ಸ್ಯಾಮ್‌ಸಂಗ್ ಗ್ಯಾಲಕ್ಸಿ M ಸರಣಿಯ ಈ ಪೋನ್‌ಗಳಿಗೆ ಈಗ ಭರ್ಜರಿ ಡಿಸ್ಕೌಂಟ್!
ಜನಪ್ರಿಯ ಇ-ಕಾಮರ್ಸ್ ತಾಣ ಅಮೆಜಾನ್ ಮತ್ತು ಸ್ಯಾಮ್‌ಸಂಗ್ ಜಂಟಿಯಾಗಿ ಇದೀಗ ಸ್ಯಾಮ್‌ಸಂಗ್ ಕಾರ್ನಿವಲ್ ಸೇಲ್ ಅನ್ನು ಆಯೋಜಿಸಿವೆ. ಈ ಸೇಲ್ ಮೇಳದಲ್ಲಿ ಸ್ಯಾಮಸಂಗ್ ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದೆ. ಅಷ್ಟೇ ಅಲ್ಲದೇ ಕೊಡುಗೆಯ ಲಿಸ್ಟ್‌ನಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಗ್ಯಾಲಕ್ಸಿ M ಸರಣಿಯ ಹೊಸ ಫೋನ್‌ಗಳಿಗೂ ರಿಯಾಯಿತಿ ತಿಳಿಸಿದೆ.

ಹೌದು, ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತು ಅಧಿಕತ ಸ್ಯಾಮ್‌ಸಂಗ್ ವೆಬ್‌ಸೈಟ್‌ನಲ್ಲಿ 'ಸ್ಯಾಮ್‌ಸಂಗ್ ಕಾರ್ನಿವಲ್ ಸೇಲ್' ಮೇಳ ಸದ್ಯ ಚಾಲ್ತಿ ಇದೆ. ಇಂದು(ಮಾ.10) ಆರಂಭವಾಗಿರುವ ಈ ಸೇಲ್ ಮೇಳವು ಇದೇ ಮಾರ್ಚ್ 12ರಂದು ಮುಕ್ತಾಯವಾಗಲಿದೆ. ಈ ಕೊಡುಗೆಯಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್ ಬಳಕೆದಾರರಿಗೆ ರಿಯಾಯಿತಿ ಸಿಗಲಿದೆ. ಹಾಗೆಯೇ ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ. ಹಾಗಾದರೇ ಸ್ಯಾಮ್‌ಸಂಗ್ ಕಾರ್ನಿವಲ್ ಸೇಲ್' ಮೇಳದಲ್ಲಿ ಆಫರ್‌ನಲ್ಲಿ ಕಾಣಿಸಿಕೊಂಡಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಈ ಫೋನ್ ಈಗ ಆಫರ್‌ನಲ್ಲಿ 13,999ರೂ.ಗೆ ಲಭ್ಯ.

ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್
ಗ್ಯಾಲಕ್ಸಿ ಎಂ31 ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಇನ್‌ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಸ್ಯಾಮ್‌ಸಂಗ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಒಟ್ಟು 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಈ ಫೋನ್ ಈಗ ಆಫರ್‌ನಲ್ಲಿ 15,999ರೂ.ಗೆ ಲಭ್ಯ.

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್
ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ sAMOLED ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ exynos 9611 SoC ಪ್ರೊಸೆಸರ್ ಹೊಂದಿದ್ದು, 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದೆ. ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್, ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಈ ಫೋನ್ ಈಗ ಆಫರ್‌ನಲ್ಲಿ 18,499ರೂ.ಗೆ ಸಿಗಲಿದೆ.

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿದ್ದು, 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಹೊಂದಿದ್ದು, ಒನ್UI ಜೊತೆ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಕ್ವಿಕ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಈ ಫೋನ್ ಈಗ ಆಫರ್‌ನಲ್ಲಿ 22,999ರೂ.ಗೆ ಸಿಗಲಿದೆ.


Click it and Unblock the Notifications








