಾಲ್ ಫೀಚರ್ಸ್ ಅನ್ನು ಬೆಂಬಲಿಸಲಿದೆ. ಇದರೊಂದಿಗೆ ಈ ಸ್ಮಾರ್ಟ್‌ವಾಚ್ 120ಕ್ಕೂ ಹೆಚ್ಚು ಸ್ಪೋರ್ಟ್ಸ್ ಮೋಡ್‌ಗಳನ್ನು ಒಳಗೊಂಡಿದೆ.

ರೆಡ್ಮಿ ವಾಚ್ 3 ಆರೋಗ್ಯ ಸಂಬಂಧಿತ ಫೀಚರ್ಸ್‌ಗಳಲ್ಲಿ ಅತ್ಯುತ್ತಮ ಆಯ್ಕೆಗಳನ್ನು ಹೊಂದಿದೆ. ಇದು ನಿಮ್ಮ ರಕ್ತದ ಆಮ್ಲಜನಕದ ಲೆವೆಲ್ ಮತ್ತು ಹಾರ್ಟ್‌ಬೀಟ್ ಮಾನಿಟರ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದರೊಂದಿಗೆ ಸ್ಲಿಪ್-ಟ್ರ್ಯಾಕರ್ ಟೆಕ್ನಾಲಜಿಯನ್ನು ಸಹ ಹೊಂದಿದೆ. ಜೊತೆಗೆ 289mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 12 ದಿನಗಳ ಬ್ಯಾಟರಿ ಅವಧಿಯನ್ನು ನೀಡಲಿದೆ ಎಂದು ಹೇಳಲಾಗಿದೆ.
ಇದಲ್ಲದೆ ಈ ಸ್ಮಾರ್ಟ್‌ವಾಚ್ ಹೈ-ಎಂಡ್ ಮಟ್ಟದ GNSS ಚಿಪ್ Beidou, GPS, GLONASS, GALILEO ಮತ್ತು QZSS ಉಪಗ್ರಹ ಸ್ಥಾನೀಕರಣ ವ್ಯವಸ್ಥೆಯನ್ನು ಸಹ ಹೊಂದಿಕೊಳ್ಳಲಿದೆ. ಇದಲ್ಲದೆ ಈ ಸ್ಮಾರ್ಟ್‌ವಾಚ್ ಆಂಡ್ರಾಯ್ಡ್ 6.0 ಅಥವಾ iOS 12 ನಲ್ಲಿ ಕಾರ್ಯನಿರ್ವಹಿಸುವ ಡಿವೈಸ್‌ಗಳೊಂದಿಗೆ ಹೊಂದಿಕೊಳ್ಳಲಿದೆ.

ಬೆಲೆ ಮತ್ತು ಲಭ್ಯತೆ
ರೆಡ್ಮಿ ವಾಚ್ 3 ಪ್ರಸ್ತುತ ಯುರೋಪ್‌ನಲ್ಲಿ ಬಿಡುಗಡೆಯಾಗಿದೆ. ಆದರಿಂದ ಇದರ ಬೆಲೆ EUR 119 (ಅಂದಾಜು 10,600ರೂ)ಆಗಿದೆ. ಇದು ಕಪ್ಪು ಮತ್ತು ಐವರಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಆದರೆ ಈ ಸ್ಮಾರ್ಟ್ ವಾಚ್ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ಇನ್ನು ರೆಡ್ಮಿ ಕಂಪೆನಿ ಭಾರತದಲ್ಲಿ ಹೊಸ ರೆಡ್ಮಿ ನೋಟ್ 12 ಟರ್ಬೋ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಈ ಫೋನ್ ಇದೇ ಮಾರ್ಚ್ 28 ರಂದು ಅಧಿಕೃತವಾಗಿ ಅನಾವರಣ ಆಗುವ ನಿರೀಕ್ಷೆಗಳಿವೆ. ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 7+ ಜೆನ್ 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆಗಳು ಇವೆ. ಇದು ತ್ರಿವಳಿ ಕ್ಯಾಮೆರಾ ರಚನೆ ಪಡೆದಿರಲಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿರಲಿದ್ದು, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇರಲಿದೆ. ಹಾಗೆಯೇ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿರಲಿದೆ. ಇದರೊಂದಿಗೆ 16 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸೌಲಭ್ಯ ಪಡೆದಿರಲಿದೆ. ಜೊತೆಗೆ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್ ಚಾರ್ಜರ್ ಸೌಲಭ್ಯ ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








