ಏರ್‌ಟೆಲ್ VS ವಿ ಟೆಲಿಕಾಂ 299ರೂ. ಪ್ಲ್ಯಾನ್: ಪ್ರಯೋಜನಗಳೆನು?..ಯಾವುದು ಯೋಗ್ಯ?
ಭಾರತೀಯ ಟೆಲಿಕಾಂ ವಲಯದಲ್ಲಿ ಏರ್‌ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರರಿಗೆ ಈಗಾಗಲೇ ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಗಮನ ಸೆಳೆದಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳ ಜೊತೆಗೆ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಆಕರ್ಷಕ ಎನಿಸಿವೆ. ಆ ಪೈಕಿ ಕಡಿಮೆ ದರದಲ್ಲಿ ಬಹುತೇಕ ಬಳಕೆದಾರರು 299ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಮನಸ್ಸು ಮಾಡುತ್ತಾರೆ.

ಹೌದು, ಏರ್‌ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು 299ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಆಕರ್ಷಕ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಈ ಪ್ಲ್ಯಾನ್‌ಗಳಲ್ಲಿ ಕೆಲವು ಭಿನ್ನತೆಗಳನ್ನು ಗಮನಿಸಬಹುದು. ಹಾಗಾದರೇ ಏರ್‌ಟೆಲ್ ಮತ್ತು ವೊಡಾಫೋನ್-ಐಡಿಯಾ (ವಿ ಟೆಲಿಕಾಂ) 299ರೂ. ಪ್ಲ್ಯಾನಿನಲ್ಲಿ ರೀಚಾರ್ಜ್‌ಗೆ ಯಾವುದು ಬೆಸ್ಟ್?..ಈ ಪ್ಲ್ಯಾನ್‌ಗಳ ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವೊಡಾಫೋನ್-ಐಡಿಯಾ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ (ವೊಡಾಫೋನ್-ಐಡಿಯಾ) ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಜೀ5 ಓಟಿಟಿ ಚಂದಾದಾರಿಕೆ, ವೀಲೆಂಟ್ ಡೇಟಾ ರೋಲ್ ಓವರ್, ವಿ ಮೂವಿಸ್ ಹಾಗೂ ಟಿವಿ ಸೌಲಭ್ಯಗಳು ಸಿಗಲಿವೆ.

ಭಾರ್ತಿ ಏರ್‌ಟೆಲ್ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 299ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 30 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಒಟ್ಟಾರೇ 30GB ಡೇಟಾ ಪ್ರಯೋಜನ ಲಭ್ಯ ಮಾಡಿದ್ದು, ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದೆ. ಹೆಚ್ಚುವರಿಯಾಗಿ ಏರ್‌ಟೆಲ್ Wynk Music, ಫ್ರೀ ಹೆಲೋ ಟ್ಯೂನ್ಸ್, ಪ್ರೈಮ್ ವಿಡಿಯೋ ಮೊಬೈಲ್ ಎಡಿಷನ್ ಸೇವೆಯನ್ನು ಪಡೆದಿದೆ.

ರೀಚಾರ್ಜ್‌ಗೆ ಯಾವುದು ಯೋಗ್ಯ?
ಏರ್‌ಟೆಲ್ ಮತ್ತು ವಿ ಟೆಲಿಕಾಂ ಈ ಎರಡು ಕಂಪನಿಗಳು ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಅದಾಗ್ಯೂ ವೊಡಾಫೋನ್-ಐಡಿಯಾ ಪ್ಲ್ಯಾನ್‌ಗಿಂತ ಭಾರ್ತಿ ಏರ್‌ಟೆಲ್ ಯೋಜನೆಯು 2 ದಿನಗಳ ಹೆಚ್ಚಿನ ವ್ಯಾಲಿಡಿಟಿ ಪಡೆದಿದೆ. ಇನ್ನು ಡೇಟಾ ಬಗ್ಗೆ ನೋಡುವುದಾದರೇ ವಿ ಟೆಲಿಕಾಂ ಪ್ರತಿದಿನ 4GB ಡೇಟಾ ನೀಡುತ್ತದೆ. ಏರ್‌ಟೆಲ್ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 30GB ಡೇಟಾ ನೀಡುತ್ತದೆ. ಹೀಗಾಗಿ ಪ್ರತಿದಿನ ಅಧಿಕ ಡೇಟಾ ಅಗತ್ಯ ಇರುವ ಗ್ರಾಹಕರಿಗೆ ವಿ ಟೆಲಿಕಾಂ ಯೋಜನೆ ಸೂಕ್ತ ಎನಿಸಲಿದೆ. ಇನ್ನು ಹೆಚ್ಚಿನ ಡೇಟಾ ಅಗತ್ಯ ಇರದ ಗ್ರಾಹಕರಿಗೆ ಏರ್‌ಟೆಲ್ ಯೋಜನೆ ಆಕರ್ಷಕ ಎನಿಸಲಿದೆ.


Click it and Unblock the Notifications








