ಸ್ಯಾಮ್‌ಸಂಗ್‌ನಿಂದ ಮತ್ತೊಂದು ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಬಿನ್ನಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಸೈ ಎನಿಸಿಕೊಂಡಿರುವ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ A01 ಕೋರ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿದ್ದು, ಆಂಡ್ರಾಯ್ಡ್ ಗೋ ಆವೃತ್ತಿಯ ಕೊಡುಗೆಯಾಗಿ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ 1GB RAM ಮತ್ತು 16GB ಆಂತರಿಕ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಇದು 1.5GHz ಕ್ವಾಡ್-ಕೋರ್ SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ತನ್ನ ಮತ್ತೊಂದು ಎಂಟ್ರಿ ಲೆವೆಲ್‌ ಗ್ಯಾಲಕ್ಸಿ A01 ಕೋರ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಎಚ್‌ಡಿ + ರೆಸಲ್ಯೂಶನ್ ಹೊಂದಿರುವ 5.3 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಎಲ್ಇಡಿ ಫ್ಲ್ಯಾಷ್ ಹೊಂದಿರುವ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ರಿಯರ್‌ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 3,000mAh ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A01 ಸ್ಮಾರ್ಟ್‌ಫೋನ್‌ 720x1480 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5.3-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ TFT ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ 1.5GHz ನಲ್ಲಿ ಗಡಿಯಾರ ಸಾಮರ್ಥ್ಯದ unknown ಕ್ವಾಡ್-ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ ಗೋ ಆವೃತ್ತಿಯ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 1GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ A01 ಕೋರ್ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದು f/ 2.2 ಅಪರ್ಚರ್, ಆಟೋ ಫೋಕಸ್ ಸಪೋರ್ಟ್ ಮತ್ತು 4x ವರೆಗಿನ ಡಿಜಿಟಲ್ ಜೂಮ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಇದರಲ್ಲಿ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 3,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 17 ಗಂಟೆಗಳ 4G ಟಾಕ್ ಟೈಮ್, 14 ಗಂಟೆಗಳ ಎಲ್‌ಟಿಇ ಅಥವಾ ವೈ-ಫೈ ಇಂಟರ್ನೆಟ್ ಬಳಕೆ, 11 ಗಂಟೆಗಳ ವಿಡಿಯೋ ಪ್ಲೇಬ್ಯಾಕ್ ಮತ್ತು 70 ಗಂಟೆಗಳ ವೀಡಿಯೊವನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಮೈಕ್ರೋ-ಯುಎಸ್‌ಬಿ ಪೋರ್ಟ್, ವೈ-ಫೈ, ಬ್ಲೂಟೂತ್ ವಿ 5, 3.5 ಎಂಎಂ ಆಡಿಯೊ ಜ್ಯಾಕ್, ಜಿಪಿಎಸ್, ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಕ್ಸೆಲೆರೊಮೀಟರ್ ಮತ್ತು proximity sensor ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A01 ಕೋರ್ ಅನ್ನು ಇಂಡೋನೇಷ್ಯಾದಲ್ಲಿ ಬಿಡುಗಡೆ ಮಾಡಲಾಗಿದ್ದು, ಇದರ ಬೆಲೆ ಐಡಿಆರ್ 1,099,000 (ಸುಮಾರು 5,500 ರೂ.) ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್‌ ನೀಲಿ, ಕಪ್ಪು ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Samsung Galaxy A01 Core has quietly launched in Indonesia as an entry-level Android Go edition offering.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X