ಸ್ಯಾಮ್‌ಸಂಗ್‌ನಿಂದ ಬರಲಿದೆ ಗ್ಯಾಲಕ್ಸಿ A01 ಸ್ಮಾರ್ಟ್‌ಫೋನ್‌!

|

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿ ತನ್ನ ಹೊಸ ಬಜೆಟ್ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ A01 ಅನ್ನು ಬಿಡುಗಡೆ ಮಾಡಲಿದ್ದೇವೆ ಎಂದ ಘೊಷಣೆ ಮಾಡಿದೆ. ಈ ಸ್ಮಾರ್ಟ್‌ಫೊನ್‌ ಬಿಡುಗಡೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಂಪೆನಿ ಇನ್ನು ಹೇಳಿಲ್ಲ. ಆದರೆ ಈ ಹೊಸ ಫೋನ್‌ ವಾಟರ್ ಡ್ರಾಪ್-ಶೈಲಿಯ ನಾಚ್ ಮತ್ತು ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಈ ಫೋನ್‌ ಹೊಂದಿರಲಿದೆ ಎಂದು ಕಂಪೆನಿ ತನ್ನ ವೆಬ್‌ಸೈಟ್‌ನಲ್ಲಿ ಹಂಚಿಕೊಂಡಿದೆ.

ಸ್ಮಾರ್ಟ್‌ಫೋನ್‌

ಹೌದು ಸ್ಮಾರ್ಟ್‌ಫೋನ್‌ ದಿಗ್ಗಜ ಕಂಪೆನಿ ಸ್ಯಾಮ್‌ಸಂಗ್‌ ತನ್ನ ಹೊಸ ಸ್ಮಾರ್ಟ್‌ಫೋನ್‌ ಸ್ಯಾಮಸಂಗ್‌ ಗ್ಯಾಲಕ್ಸಿ A01 ಬಗ್ಗೆ ತನ್ನ ವೆಬ್‌ಸೈಟ್‌ನಲ್ಲಿ ಬರೆದುಕೊಂಡಿದ್ದು. ಈ ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಯಾಮ್‌ಸಂಗ್ ಗ್ಯಾಲಕ್ಸಿ A01 3,000MAH ಬ್ಯಾಟರಿಯನ್ನು ಒಳಗೊಂಡಿದ್ದು, ಇದು ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಹಾಗಾದ್ರೆ ಸ್ಯಾಮ್‌ಸಂಗ್‌ ಕಂಪೆನಿ ಹೇಳಿಕೊಂಡಿರುವಂತೆ ಗ್ಯಾಲಕ್ಸಿ A01ಸ್ಮಾರ್ಟ್‌ಫೋನ್‌ ನ ವಿಶೇಷತೆಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ನೋಡಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಈ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ 5.7-ಇಂಚಿನ ಎಚ್‌ಡಿ + ಆಗಿದ್ದು, ಇದು ಇನ್ಫಿನಿಟಿ-ವಿ ಡಿಸ್‌ಪ್ಲೇ ಆಗಿರಲಿದೆ,ಅಲ್ಲದೆ ಈ ಸ್ಮಾರ್ಟ್‌ಫೋನ್‌ ವಾಟರ್ ಡ್ರಾಪ್-ಶೈಲಿಯ ನಾಚ್ ಹೊಂದಿರಲಿದೆ. ಇನ್ನು ವಿಡಿಯೋ ವಿಕ್ಷಣೆಗೆ ಉತ್ತಮವಾಗಿರಲಿದೆ ಎಂದು ಹೇಳಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಸ್ಯಾಮಸಂಗ್‌ ಗ್ಯಾಲಕ್ಸಿ A01 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ (Quad 1.95 GHz + Quad 1.45 GHz)SoC ಪ್ರೊಸೆಸರ್‌ ಹೊಂದಿದ್ದು ಆಂಡ್ರಾಯ್ಡ್‌10ಒಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 6GB RAM ಮತ್ತು 8GB RAM ವೇರಿಯಂಟ್‌ ಆಯ್ಕೆಯಲ್ಲಿ ಸಿಗಲಿದ್ದು, 128GB ಶೇಖರಣಾ ಸಾಮರ್ಥ್ಯವನ್ನ ಹೊಂದಿರಲಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ಇನ್ನಷ್ಟು ವಿಸ್ತರಿಸಬಹುದು ಎಂದು ಕಂಪೆನಿ ಹೇಳಿಕೊಂಡಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೊನ್‌ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರಲಿದ್ದು ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಇರಲಿದ್ದು F/ 2.2 ಲೆನ್ಸ್‌ ಹೊಂದಿರಲಿದೆ , ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದ್ದು F/ 2.4 ಲೆನ್ಸ್‌ ಹೊಂದಿರಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಜೊತೆಗೆ F/ 2.0 ಲೆನ್ಸ್‌ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿA01 3,000 3,000MAH ಬ್ಯಾಟರಿ ಪ್ಯಾಕ್ ಆಪ್‌ ಹೊಂದಿರಲಿದೆ ಎನ್ನಲಾಗಿದ್ದು. ಈ ಸ್ಮಾರ್ಟ್‌ಫೊನ್‌ ಡ್ಯುಯಲ್ ಸಿಮ್ (ನ್ಯಾನೋ + ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ ಮತ್ತು ಎಫ್‌ಎಂ ರೇಡಿಯೊವನ್ನು ಸಹ ಬೆಂಬಲಿಸುತ್ತದೆ. ಸದ್ಯ ಕಪ್ಪು, ನೀಲಿ ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ ಎಂದು ಕಂಪೆನಿ ಹೇಲಿಕೊಂಡಿದ್ದು ,ಈ ಸ್ಮಾರ್ಟ್‌ಫೋನ್‌ ಅನ್ನ ಯಾವಾಗ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿಕೊಂಡಿಲ್ಲ.

Best Mobiles in India

English summary
Samsung Galaxy Note 10 Lite has leaked in renders, showing off the phone in multiple angles. The phone is seen to feature a hole-punch display placed in the top centre of the screen, similar to that of the Galaxy Note 10 and Galaxy Note 10+. The phone comes with the S Pen support that is expected of the company's Galaxy Note series. The phone will most likely be the stripped down variant of the Galaxy Note 10 series launched earlier this year.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X