ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವ ಪ್ಲ್ಯಾನ್‌ ಇದೆಯಾ?..ಹಾಗಿದ್ರೆ ಈ ಆಫರ್‌ ನಿಮಗಾಗಿ!

|

ಮೊಬೈಲ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಸಂಸ್ಥೆಯ ಫೋನ್‌ಗಳು ಹೆಚ್ಚಿನ ಡಿಮ್ಯಾಂಡ್‌ ಇದೆ. ಇದೀಗ ಸ್ಯಾಮ್‌ಸಂಗ್‌ ಸಂಸ್ಥೆಯು 'ಬ್ಲ್ಯಾಕ್ ಫ್ರೈಡೇ ಸೇಲ್‌' (Black Friday sale) ಅನ್ನು ಘೋಷಿಸಿದೆ. ಈ ಸೇಲ್‌ ನಲ್ಲಿ ಸ್ಯಾಮ್‌ಸಂಗ್‌ ಸಂಸ್ಥೆಯ ಜನಪ್ರಿಯ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಮಾರ್ಟ್ ಟಿವಿಗಳು, ಮಾನಿಟರ್‌ಗಳು, ರೆಫ್ರಿಜರೇಟರ್‌ಗಳು ಸೇರಿದಂತೆ ಇತರೆ ಕೆಲವು ಉತ್ಪನ್ನಗಳು ಆಫರ್‌ನಲ್ಲಿ ದೊರೆಯುತ್ತವೆ.

ಬ್ಲ್ಯಾಕ್ ಫ್ರೈಡೇ ಸೇಲ್‌

ಹೌದು, ಸ್ಯಾಮ್‌ಸಂಗ್‌ ಕಂಪನಿಯು ಬ್ಲ್ಯಾಕ್ ಫ್ರೈಡೇ ಸೇಲ್‌ (Black Friday sale) ಅನ್ನು ಆಯೋಜಿಸುವುದಾಗಿ ಘೋಷಿಸಿದ್ದು, ಈ ಸೇಲ್ ಇದೇ ನವೆಂಬರ್‌ 24 ರಿಂದ ಪ್ರಾರಂಭವಾಗಲಿದೆ. ಆದರೆ ಮಾರಾಟ ಶುರುವಾಗುವ ಮುನ್ನವೇ ಸ್ಯಾಮ್‌ಸಂಗ್‌ ಕೆಲವು ಅತ್ಯುತ್ತಮ ಕೊಡುಗೆಗಳ ಬಗ್ಗೆ ಮಾಹಿತಿ ಹೊರಹಾಕುತ್ತಿದೆ. ಈ ಮೂಲಕ ಗ್ರಾಹಕರಲ್ಲಿ ಭಾರೀ ಕುತೂಹಲ ಹುಟ್ಟುಹಾಕುತ್ತಿದೆ. ಅಂದಹಾಗೆ ಈ ಸೇಲ್‌ ನವೆಂಬರ್ 28 ರ ವರೆಗೂ ಇರಲಿದೆ.

ಗ್ಯಾಲಕ್ಸಿ Z ಫ್ಲಿಪ್ 4

ಸ್ಯಾಮ್‌ಸಂಗ್ ಬ್ಲ್ಯಾಕ್ ಫ್ರೈಡೇ ಸೇಲ್‌ನಲ್ಲಿ ಮುಖ್ಯವಾಗಿ ಸಂಸ್ಥೆಯ ಗ್ಯಾಲಕ್ಸಿ Z ಫೋಲ್ಡ್ 4, ಗ್ಯಾಲಕ್ಸಿ Z ಫ್ಲಿಪ್ 4 ಮತ್ತು ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ ಮಾಡೆಲ್‌ಗಳು ಅಧಿಕ ರಿಯಾಯಿತಿಯಲ್ಲಿ ಲಭ್ಯವಾಗಲಿವೆ. ಹಾಗಾದರೆ ಸ್ಯಾಮ್‌ಸಂಗ್ ಬ್ಲ್ಯಾಕ್ ಫ್ರೈಡೇ ಸೇಲ್ ಆಫರ್‌ಗಳು ಮತ್ತು ಡೀಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 (Galaxy Z Flip 4) ಫೋನ್ 89,999ರೂ. ಬಿಡುಗಡೆ ಬೆಲೆಯಲ್ಲಿ ಸ್ವಲ್ಪ ರಿಯಾಯಿತಿಯನ್ನು ಪಡೆಯಲಿದೆ. ಅದೇ ರೀತಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 3 ಫೋನ ಸುಮಾರು 60,000 ರೂ.ಗಳಲ್ಲಿ ಲಭ್ಯವಾಗುವ ಸಾಧ್ಯತೆಗಳಿವೆ. ಇನ್ನು ಗ್ಯಾಲಕ್ಸಿ Z ಫ್ಲಿಪ್ 4 ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಗ್ಯಾಲಕ್ಸಿ Z ಫ್ಲಿಪ್‌ 3 ಫೋನ್

ಅದೇ ರೀತಿ ಗ್ಯಾಲಕ್ಸಿ Z ಫ್ಲಿಪ್‌ 3 ಫೋನ್ 1,080x2,640 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥದೊಂದಿಗೆ 6.7 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಜೊತೆಗೆ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE

ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE (Samsung Galaxy S21 FE) ಬ್ಲ್ಯಾಕ್ ಫ್ರೈಡೇ ಸೇಲ್ ವೇಳೆ 40,000 ರೂ.ಗಳ ಆಸುಪಾಸಿನಲ್ಲಿ ಲಭ್ಯವಾಗಲಿದೆ. ಇನ್ನು ಈ ಫೋನ್‌ 2340 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದರೊಂದಿಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ ಅನ್ನು ಬ್ಲ್ಯಾಕ್ ಫ್ರೈಡೇ ಸೇಲ್ ವೇಳೆ 60,000 ರೂ.ಗಳ ಒಳಗೆ ಲಭ್ಯವಾಗಲಿದೆ. ಇನ್ನು ಈ ಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

Best Mobiles in India

English summary
Samsung Black Friday Sale: Best Deals on Galaxy S22 and more, sale start on November 24.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X