Home
ಸುದ್ದಿಜಾಲ

ಜಿಯೋ ಮತ್ತು ವಿ ಟೆಲಿಕಾಂ 555ರೂ. ಪ್ಲ್ಯಾನ್‌: ರೀಚಾರ್ಜ್‌ಗೆ ಯಾವುದು ಬೆಸ್ಟ್‌?

ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಅವುಗಳಲ್ಲಿ ಪ್ರೀಪೇಯ್ಡ್‌ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳು ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 555ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ರೀಚಾರ್ಜ್‌ಗೆ ಮುಂದಾಗುತ್ತಾರೆ.

ಟೆಲಿಕಾಂ

ಹೌದು, ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು 555ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್‌ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ ಮತ್ತು ವೊಡಾಫೋನ್ (ವಿ ಟೆಲಿಕಾಂ) 555ರೂ. ಪ್ಲ್ಯಾನಿನಲ್ಲಿ ಯಾವುದು ಯೋಗ್ಯ? ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ವೊಡಾಫೋನ್‌ ಟೆಲಿಕಾಂ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವೊಡಾಫೋನ್‌ ಟೆಲಿಕಾಂ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವೊಡಾಫೋನ್‌ ಟೆಲಿಕಾಂನ ಈ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಪ್ರೀಪೇಡ್‌ ಪ್ಲ್ಯಾನ್‌ ಆಗಿದ್ದು, ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡಾಟಾ ಹಾಗೂ 100 ಎಸ್‌ಎಮ್‌ಎಸ್‌ ಪ್ರಯೋಜನಗಳನ್ನು ನೀಡಲಿದೆ. ಹಾಗೆಯೇ ಅನಿಯಮಿತ ಕರೆಗಳ ಸೌಲಭ್ಯವನ್ನು ಪಡೆದಿದ್ದು, ಇದರೊಂದಿಗೆ ವೊಡಾಫೋನ್ ಪ್ಲೇ ಆಪ್‌ನಲ್ಲಿನ ಮನರಂಜನೆಯ ಸೇವೆಗಳ ಸೌಲಭ್ಯ ಸಹ ಒದಗಿಸಲಿದೆ.

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಆಲ್‌-ಇನ್‌-ಒನ್‌ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ರೀಚಾರ್ಜ್‌ಗೆ ಯಾವುದು ಯೋಗ್ಯ?

ರೀಚಾರ್ಜ್‌ಗೆ ಯಾವುದು ಯೋಗ್ಯ?

ಜಿಯೋ ಮತ್ತು ವಿ ಟೆಲಿಕಾಂ ಈ ಎರಡು ಕಂಪನಿಗಳು ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಅದಾಗ್ಯೂ ವ್ಯಾಲಿಡಿಟಿಗಿಂತ ಮುಖ್ಯವಾಗಿ ನೀವು ಹೆಚ್ಚಿನ ಡೇಟಾವನ್ನು ಬಯಸುತ್ತಿದ್ದರೇ, ನಿಮಗೆ ಜಿಯೋ ಉತ್ತಮ ಅನಿಸಲಿದೆ. ಹಾಗೆಯೇ ವ್ಯಾಲಿಡಿಟಿ ಬಗ್ಗೆ ಅಷ್ಟೇನು ಗಮನ ನೀಡದಿದ್ದರೇ ಮತ್ತು ಡೈಲಿ ಡೇಟಾ ಇದ್ದರೇ ಸಾಕು ಎಂದಾದಾರೇ ವಿ ಟೆಲಿಕಾಂ ಯೋಜನೆಯು ಉತ್ತಮ ಎನಿಸಿದೆ.

Best Mobiles in India

English summary
Rs 555 Prepaid Plans From Jio And Vi Compared: Which One Best To Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+