Home
ಸುದ್ದಿಜಾಲ

ಮತ್ತೆ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ ಫೋಲ್ಡೆಬಲ್ ಫೋನ್‌!

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ Z ಫ್ಲಿಪ್ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ ಹಲವು ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಈಗಾಗಲೇ ಬೆಲೆ ಇಳಿಕೆ ಕಂಡಿದ್ದು, ಗ್ರಾಹಕರನ್ನು ಸೆಳೆದಿತ್ತು. ಇದೀಗ ಸಂಸ್ಥೆಯು ಮತ್ತೆ ಈ ಫೋನ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಿದ್ದು ಗ್ರಾಹಕರನ್ನು ಆಕರ್ಷಿಸಿದೆ.

ಗ್ಯಾಲಕ್ಸಿ

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ ಸ್ಮಾರ್ಟ್‌ಫೋನ್‌ ಮೇಲಿನ ಬೆಲೆಯಲ್ಲಿ ಈಗ ಕಡಿತ ಮಾಡಿದ್ದು, 84999 ರೂ.ಗಳಿಗೆ ಸಿಗಲಿದೆ ಎಂದು ಟ್ವಿಟ್ ಮಾಡಿದೆ. ಈ ಫೋಲ್ಡೆಬಲ್ ಸ್ಮಾರ್ಟ್‌ಫೋನ್ ಮಿರರ್‌ ಬ್ಲ್ಯಾಕ್‌, ಮಿರರ್‌ ಪರ್ಪಲ್ ಹಾಗೂ ಮಿರರ್‌ ಗೋಲ್ಡ್‌ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೇ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಫೋಲ್ಡಬಲ್ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಫೋಲ್ಡಬಲ್ ಸ್ಕ್ರೀನ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಪ್ರಾಥಮಿಕ ಸ್ಕ್ರೀನ್‌ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ನೀವು ಸ್ಮಾರ್ಟ್‌ಫೋನ್ ಅನ್ನು ಬಿಚ್ಚಿದಾಗ ಲಭ್ಯವಾಗುತ್ತದೆ. ಮಡಿಸಿದಾಗ, 300 x 112 ಪಿಕ್ಸೆಲ್‌ಗಳ ರೆಸಲ್ಯೂಶನ್ ಹೊಂದಿರುವ 1.1-ಇಂಚಿನ ಸಣ್ಣ ದ್ವಿತೀಯ ಡಿಸ್‌ಪ್ಲೇಯನ್ನು ಸಹ ಹೊಂದಿದೆ. ಇದರಲ್ಲಿ ನೊಟಿಫೀಕೇಶನ್‌ಗಳನ್ನ ನೋಡುವುದಕ್ಕೆ ಸುಲಭವಾಗಲಿದೆ. ಜೊತೆಗೆ ಇದು ವ್ಯೂಫೈಂಡರ್ ಆಗಿ ಸಹ ಕಾರ್ಯನಿರ್ವಹಿಸುತ್ತದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 855+ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 8GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಎರಡು ಕ್ಯಾಮೆರಾಗಳು ಕೂಡ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿವೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 10 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ ಸ್ಮಾರ್ಟ್‌ಫೋನ್‌ 3,300mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸಲಿದೆ.

Best Mobiles in India

English summary
Samsung Galaxy Z Flip comes with a 6.7-inch full HD show with a 1080×2636 pixel decision.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+