ಜಿಯೋ ಮತ್ತು ವಿ 499ರೂ: ಯಾವ ಪ್ಲ್ಯಾನ್ ರೀಚಾರ್ಜ್ ಮಾಡಿಸೋದು ಉತ್ತಮ?
ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು ಬಜೆಟ್ ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಮುಂದಾಗುತ್ತಾರೆ. ಆದರೆ ಜಿಯೋ ಮತ್ತು ವಿ 499ರೂ. ಯೋಜನೆಯಲ್ಲಿ ಯಾವುದು ಉತ್ತಮ.?

ಹೌದು, ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು 499ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ರೀಚಾರ್ಜ್ ಮಾಡಿಸುವ ಗ್ರಾಹಕರು ಮುಖ್ಯವಾಗಿ ಕಡಿಮೆ ಬೆಲೆಗೆ ಹೆಚ್ಚಿನ ಪ್ರಿಯೋಜನ ಪಡೆದಿರುವ ಯೋಜನೆಗಳನ್ನು ಆಯ್ಕೆ ಮಾಡಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಈ ಎರಡು ಯೋಜನೆಗಳು ಬಜೆಟ್ ದರದಲ್ಲಿದ್ದು, ಅಧಿಕ ಸೌಲಭ್ಯಗಳನ್ನು ಒಳಗೊಂಡಿವೆ.

ರಿಲಯನ್ಸ್ ಜಿಯೋ ಹಾಗೂ ವಿ ಟೆಲಿಕಾಂಗಳು ಅಲ್ಪಾವಧಿ ವ್ಯಾಲಿಡಿಟಿಯಿಂದ ದೀರ್ಘಾವಧಿಯ ವ್ಯಾಲಿಡಿಟಿಯ ಹಲವು ಭಿನ್ನ ದರದ ಪ್ರೀಪೇಯ್ಡ್ ಯೋಜನೆಗಳನ್ನು ಒಳಗೊಂಡಿವೆ. ಅವುಗಳ ಪೈಕಿ ಬಹುತೇಕ ಯೋಜನೆಗಳು ಪ್ರತಿದಿನ ಡೇಟಾ ಪ್ರಯೋಜನ ಪಡೆದಿದೆ. ಹಾಗೆಯೇ ಕೆಲವು ಯೋಜನೆಗಳು ಹೆಚ್ಚುವರಿಯಾಗಿ ಡೇಟಾ ಜೊತೆಗೆ ಓಟಿಟಿ ಪ್ರಯೋಜನ ಸಹ ಪಡೆದಿವೆ. ಹಾಗಾದರೇ ಜಿಯೋ ಮತ್ತು ವೊಡಾಫೋನ್ (ವಿ ಟೆಲಿಕಾಂ) 499ರೂ. ಪ್ಲ್ಯಾನಿನಲ್ಲಿ ಯಾವುದು ಯೋಗ್ಯ? ದೈನಂದಿನ ಡೇಟಾ ಎಷ್ಟು?..ಇತರೆ ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ರಿಲಯನ್ಸ್ ಜಿಯೋ 499ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಪಡೆದಿದೆ. ಹಾಗೆಯೇ 6GB ಡೇಟಾ ಸಿಗಲಿದ್ದು, ಪೂರ್ಣ ವ್ಯಾಲಿಡಿಟಿಯ ಅವಧಿಗೆ ಒಟ್ಟಾರೇ 90GB ಡೇಟಾ ಪ್ರಯೋಜನ ಲಭ್ಯವಾಗಲಿದೆ.

ವೊಡಾಫೋನ್ ಐಡಿಯಾ 499ರೂ. ಪ್ರೀಪೇಯ್ಡ್ ಪ್ಲಾನ್
ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಒದಗಿಸಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 105GB ಡೇಟಾ ದೊರೆಯಲಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಹೆಚ್ಚುವರಿಯಾಗಿ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಪಡೆದಿದೆ. ಹಾಗೆಯೇ ವಿ ಟೆಲಿಕಾಂ ಆಪ್ಸ್‌ಗಳು ಸಿಗಲಿವೆ.

ಈ ಎರಡು ಪ್ಲ್ಯಾನ್‌ಗಳಲ್ಲಿ ರೀಚಾರ್ಜ್‌ಗೆ ಯಾವುದು ಯೋಗ್ಯ?
499ರೂ. ಬೆಲೆಗೆ ಜಿಯೋ ಮತ್ತು ವಿ ಟೆಲಿಕಾಂ ಈ ಎರಡು ಕಂಪನಿಗಳು ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಅದಾಗ್ಯೂ ವ್ಯಾಲಿಡಿಟಿಗಿಂತ ಮುಖ್ಯವಾಗಿ ನೀವು ಹೆಚ್ಚಿನ ಡೇಟಾವನ್ನು ಬಯಸುತ್ತಿದ್ದರೇ, ನಿಮಗೆ ಜಿಯೋ ಪ್ಲ್ಯಾನ್ ರೀಚಾರ್ಜ್ ಮಾಡಿಸುವುದು ಉತ್ತಮ ಅನಿಸಲಿದೆ. ಏಕೆಂದರೇ ಈ ಯೋಜನೆಯಲ್ಲಿ ಡೈನಂದಿನ ಡೇಟಾ 3GB ಆಗಿದೆ. ಆದರೆ ವ್ಯಾಲಿಡಿಟಿ ಜಸ್ಟ್ 28 ದಿನ. ಇನ್ನು ನಿಮಗೆ ದೈನಂದಿನ ಡೇಟಾ 1.5GB ಇದ್ದರೇ ಸಾಕು, ಆದರೆ ಹೆಚ್ಚಿನ ವ್ಯಾಲಿಡಿಟಿ ಅಗತ್ಯ ಎನಿಸಿದರೇ, ವಿ ಟೆಲಿಕಾಂ ಪ್ಲ್ಯಾನ್ ಬೆಸ್ಟ್ ಎನಿಸಲಿದೆ. ಏಕೆಂದರೇ ಈ ಯೋಜನೆಯು ಒಟ್ಟು 70 ದಿನಗಳ ವ್ಯಾಲಿಡಿಟಿ ಪಡೆದಿದೆ.


Click it and Unblock the Notifications








