ಶೀಘ್ರದಲ್ಲೇ ಬಜೆಟ್ ಬೆಲೆಯಲ್ಲಿ ಸ್ಯಾಮ್‌ಸಂಗ್‌ನಿಂದ ಹೊಸ ಫೋನ್ ಲಾಂಚ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಭಿನ್ನ ಮಾದರಿಯ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿ ಮುನ್ನಡೆದಿದೆ. ಸಂಸ್ಥೆಯು ಗ್ಯಾಲಕ್ಸಿ A, ಗ್ಯಾಲಕ್ಸಿ M ಹಾಗೂ ಗ್ಯಾಲಕ್ಸಿ F ಸರಣಿಯಲ್ಲಿ ಕೆಲವು ಬಜೆಟ್ ದರದ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಗ್ಯಾಲಕ್ಸಿ A ಸರಣಿಯ ಫೋನ್‌ಗಳಿಗೆ ಡಿಮ್ಯಾಂಡ್ ಹೆಚ್ಚು. ಈ ನಿಟ್ಟಿನಲ್ಲಿ ಸಂಸ್ಥೆಯು ಇದೀಗ ಗ್ಯಾಲಕ್ಸಿ A ಸರಣಿಯಲ್ಲಿ ಹೊಚ್ಚ ಹೊಸದೊಂದು ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡುವ ಸೂಚನೆ ನೀಡಿದ್ದು, ಬರಲಿರುವ ಹೊಸ ಫೋನ್ ಬಜೆಟ್ ಪ್ರೈಸ್ ಟ್ಯಾಗ್ ಹೊಂದಿರಲಿದೆ ಎಂದು ಹೇಳಲಾಗುತ್ತಿದೆ.
ಹೌದು, ಸ್ಯಾಮ್‌ಸಂಗ್ ತನ್ನ ಜನಪ್ರಿಯ ಗ್ಯಾಲಕ್ಸಿ A ಸರಣಿಯಲ್ಲಿ ಹೊಸದಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A06 (Samsung Galaxy A06) ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ನೂತನ ಫೋನ್ ಅನ್ನು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಪ್ರಮಾಣೀಕರಣದಲ್ಲಿ ಗುರುತಿಸಲಾಗಿದ್ದು, ಇದರ BIS ಸರ್ಟಿಫಿಕೇಶನ್ ಸಂಖ್ಯೆಯು/ ಮಾಡೆಲ್ ನಂಬರ್ SM-A065F/DS ಆಗಿದೆ.

ಇನ್ನು ಬರಲಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಫೋನ್ ಡ್ಯುಯಲ್ ಸಿಮ್ ಸ್ಲಾಟ್ ಸೌಲಭ್ಯ ಪಡೆದಿರಲಿರುವ ಬಗ್ಗೆ ವರದಿಯಾಗಿದೆ. ಅಲ್ಲದೇ ಇತ್ತೀಚೆಗೆ Geekbench ಡೇಟಾಬೇಸ್ ಹಾಗೂ ವೈ-ಫೈ ಅಲಯನ್ಸ್ ಪ್ರಮಾಣೀಕರಣದಲ್ಲಿಯೂ ಸಹ ಈ ಫೋನ್ ಅನ್ನು ಗುರುತಿಸಲಾಗಿದೆ. ವೈ-ಫೈ ಅಲಯನ್ಸ್ ಪ್ರಮಾಣೀಕರಣವು ಸ್ಯಾಮ್‌ಸಂಗ್ 2.4GHz ಮತ್ತು 5GHz ವೈ-ಫೈ ರೇಂಜ್‌ನಲ್ಲಿ ಗುರುತಿಸಿಕೊಂಡಿದೆ.
ಹಾಗೆಯೇ ಎಂಟ್ರಿ ಕೊಡಲಿರುವ ಈ ಸ್ಯಾಮ್‌ಸಂಗ್ ಮೊಬೈಲ್ ಸಿಂಗಲ್-ಕೋರ್ ಮತ್ತು ಮಲ್ಟಿ-ಕೋರ್ ಪರೀಕ್ಷೆಗಳಲ್ಲಿ ಕ್ರಮವಾಗಿ 1,644 ಅಂಕಗಳು ಮತ್ತು 5,326 ಅಂಕಗಳನ್ನು ಪಡೆದಿದೆ ಎಂದು Geekbench 4.2 ಪಟ್ಟಿಯು ತಿಳಿಸುತ್ತದೆ. ಈ ಮೊಬೈಲ್ 6GB RAM, 1.8GHz ನ ಬೇಸ್ ವೇಗ ಹಾಗೂ ಆಕ್ಟಾ-ಕೋರ್ SoC ಪ್ರೊಸೆಸರ್ ಸಾಮರ್ಥ್ಯದೊಂದಿಗೆ ಇದು Mali-G52 MP2 GPU ಸಪೋರ್ಟ್ ಸಹ ಪಡೆದಿರಲಿದೆ ಎನ್ನಲಾಗಿದೆ.
ಇನ್ನು ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಚಿಪ್‌ಸೆಟ್ ಪ್ರೊಸೆಸರ್ ಒಳಗೊಂಡಿರುವ ನಿರೀಕ್ಷೆಗಳಿವೆ ಅಲ್ಲದೇ 2.0GHz ನಲ್ಲಿ ಎರಡು ಕಾರ್ಟೆಕ್ಸ್ A75 ಕೋರ್‌ಗಳನ್ನು ಮತ್ತು 1.8GHz ನಲ್ಲಿ ಆರು ಕಾರ್ಟೆಕ್ಸ್ A55 ಕೋರ್‌ಗಳನ್ನು ಪಡೆದಿರಲಿದೆ ಎನ್ನಲಾಗಿದೆ. ಈ ಫೋನ್ ಕುರಿತಾಗಿ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯಲ್ಲಿ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್ ಗಮನ ಸೆಳೆದಿದೆ. ಇನ್ನು ಈ ಫೋನ್ 6.5 ಇಂಚಿನ S-AMOLED ಇನ್ಫಿನಿಟಿ-U ನಾಚ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G99SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದರ 5G ಆವೃತ್ತಿಯು ಡೈಮೆನ್ಸಿಟಿ 6100 ಪ್ಲಸ್ ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಈ ಫೋನ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿರಲಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್, ದ್ವಿತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








