ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್‌ 4 ಖರೀದಿಸಲು ಸಕಾಲ!..ಜಬರ್ದಸ್ತ್‌ ಡಿಸ್ಕೌಂಟ್‌!

|

ಸ್ಯಾಮ್‌ಸಂಗ್ ಸಂಸ್ಥೆಯು ಭಿನ್ನ ಮಾದರಿಯ ಫೋನ್‌ಗಳ ಆಯ್ಕೆ ನೀಡಿದ್ದು, ಅವುಗಳ ಪೈಕಿ ಫ್ಲಿಪ್‌ ಹಾಗೂ ಫೋಲ್ಡ್‌ ಮಾದರಿಗಳು ಸಹ ಆಕರ್ಷಕ ಎನಿಸಿವೆ. ಹಾಗೆಯೇ ಇತ್ತೀಚಿಗೆ ಸ್ಯಾಮ್‌ಸಂಗ್ ಕಂಪನಿಯು ಬಿಡುಗಡೆ ಮಾಡಿರುವ ಗ್ಯಾಲಕ್ಸಿ Z ಫ್ಲಿಪ್‌ 4 (Galaxy Z Flip 4) ಫೋನ್‌ ಈಗ ಭರ್ಜರಿ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ. ಅಂದಗಾಹೆ ಕೊಡುಗೆಯು ಸ್ಯಾಮ್‌ಸಂಗ್‌ನ ಬ್ಲ್ಯಾಕ್ ಫ್ರೈಡೇ ಸೇಲ್‌ನಲ್ಲಿ ಲಭ್ಯವಾಗಲಿದೆ.

 ಗ್ಯಾಲಕ್ಸಿ Z ಫ್ಲಿಪ್‌ 4

ಹೌದು, ಸ್ಯಾಮ್‌ಸಂಗ್ ಕಂಪನಿಯ ಆಯೋಜಿಸಿರುವ ಬ್ಲ್ಯಾಕ್‌ ಫ್ರೈಡೇ ಸೇಲ್‌ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್‌ 4 (Galaxy Z Flip 4) ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ದರದಲ್ಲಿ ಲಭ್ಯವಾಗಲಿದೆ. ಇನ್ನು ಸ್ಯಾಮ್‌ಸಂಗ್ ಬ್ಲ್ಯಾಕ್‌ ಫ್ರೈಡೇ ಸೇಲ್‌ ನವೆಂಬರ್ 24 ರಿಂದ (ಇಂದಿನಿಂದ) ಪ್ರಾರಂಭವಾಗಿದ್ದು, ಇದೇ ನವೆಂಬರ್ 28 ರ ವರೆಗೂ ಚಾಲ್ತಿ ಇರಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್‌ 4

ಈ ಸೇಲ್‌ನಲ್ಲಿ ಗ್ರಾಹಕರು ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್‌ 4 (Galaxy Z Flip 4) ಫೋನ್‌ (128GB) ಅನ್ನು 80,999 ರೂ. ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಕೊಡುಗೆಯು ಎಲ್ಲಾ ಪ್ರಮುಖ ಬ್ಯಾಂಕ್ ಕಾರ್ಡ್‌ಗಳೊಂದಿಗೆ 7000ರೂ ತ್ವರಿತ ಕ್ಯಾಶ್‌ಬ್ಯಾಕ್ ಮತ್ತು ಸ್ಯಾಮ್‌ಸಂಗ್ ಸ್ಮಾರ್ಟ್‌ಕ್ಲಬ್‌ ವೆಲ್‌ಕಮ್‌ ವೋಚರ್‌ನಂತೆ 2000ರೂ. ರಿಯಾಯಿತಿ ಸಿಗಲಿದೆ. (ಮೊದಲ ಬಾರಿಗೆ ಶಾಪ್ ಅಪ್ಲಿಕೇಶನ್ ಬಳಕೆದಾರರಿಗೆ) ಇನ್ನು ಈ ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಹಾಗೂ ಪ್ರೊಸೆಸರ್

ಡಿಸ್‌ಪ್ಲೇ ಹಾಗೂ ಪ್ರೊಸೆಸರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 4 ಸ್ಮಾರ್ಟ್‌ಫೋನ್‌ ಮೇನ್‌ ಡಿಸ್‌ಪ್ಲೇ 6.7 ಇಂಚಿನ ಫಿಲ್‌ HD+ ಡೈನಾಮಿಕ್ ಅಮೋಲೆಡ್‌ ಡಿಸ್‌ಪ್ಲೇ ಆಗಿದೆ. ಇದು 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ಆಗಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಜೊತೆಗೆ 22:9 ರಚನೆಯ ಅನುಪಾತವನ್ನು ಪಡೆದಿದೆ.

ಸ್ಮಾರ್ಟ್‌ಫೋನ್‌

ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 4nm ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ನಲ್ಲಿ OneUI 4.1.1 ಮೂಲಕ ರನ್‌ ಆಗಲಿದೆ. ಹಾಗೆಯೇ ಇದು 8GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ಮತ್ತು ಬ್ಯಾಟರಿ ಬ್ಯಾಕ್‌ಅಪ್‌

ಕ್ಯಾಮೆರಾ ಮತ್ತು ಬ್ಯಾಟರಿ ಬ್ಯಾಕ್‌ಅಪ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಜೊತೆಗೆ f/1.8 ಲೆನ್ಸ್, 83-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 80-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಜೊತೆಗೆ 3,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ

ಮೆಮೊರಿ ಹಾಗೂ ಕಲರ್ ಆಯ್ಕೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್‌ ಭಾರತದಲ್ಲಿ 128 GB ಮತ್ತು 8GB ಹಾಗೂ 256 GB ಮತ್ತು 8GB ಸ್ಟೋರೇಜ್‌ ವೇರಿಯಂಟ್‌ ಮಾದರಿಗಳ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲೂ, ಬೋರಾ ಪರ್ಪಲ್, ಗ್ರ್ಯಾಫೈಟ್ ಮತ್ತು ಪಿಂಕ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Samsung Black Friday Sale: Big Deal on Samsung Galaxy Z Flip 4.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X